ತ್ರಿಪುರಾ, ನಾಗಾಲ್ಯಾಂಡ್‌ನಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ: ಎಕ್ಸಿಟ್ ಪೋಲ್ ಸಮೀಕ್ಷೆ
ಮೇಘಾಲಯದಲ್ಲಿ ಹೊಸ ಲೆಕ್ಕಾಚಾರ
Team Udayavani, Feb 27, 2023, 8:53 PM IST
ಗುವಾಹಟಿ: ಬಿಜೆಪಿಯು ಈಶಾನ್ಯ ರಾಜ್ಯಗಳಾದ ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಗೆಲುವು ಸಾಧಿಸಲಿದೆ, ಮೇಘಾಲಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಧಾನಸಭಾ ಚುನಾವಣೆಯ ಬೆನ್ನಲ್ಲೇ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ.
ಒಟ್ಟು ಸಮೀಕ್ಷೆಗಳು ನಾಗಾಲ್ಯಾಂಡ್‌ನಲ್ಲಿ ಮಿತ್ರಪಕ್ಷವಾದ ಎನ್‌ಡಿಪಿಪಿ (ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ) ಯೊಂದಿಗೆ ಬಿಜೆಪಿಯ ಮೈತ್ರಿ ಸರಕಾರವು ಅಧಿಕಾರಕ್ಕೆ ಬರಲಿದೆ ಮತ್ತು ಮೇಘಾಲಯದಲ್ಲಿ ಎರಡರಿಂದ ಕನಿಷ್ಠ ಏಳು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ತೋರಿಸಿದೆ.
ತ್ರಿಪುರಾದಲ್ಲಿ ಬಿಜೆಪಿ ಏಕಾಂಗಿಯಾಗಿ ಬಹುಮತದ ಅಂಕವನ್ನು ದಾಟಿದರೂ ಫಲಿತಾಂಶ 2018 ಕ್ಕೆ ಹೋಲಿಸಿದರೆ ನೀರಸವಾಗಿರಬಹುದು ಎನ್ನಲಾಗಿದೆ.
ಎಕ್ಸಿಟ್ ಪೋಲ್‌ಗಳು ಈಶಾನ್ಯದಲ್ಲಿ ಕಾಂಗ್ರೆಸ್ ತನ್ನ ಅತಿದೊಡ್ಡ ಹಿನ್ನಡೆಯತ್ತ ಸಾಗುತ್ತಿದೆ ಎಂದು ಸೂಚಿಸುತ್ತದೆ, ನಾಗಾಲ್ಯಾಂಡ್‌ನಲ್ಲಿ ಕೇವಲ ಒಂದು ಸ್ಥಾನ ಮತ್ತು ಮೇಘಾಲಯದಲ್ಲಿ ಆರು ಸ್ಥಾನಗಳನ್ನು ಗೆಲ್ಲುವ ಭವಿಷ್ಯ ನುಡಿದಿವೆ. ಕಳೆದ ಬಾರಿ ಅದು ಏಕೈಕ ದೊಡ್ಡ ಪಕ್ಷವಾಗಿತ್ತು.
ಮೂರೂ ರಾಜ್ಯಗಳ ಮತ ಎಣಿಕೆ ಗುರುವಾರ ನಡೆಯಲಿದೆ. 60 ಸ್ಥಾನಗಳ ತ್ರಿಪುರಾ ಅಸೆಂಬ್ಲಿಯಲ್ಲಿ ಬಿಜೆಪಿ 31 ಸ್ಥಾನಗಳನ್ನು ಪಡೆದು ಬಹುಮತದ 31 ಸಂಖ್ಯೆಯನ್ನು ಮುಟ್ಟುತ್ತದೆ ಎಂದು ಮೂರು ಎಕ್ಸಿಟ್ ಪೋಲ್‌ಗಳು ಹೇಳಿವೆ. 30 ವರ್ಷಗಳಿಗೂ ಹೆಚ್ಚು ಕಾಲ ರಾಜ್ಯವನ್ನು ಆಳಿದ ಎಡಪಕ್ಷ ಮತ್ತು ಮೈತ್ರಿಕೂಟ ಕೇವಲ 15 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ,ಈ ಚುನಾವಣೆಗೆ ಅದರ ಅನಿರೀಕ್ಷಿತ ಮಿತ್ರ ಪಕ್ಷವಾದ ಕಾಂಗ್ರೆಸ್ ಲೆಕ್ಕಕ್ಕೆ ಏನನ್ನೂ ಸೇರಿಸುವ ಸಾಧ್ಯತೆಯಿಲ್ಲ ಎಂದಿವೆ.
