ಬೊಮ್ಮಾಯಿ ಬಸವ ಚಿಂತಕರಲ್ಲ, ಮೋಸಗಾರ ಸಿಎಂ : ರೇವುನಾಯಕ ಬೆಳಮಗಿ
Team Udayavani, Feb 8, 2023, 4:29 PM IST
ವಾಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಸವಣ್ಣನ ಚಿಂತನೆ ಹೊಂದಿದ್ದಾರೆ. ಎಲ್ಲರಿಗೂ ನ್ಯಾಯ ಕೊಟ್ಟು ಸಮಾನತೆ ಕೊಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರು ಇತರರಂತೆ ಮೋಸಗಾರ ಸಿಎಂ ಆಗಿದ್ದಾರೆ ಎಂದು ಮಾಜಿ ಸಚಿವ ರೇವುನಾಯಕ ಬೆಳಮಗಿ ಆರೋಪಿಸಿದರು.
ಚಿತ್ತಾಪುರ ಪಟ್ಟಣದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷದಿಂದ ಏರ್ಪಡಿಸಲಾಗಿದ್ದ ಪ್ರಜಾಧ್ವನಿ ಕಾರ್ಯಕ್ರಮದ ಬಹಿರಂಗ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ತಾಂಡಾಗಳಲ್ಲಿ ವಾಸಿಸುವ ಬಂಜಾರಾ ಸಮುದಾಯದ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ನಾಟಕ ಇತ್ತೀಚೆಗೆ ಸೇಡಂ ಪಟ್ಟಣದಲ್ಲಿ ಬಿಜೆಪಿ ಮಾಡಿತು. ನೂರಾರು ವರ್ಷಗಳಿಂದ ತಾಂಡಾಗಳಲ್ಲಿ ನಮ್ಮ ಲಂಬಾಣಿ ಜನ ಬದುಕುತ್ತಿದ್ದಾರೆ. ಪೂರ್ವಜರ ಆಸ್ತಿಯನ್ನು ಹೊಂದಿದ್ದಾರೆ. ಇಂಥಹ ಸಮುದಾಯಕ್ಕೆ ಪ್ರಧಾನಿ ಮೋದಿ ಮೂಲಕ ಹಕ್ಕು ಪತ್ರ ಕೊಡಿಸಿದ್ದು ಹಾಸ್ಯಾಸ್ಪದವಾಗಿದೆ ಎಂದರು.
ನಮ್ಮ ಜನಗಳು ಸ್ವಂತ ಕಟ್ಟಿಕೊಂಡ ಮನೆಗಳಿಗೆ ಹಕ್ಕು ಪತ್ರ ವಿತರಿಸಿದ್ದು ಮಹಾನಾಟಕ ಎಂದು ಆಕ್ರೋಶ ವ್ಯಕ್ತಪಡಿಸಿದರು. ಚುನಾವಣೆ ದೃಷ್ಠಿಯಲ್ಲಿ ಇಟ್ಟುಕೊಂಡು ಬಿಜೆಪಿ ಬಂಜಾರಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ನಾನು ಶಾಸಕನಾಗಿ ಮಂತ್ರಿಯಾದಾಗ ಉತ್ತಮ ಆಡಳಿತ ನೀಡಿದ್ದೆ. ಭ್ರಷ್ಟಾಚಾರ ಮಾಡಲಿಲ್ಲ, ಕಮಿಷನ್ ಕೇಳಲಿಲ್ಲ, ಜನರಿಗೆ ಮೋಸ ಮಾಡಲಿಲ್ಲ, ಸುಳ್ಳು ಹೇಳಲಿಲ್ಲ. ಆದರೂ ಬಿಜೆಪಿ ನಾಯಕರು ನನಗೆ ಟಿಕೆಟ್ ಕಟ್ ಮಾಡುವ ಮೂಲಕ ಮೋಸ ಮಾಡಿದರು ಎಂದು ನೋವು ಹೇಳಿಕೊಂಡ ಬೆಳಮಗಿ, ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಕಲ್ಯಾಣ ಕರ್ನಾಟಕ ಭಾಗಕ್ಕೆ 371 (ಜೆ) ಕಲಂ ಜಾರಿಗೆ ತರುವ ಮೂಲಕ ಈ ಭಾಗದ ಯುವಜನತೆಗೆ ಉದ್ಯೋಗ ಹಾಗೂ ಉನ್ನತ ಶಿಕ್ಷಣ ಪಡೆಯಲು ಸಹಕಾರ ಮಾಡಿದ್ದಾರೆ. ಖರ್ಗೆ ಕೊಡುಗೆ ಹೇಳಲು ದಿನವೇ ಬೇಕಾಗುತ್ತದೆ ಎಂದರು.
ಮಾಜಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಬಾಬುರಾವ ಚವ್ಹಾಣ, ಶಾಸಕ ಪ್ರಿಯಾಂಕ್ ಖರ್ಗೆ, ಎಂ.ವೈ.ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಮಹೆಮೂದ್ ಸಾಹೇಬ, ನಾಗರೆಡ್ಡಿಗೌಡ ಪಾಟೀಲ ಕರದಾಳ, ಮಾಪಣ್ಣ ಗಂಜಿಗೇರಿ, ಶಂಭುಲಿಂಗ ಗುಂಡಗುರ್ತಿ, ವೀರಣ್ಣಗೌಡ ಪರಸರೆಡ್ಡಿ, ಶ್ರೀನಿವಾಸ ಸಗರ ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.