ಕೋಲ್ಕತಾ : ಬಿಜೆಪಿ ಮತ್ತು ಟಿಎಂಸಿ ಘರ್ಷಣೆ; ಸಂಸದರ ಮೇಲೆ ಕಲ್ಲು ತೂರಾಟ
Team Udayavani, Jan 23, 2022, 1:04 PM IST
ಕೋಲ್ಕತಾ : ಬಾರಕ್‌ಪುರ ಬಿಜೆಪಿ ಸಂಸದ ಅರ್ಜುನ್ ಸಿಂಗ್ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಭಾತ್ಪಾರಾದಲ್ಲಿ ಭಾನುವಾರ ಬಿಜೆಪಿ ಮತ್ತು ಟಿಎಂಸಿ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿದೆ.
ಉತ್ತರ 24 ಪರಗಣ ಜಿಲ್ಲೆಯಲ್ಲಿ ರಾಜಕೀಯ ಅಶಾಂತಿಯ ನೆಲೆಯಲ್ಲಿ ನಡೆದ ಘರ್ಷಣೆಯಲ್ಲಿ ಪೊಲೀಸ್ ವಾಹನ ಸೇರಿದಂತೆ ಎರಡು ಕಾರುಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
”ಇಂದು ಬೆಳಗ್ಗೆ ಕಂಕಿನಾರದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಕಾರ್ಯಕ್ರಮಕ್ಕೆ ಆಗಮಿಸಿದ್ದ ನನ್ನ ಮೇಲೆ ಟಿಎಂಸಿ ಗೂಂಡಾಗಳು ದಾಳಿ ನಡೆಸಿದರು.ಟಿಎಂಸಿಯು, ಬಂಗಾಳದ ಬಿಜೆಪಿ ನಾಯಕರನ್ನು ಕೊಳಕು ತಂತ್ರಗಳಿಂದ ಪ್ರತ್ಯೇಕಿಸಲು ಬಯಸುತ್ತದೆ, ಇದರಿಂದ ಜನರು ತಮ್ಮ ‘ಗುಂಡಾಗಿರಿ’ಗೆ ಹೆದರುತ್ತಾರೆ ಎಂದು ಭಾವಿಸಿದ್ದೀರಾ? ನನ್ನನ್ನು ತಡೆಯಲು ಸಾಧ್ಯವೇ ಇಲ್ಲ” ಎಂದು ಅರ್ಜುನ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಸಂಸದರನ್ನು ರಕ್ಷಿಸಿ ಸುರಕ್ಷಿತವಾಗಿ ಅವರ ನಿವಾಸಕ್ಕೆ ಕಳುಹಿಸಲಾಗಿದೆ. ಘಟನಾ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಜತೆಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಂದು ಜಂಟಿ ಪೊಲೀಸ್ ಆಯುಕ್ತ ಧ್ರುಬಾ ಜ್ಯೋತಿ ಡೇ ತಿಳಿಸಿದ್ದಾರೆ.
ಶನಿವಾರ ರಾತ್ರಿ, ಸಮೀಪದ ಪಾನಿಹಟಿ ಪ್ರದೇಶದ ಬಿಟಿ ರಸ್ತೆಯಲ್ಲಿರುವ ಟಿಎಂಸಿ ಪಕ್ಷದ ಕಚೇರಿಯ ಮೇಲೆ ಕಚ್ಚಾ ಬಾಂಬ್‌ಗಳನ್ನು ಎಸೆಯಲಾಗಿತ್ತು, ಇದು ಎರಡು ಕಡೆಯ ನಡುವೆ ಘರ್ಷಣೆಗೆ ಕಾರಣವಾಯಿತು. ಎರಡೂ ಘಟನೆಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಆರೋಪಿಗಳನ್ನು ಇನ್ನಷ್ಟೇ ಬಂಧಿಸಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.