ಕೆಟ್ಟಿರುವ ವೆಂಟಿಲೇಟರ್ ಗಳ ರಿಪೇರಿಗೆ ಮುಂದಾದ ಬಾಷ್ ಕಂಪನಿ : ಡಿಸಿಎಂ
Team Udayavani, May 29, 2021, 8:45 PM IST
ಬೆಂಗಳೂರು: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಕೆಟ್ಟು ನಿಂತಿರುವ ವೆಂಟಿಲೇಟರ್ʼಗಳನ್ನು ಉಚಿತವಾಗಿ ರಿಪೇರಿ ಮಾಡಿಕೊಡಲು ಬಾಷ್ ಕಂಪನಿ ಮುಂದೆ ಬಂದಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರದಂದು ಬಾಷ್ ಉಪಾಧ್ಯಕ್ಷ ರಮೇಶ ಸಾಲಿಗ್ರಾಮ ಅವರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದ ನಂತರ ಈ ವಿಷಯ ತಿಳಿಸಿದ ಅವರು, ಆ ಕಂಪನಿಯೇ ಸ್ವ ಇಚ್ಛೆಯಿಂದ ಮುಂದೆ ಬಂದು ವೆಂಟಿಲೇಟರ್ ರಿಪೇರಿ ಮಾಡಿಕೊಡುವುದಾಗಿ ಹೇಳಿದೆ. ಈ ಕಾರಣಕ್ಕೆ ಬಾಷ್ ಕಂಪನಿಯನ್ನು ಶ್ಲಾಘಿಸುವುದಾಗಿ ಹೇಳಿದರು.
ಸರಕಾರಿ ಆಸ್ಪತ್ರೆಗಳಲ್ಲಿ ಇರುವ ಅನೇಕ ವೆಂಟಿಲೇಟರ್ʼಗಳು ಕೆಟ್ಟಿವೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಕೂಡ ಬಂದಿವೆ. ಹೀಗಾಗಿ ಸಿಎಸ್ʼಆರ್ ನೆರವಿನಿಂದ ವೆಂಟಿಲೇಟರ್ ರಿಪೇರಿ ಮಾಡಿಕೊಡಲಾಗುವುದು ಎಂದು ರಮೇಶ್ ಭರವಸೆ ನೀಡಿದರು.
ಇದನ್ನೂ ಓದಿ :10 ದಿನಗಳಲ್ಲಿ ರೈತರಿಗೆ 565 ಕೋಟಿ ರೂ. ಬಾಕಿ ಪಾವತಿ : ಎಂ.ಟಿ.ಬಿ.ನಾಗರಾಜ್
ಬಾಷ್ ನಿರ್ಧಾರ ಸ್ವಾಗತಾರ್ಹ. ವೆಂಟಿಲೇಟರ್ ಗಳು ಎಷ್ಟು, ಎಲ್ಲಿ ಕೆಟ್ಟಿವೆ ಎಂಬುದನ್ನು ಪತ್ತೆ ಮಾಡಿ ನಂತರ ಕಂಪನಿಗೆ ವಹಿಸಲಾಗವುದು ಎಂದು ಉಪ ಮುಖ್ಯಮಂತ್ರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.