ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಕೇರಳದ್ದೆಂಬ ಕಾರಣಕ್ಕೆ ತಿರಸ್ಕರಿಸಿಲ್ಲ: ಸಚಿವ ಸುನೀಲ್
ಕಮ್ಯೂನಿಸ್ಟ್ ಪಾರ್ಟಿ ನಾರಾಯಣ ಗುರುಗಳ ಮೂರ್ತಿಯನ್ನು ಭಗ್ನಗೊಳಿಸಿತ್ತು..
Team Udayavani, Jan 19, 2022, 1:36 PM IST
ಬೆಂಗಳೂರು: ಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಕೇರಳ ಕಳುಹಿಸಿದೆ ಎಂಬ ಕಾರಣಕ್ಕೆ ಕೇಂದ್ರ ತಿರಸ್ಕರಿಸಿಲ್ಲ, ಗುರುಗಳ ವಿಷಯದಲ್ಲಿ ಪ್ರಧಾನಿಯವರಿಗೆ ಮತ್ತು ಬಿಜೆಪಿಗೆ ಅತಿ ಹೆಚ್ಚು ಗೌರವವಿದೆ ಎಂದು ಸಚಿವರಾದ ಸುನೀಲ್‍ಕುಮಾರ್ ಅವರು ತಿಳಿಸಿದ್ದಾರೆ.
ಪ್ರಧಾನಿಯಾದ ಬಳಿಕ 2015ರ ಡಿಸೆಂಬರ್ 15ರಂದು ನಾರಾಯಣ ಗುರುಗಳ ಸಂಕಲ್ಪ ಕೇಂದ್ರವಾದ ಶಿವಗಿರಿಗೆ ನರೇಂದ್ರ ಮೋದಿಯವರು ಭೇಟಿ ಕೊಟ್ಟಿದ್ದರು. “ಒಂದು ಕಾಲದಲ್ಲಿ ಅಸ್ಪ್ರಶ್ಯತೆ ತಾಂಡವವಾಡುತ್ತಿದ್ದ ಕೇರಳದಲ್ಲಿ ಮೇಲು-ಕೀಳು, ಜಾತಿ- ಧರ್ಮಗಳ ತಾರತಮ್ಯದ ನೆಲೆವೀಡಾಗಿದ್ದ ನೆಲದಲ್ಲಿ, ನಾರಾಯಣಗುರುಗಳು ತಂದ ಸಾಮಾಜಿಕ ಪರಿವರ್ತನೆಯಿಂದಾಗಿ ಕೇರಳವಿಂದು ಸಮಾನತೆಯ ಸಂದೇಶ ಸಾರುವ ನಾಡಾಗಿದೆ. ನಾರಾಯಣಗುರುಗಳ ಆದರ್ಶವು ಜಗತ್ತಿಗೇ ಬೆಳಕು ನೀಡಬಲ್ಲದು” ಎಂದು ಹೇಳಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರ ಅನಾವರಣ ಮಾಡಿದ್ದರು ಎಂದು ಅವರು ನೆನಪಿಸಿದ್ದಾರೆ.
ಹಿಂದೆ ಯಾವ ಕಮ್ಯೂನಿಸ್ಟ್ ಪಾರ್ಟಿ ನಾರಾಯಣ ಗುರುಗಳ ಮೂರ್ತಿಯನ್ನು ಭಗ್ನಗೊಳಿಸಿತ್ತೋ ಅವರೇ ಈಗ ಅವರು ರಾಜಕೀಯ ಕಾರಣಕ್ಕಾಗಿ ನಾರಾಯಣ ಗುರುಗಳ ಬಗ್ಗೆ ಮಾತನಾಡುತ್ತಿದ್ದಾರೆ. ರಾಜ್ಯದ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ಪೂರ್ಣ ವಿಷಯ ತಿಳಿದು ಹೇಳಿಕೆ ನೀಡಬೇಕು. ಅದನ್ನು ಬಿಟ್ಟು ಬೆಂಕಿ ಹಚ್ಚುವ ಕೆಲಸ ಮಾಡುವುದು ಸರಿಯಲ್ಲ. ರಾಜ್ಯದಲ್ಲಿರುವ ನಾರಾಯಣ ಗುರುಗಳ ಭಕ್ತರ ಮತ್ತು ಅನುಯಾಯಿಗಳಿಗೆ ತಪ್ಪು ಸಂದೇಶ ನೀಡಲಾಗಿದೆ ಎಂದು ಅವರು ಆಕ್ಷೇಪಿಸಿದ್ದಾರೆ.
ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಮೊದಲೇ ಇದರ ವಿರುದ್ಧ ತಪ್ಪು ಮಾಹಿತಿ ನೀಡಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲು ರಕ್ಷಣಾ ಸಚಿವಾಲಯದ ಪರಿಣತರ ಸಮಿತಿ ಇದೆ. ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ತಿರಸ್ಕರಿಸಿ ಶಂಕರಾಚಾರ್ಯರ ಸ್ತಬ್ಧಚಿತ್ರವನ್ನು ಕಳುಹಿಸುವಂತೆ ಕೇಂದ್ರ ಸರ್ಕಾರ ಹೇಳಿದೆ ಎಂಬುದು ಶುದ್ಧ ಸುಳ್ಳು. ಸಿದ್ದರಾಮಯ್ಯ ಅವರು ಕೊಳಕು ರಾಜಕೀಯ ಷಡ್ಯಂತ್ರವನ್ನು ಮಾಡುತ್ತಿದ್ದಾರೆ ಎಂದಿದ್ದಾರೆ.
ಕೇಂದ್ರ ಸರಕಾರವು ಶಂಕರಾಚಾರ್ಯರ ಸ್ತಬ್ಧಚಿತ್ರ ಕಳುಹಿಸಲು ಸೂಚಿಸಿದೆ ಎನ್ನುವುದು ಶುದ್ಧ ಸುಳ್ಳು. ಈ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಆಕ್ಷೇಪಿಸಿದ್ದಾರೆ.
ಗಣರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸುವ ಸ್ತಬ್ಧಚಿತ್ರ ಮೆರವಣಿಗೆಗೆ ಕೆಲವು ಅಲಿಖಿತ ನಿಯಮಗಳಿವೆ. ಕೇರಳ ಸರಕಾರವು ಈಗಾಗಲೇ ಒಮ್ಮೆ ಸ್ತಬ್ಧಚಿತ್ರ ನೀಡಿದೆ. ಇತರ ರಾಜ್ಯಗಳಿಗೆ ಅವಕಾಶ ನೀಡಬೇಕು. ಅಲ್ಲದೆ, ಸ್ತಬ್ಧಚಿತ್ರದ ಕೆಲವು ಮಾರ್ಗಸೂಚಿಗಳನ್ನು ಪಾಲಿಸಿಲ್ಲ. ಈ ಕಾರಣಕ್ಕೆ ಕೇರಳದ ಸ್ತಬ್ಧಚಿತ್ರ ಬೇಡ ಎಂದು ತಿಳಿಸಿದ್ದಾಗಿ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.