ಬಿಜೆಪಿ ಯುವ ಮೋರ್ಚಾ ಉಗ್ರ ಪ್ರತಿಭಟನೆ: ಕೇಜ್ರಿವಾಲ್ ಹತ್ಯೆಗೆ ಯತ್ನ ಎಂದ ಆಪ್

'ದ ಕಾಶ್ಮೀರ್ ಫೈಲ್ಸ್' ಕುರಿತು ಹೇಳಿಕೆ: ಕ್ಷಮೆಗೆ ತೇಜಸ್ವಿ ಸೂರ್ಯ ಪಟ್ಟು

Team Udayavani, Mar 30, 2022, 4:06 PM IST

1-wqwqewq

ನವದೆಹಲಿ : ಬಿಜೆಪಿ ಯುವಮೋರ್ಚಾ ತೇಜಸ್ವಿ ಸೂರ್ಯ ಅವರ ನೇತೃತ್ವದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಎದುರು ನಡೆಸಿದ ಉಗ್ರ ಪ್ರತಿಭಟನೆ ಹೊಸ ಸಂಘರ್ಷಕ್ಕೆ ಕಾರಣವಾಗಿದೆ.

‘ದ ಕಾಶ್ಮೀರ್ ಫೈಲ್ಸ್’ ಚಿತ್ರದ ಕುರಿತಾಗಿ ದೆಹಲಿ ವಿಧಾನ ಸಭೆಯಲ್ಲಿ ತೆರಿಗೆ ವಿನಾಯಿತಿ ವಿಚಾರದಲ್ಲಿ ಲೇವಡಿ ಮಾಡಿ ನಗೆಯಾಡಿದುದನ್ನು ಖಂಡಿಸಿ ಆಪ್ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಮನೆ ಮುಂದೆ ಮಧ್ಯಾಹ್ನ ನಡೆದ ಪ್ರತಿಭಟನೆಯ ವೇಳೆ ಜಮಾವಣೆ ಗೊಂಡ ನೂರಾರು ಬಿಜೆಪಿ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ಕೆಡವಿ ಒಳಗೆ ನುಗ್ಗಿದ್ದಾರೆ. ಗೇಟ್ ಗಳನ್ನು ಮುರಿಯಲಾಗಿದ್ದು, ಸಿಸಿಟಿವಿ ಹಾನಿಗೊಳಿಸಲಾಗಿದೆ. ಗೇಟ್ ಮತ್ತು ಗೋಡೆಗಳಿಗೆ ಕೇಸರಿ ಬಣ್ಣವನ್ನು ಬಳಿಯಲಾಗಿದೆ.

ತೇಜಸ್ವಿ ಸೂರ್ಯ ಆಕ್ರೋಶ

ದೇಶದ ಹಿಂದೂಗಳಿಗೆ ಮಾಡಿದ ಅವಮಾನಕ್ಕೆ ಕೇಜ್ರಿವಾಲ್ ಕ್ಷಮೆ ಯಾಚಿಸಬೇಕು ಮತ್ತು ಅವರು ಕ್ಷಮೆ ಕೇಳುವವರೆಗೂ ಯುವಮೋರ್ಚಾ ಅವರನ್ನು ಬಿಡುವುದಿಲ್ಲ. ದೇಶದ ಹಿಂದೂಗಳನ್ನು ಅವಮಾನಿಸುವ ಕೇಜ್ರಿವಾಲ್ ಅವರಲ್ಲಿ ನಾವು ಇಂದು ಕಾಶ್ಮೀರಿ ಹಿಂದೂಗಳನ್ನು ಕಗ್ಗೊಲೆ ಮಾಡಿದ ಸಮಾಜವಿರೋಧಿಗಳು ಮತ್ತು ಭಯೋತ್ಪಾದಕರನ್ನು ಕಾಣುತ್ತೇವೆ ಎಂದು ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಆಕ್ರೋಶ ಹೊರ ಹಾಕಿದ್ದಾರೆ.

ಕೇಜ್ರಿವಾಲ್ ಕೊಲೆಗೆ ಯತ್ನ

ಎಎಪಿಯ ಗೆಲುವು ಮತ್ತು ಪಂಜಾಬ್‌ನಲ್ಲಿ ಬಿಜೆಪಿಯ ಸೋಲಿನಿಂದಾಗಿ, ಬಿಜೆಪಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲೆ ಮಾಡಲು ಬಯಸಿದೆ. ಬಿಜೆಪಿ ಗೂಂಡಾಗಳನ್ನು ಪೊಲೀಸರು ಉದ್ದೇಶಪೂರ್ವಕವಾಗಿ ಸಿಎಂ ಕೇಜ್ರಿವಾಲ್ ನಿವಾಸಕ್ಕೆ ಕರೆದೊಯ್ದಿದ್ದಾರೆ. ಸಿಎಂ ನಿವಾಸದ ಎದುರಿನ ಸಿಸಿಟಿವಿ ಕ್ಯಾಮರಾ, ತಡೆಗೋಡೆ ಒಡೆದಿದ್ದಾರೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕಿಡಿ ಕಾರಿದ್ದಾರೆ.

ಬಿಜೆಪಿಯವರು ಕೇಜ್ರಿವಾಲ್ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿ ಅವರು ಅವರನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. ಇಂದಿನ ಘಟನೆ ಸಿಎಂ ಹತ್ಯೆಗೆ ಬಿಜೆಪಿಯ ಪೂರ್ವಯೋಜಿತ ಯೋಜನೆ ಎಂದು ಸಿಸೋಡಿಯಾ ಆಕ್ರೋಶ ಹೊರ ಹಾಕಿದ್ದಾರೆ.

ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ ಹೀನಾಯ ಸೋಲಿನಿಂದಾಗಿ ಬಿಜೆಪಿಯ ಸಿಟ್ಟು ಸ್ಪಷ್ಟವಾಗಿ ಗೋಚರಿಸುತ್ತಿದೆ. ಪೊಲೀಸರ ಸಮ್ಮುಖದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆ ಮೇಲಿನ ದಾಳಿ ಹೇಡಿತನದ ಕೃತ್ಯ.ಬಿಜೆಪಿಗೆ ಎಎಪಿ ಮತ್ತು ಅರವಿಂದ್ ಕೇಜ್ರಿವಾಲ್‌ ಮೇಲೆ ಭಯ ಇದೆ ಎಂಬುದು ಈಗ ಸ್ಪಷ್ಟವಾಗಿದೆ ಎಂದು ಪಂಜಾಬ್ ಸಿಎಂ ಭಗವಂತ್ ಮಾನ್ ಟ್ವೀಟ್ ಮಾಡಿದ್ದಾರೆ.

ಆಘಾತಕಾರಿಯಾಗಿದ್ದು,ಬಿಜೆಪಿ ಕಾರ್ಯಕರ್ತರು ದಾಳಿ ನಡೆಸುತ್ತಿದ್ದಾಗ ದೆಹಲಿ ಪೋಲೀಸರು ಏನು ಮಾಡುತ್ತಿದ್ದರು. ಈ ಕೆಲಸಕ್ಕೆ ಅಮಿತ್ ಶಾ ಅವರ ಕಚೇರಿಯಿಂದ ಆದೇಶವಿದೆಯೇ? ಬಿಜೆಪಿ ವಿಧ್ವಂಸಕರನ್ನು ಬೆಂಬಲಿಸುವುದೇ ಎಂದು ಆಪ್ ನಾಯಕರು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.