ಗ್ರೇಟರ್ ಟಿಪ್ರಾಲ್ಯಾಂಡ್‌ನ ಪ್ರಮುಖ ಬೇಡಿಕೆಯೊಂದಿಗೆ ಹಿಂದಿನ ರಾಜಮನೆತನದ ಪ್ರದ್ಯೋತ್ ಕಿಶೋರ್ ದೆಬ್ಬರ್ಮಾ ಅವರು ಹುಟ್ಟುಹಾಕಿದ ಹೊಸ ಪಕ್ಷವಾದ ತಿಪ್ರಾ ಮೋಥಾ 13 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ಸಮೀಕ್ಷೆಗಳು ಹೇಳಿವೆ. ಕಳೆದ ಬಾರಿ, ತ್ರಿಪುರಾದಲ್ಲಿ ಬಿಜೆಪಿ 36 ಸ್ಥಾನಗಳನ್ನು ಗೆದ್ದುಕೊಂಡಿತ್ತು, ಆದರೂ ಪ್ರಾದೇಶಿಕ IPFT (ತ್ರಿಪುರಾದ ಸ್ಥಳೀಯ ಪ್ರಗತಿಶೀಲ ಫ್ರಂಟ್) ನೊಂದಿಗೆ ಮೈತ್ರಿ ಮಾಡಿಕೊಂಡಿತ್ತು.
ಮೇಘಾಲಯದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆಯಾಗಲಿದ್ದು, ಕಾನ್ರಾಡ್ ಸಂಗ್ಮಾ ಅವರ ಎನ್‌ಪಿಪಿ (ನ್ಯಾಷನಲ್ ಪೀಪಲ್ಸ್ ಪಾರ್ಟಿ) 23 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಯಿದೆ. 2018 ರಲ್ಲಿ ರಾಜ್ಯದಲ್ಲಿ ಕೇವಲ ಎರಡು ಸ್ಥಾನಗಳನ್ನು ಗೆದ್ದ ಬಿಜೆಪಿ, ಏಳು ಸ್ಥಾನಗಳೊಂದಿಗೆ ತನ್ನ ಸಂಖ್ಯೆಯನ್ನು ಸ್ವಲ್ಪಮಟ್ಟಿಗೆ ವಿಸ್ತರಿಸಲಿದೆ. ಕಾಂಗ್ರೆಸ್ ಆರು ಸ್ಥಾನಗಳನ್ನು ಗೆಲ್ಲಬಹುದು ಮತ್ತು ಹೊಸದಾಗಿ ಪ್ರವೇಶಿಸಿದ ತೃಣಮೂಲ ಕಾಂಗ್ರೆಸ್ 11 ಸ್ಥಾನಗಳೊಂದಿಗೆ ತನ್ನ ಖಾತೆಯನ್ನು ತೆರೆಯುತ್ತದೆ ಎಂದು ಸಮೀಕ್ಷೆಯೊಂದು ಹೇಳಿದೆ.
2018 ರಲ್ಲಿ, ಬಿಜೆಪಿ ಕೇವಲ ಎರಡು ಸ್ಥಾನಗಳನ್ನು ಗೆದ್ದಿತು, ಆದರೆ ಎನ್‌ಪಿಪಿಯೊಂದಿಗೆ ಸರಕಾರವನ್ನು ರಚಿಸುವಲ್ಲಿ ಯಶಸ್ವಿಯಾಗಿತ್ತು. ಭ್ರಷ್ಟಾಚಾರದ ಆರೋಪದ ಮೇಲೆ ಸಂಗ್ಮಾ ಅವರ ಪಕ್ಷದೊಂದಿಗೆ ಭಿನ್ನಾಭಿಪ್ರಾಯದ ನಂತರ ಈ ಬಾರಿ ಅದು 60 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಸಂಗ್ಮಾ ಅವರ ಪಕ್ಷದೊಂದಿಗಿನ ಮೈತ್ರಿಯನ್ನು ಪುನರುಜ್ಜೀವನಗೊಳಿಸಲು ಬಿಜೆಪಿ ವಿಫಲವಾದರೆ, ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಕಿಂಗ್ ಮೇಕರ್ ಆಗಬಹುದು ಎನ್ನಲಾಗಿದೆ.
ನಾಗಾಲ್ಯಾಂಡ್‌ನಲ್ಲಿ ಬಿಜೆಪಿ-ಎನ್‌ಡಿಪಿಪಿ ಮೈತ್ರಿಕೂಟವು 42 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ, ಎನ್‌ಪಿಎಫ್ ಆರು ಮತ್ತು ಕಾಂಗ್ರೆಸ್ ಒಂದನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಸಮೀಕ್ಷೆಗಳು ಹೇಳಿವೆ. ಮೂರು ರಾಜ್ಯಗಳಲ್ಲಿ ಬಹುಮತಕ್ಕೆ 31 ಸ್ಥಾನಗಳು ಅಗತ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.