ಬೊಮ್ಮಾಯಿ ಸಿಎಂ ಆಗಲು ಮಾಣಿಕ ಪ್ರಭುಗಳ ಚಮತ್ಕಾರವೆ ಕಾರಣ
Team Udayavani, Oct 2, 2021, 4:54 PM IST
ಹುಮನಾಬಾದ್ : ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಲು ಮಾಣಿಕನಗರದ ಮಾಣಿಕಪ್ರಭುಗಳ ಕೃಪೆ ಹೆಚ್ಚಿದೆ ಎಂದು ಮಾಣಿಕ ನಗರ ಸಂಸ್ಥಾನದ ಪೀಠಾಧಿಪತಿಗಳಾದ ಡಾ| ಜ್ಞಾನರಾಜ ಮಾಣಿಕ ಪ್ರಭುಗಳು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ್ ಅವರು ಮಾಣಿಕನಗರದ ಮಾಣಿಕಪ್ರಭುಗಳ ದರ್ಶನ ಪಡೆದ ನಂತರ ಡಾ| ಜ್ಞಾನರಾಜ ಮಾಣಿಕ ಪ್ರಭುಗಳನ್ನು ಭೇಟಿಮಾಡಿದ ಸಂದರ್ಭದಲ್ಲಿ ಮಾತನಾಡಿ, ‘ಬಸವಕಲ್ಯಾಣ ಉಪ ಚುನಾವಣೆ ಸಂದರ್ಭದಲ್ಲಿ ಅವರು 15 ದಿನಗಳ ಕಾಲ ಮಾಣಿಕಪ್ರಭುಗಳ ವಸತಿ ನಿಲಯದಲ್ಲಿ ವಾಸ್ತವ್ಯ ಮಾಡಿದ್ದರು. ಬೆಳಿಗ್ಗೆ ದೇವಸ್ಥಾನದ ಎದುರಿನಿಂದ ವಾಯುವಿಹಾರಕ್ಕೆ ತೆರಳುತ್ತಿದ್ದರು. ಮಾಣಿಕಪ್ರ ಭುಗಳ ಸಂಜೀವಿನಿ ಸಮಾಧಿ ದರ್ಶನ ಪಡೆದವರು ಅನೇಕರು ಉನ್ನತ ಸ್ಥಾನಗಳಿಗೆ ಹೋಗಿರುವುದು ಉದಾಹರಣೆಗಳು ಇವೆ. ಅದೇ ರೀತಿ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರು ದಿಢೀರನೆ ಮುಖ್ಯಮಂತ್ರಿಗಳಾಗಿದ್ದು, ಇಲ್ಲಿನ ಶ್ರೀಗಳ ಚಮತ್ಕಾರವೆ ಕಾರಣ’ ಎಂದರು.
ಮುಖ್ಯಮಂತ್ರಿಗಳು ಭೇಟಿ ನೀಡಲಿ
‘ಮಾಣಿಕಪ್ರಭು ಸಂಸ್ಥಾನದ ಅಡಿಯಲ್ಲಿ ನಡೆಯುತಿರುವ ದಿ| ಮಾಣಿಕ ಪಬ್ಲಿಕ್ ಸ್ಕೂಲ್ ಫೆಬ್ರವರಿ 1ರಂದು 50ನೇ ವರ್ಷಾಚರಣೆ ಆಚರಿಸಿಕೊಳ್ಳುತ್ತಿದ್ದು, ಅದ್ದೂರಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳನ್ನು ಕರೆ ತರುವ ಕಾರ್ಯ ಇಲ್ಲಿನ ರಾಜಕೀಯ ಮುಖಂಡರು ಮಾಡಬೇಕು. ವಿಶೇಷವಾಗಿ ಸಚಿವ ಪ್ರಭು ಚೌಹಾಣ್ ಅವರು ಮುಖ್ಯಮಂತ್ರಿಗಳನ್ನು ಕರೆ ತರುವ ಉಸ್ತುವಾರಿ ವಹಿಸಿಕೊಳ್ಳಬೇಕು’ ಎಂದರು. ಇದಕ್ಕೆ ಸಚಿವ ಪ್ರಭು ಚೌಹಾಣ್ ಮುಖ್ಯಮಂತ್ರಿಗಳನ್ನು ಭೇಟಿಮಾಡಿ ಮಾಣಿಕನಗರಕ್ಕೆ ಕರೆತರುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್, ಬಿಎಸ್‌ಎಸ್‌ಕೆ ಅಧ್ಯಕ್ಷ ಸುಭಾಷ್ ಕಲ್ಲೂರ್, ಯುವ ಮುಖಂಡ ಡಾ| ಸಿದಲ್ಲಿಂಗಪ್ಪಾ ಪಾಟೀಲ್ , ಹಿರಿಯ ಮುಖಂಡ ಪದ್ಮಾಕರ್ ಪಾಟೀಲ್ , ಬಸವರಾಜ ಆರ್ಯ, ಸೋಮನಾಥ ಪಾಟೀಲ್ ಸೇರಿದಂತೆ ಅನೇಕ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.