ಭಾವುಕರಾಗಿಯೇ ಭಾಷಣ ಆರಂಭಿಸಿದ ಬಿ ಎಸ್ ವೈ ..!
ಮೋದಿ ಮತ್ತೆ ಲೋಕ ಸಭೆ ಚುನಾವಣೆಯಲ್ಲಿ ಗೆದ್ದು ಬರಲಿ : ಬಿ ಎಸ್ ವೈ ಶುಭ ಹಾರೈಕೆ
Team Udayavani, Jul 26, 2021, 11:49 AM IST
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ವಿಚಾರದ ನಡುವೆ ರಾಜ್ಯ ಬಿಜೆಪಿ ಸರ್ಕಾರ ಎಂದು ಎರಡನೇ ವರ್ಷದ ಸಂಭ್ರಮಾಚರಣೆ ಮಾಡಿಕೊಂಡಿದೆ.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ, ಶಿಕಾರಿಪುರಿಂದ ಬಿಜೆಪಿಯೊಂದಿಗೆ ನಾನು ಬಂದಿದ್ದೇನೆ. ಶಿಕಾರಿಪುರದಲ್ಲಿ ಸಂಘದ ಪ್ರಚಾರಕನಾಗಿ ಕಾರ್ಯ ನಿರ್ವಹಿಸಿ, ಚುನಾವಣೆಯಲ್ಲಿ ಗೆದ್ದು, ಘಟಕದ ಅಧ್ಯಕ್ಷನಾಗಿ, ವಿಧಾನ ಸಭಾ ವಿಪಕ್ಷ ನಾಯಕನಾಗಿ, ಮುಖ್ಯಮಂತ್ರಿಯಾಗಿ ಪಕ್ಷದ ಬೇರೆ ಬೇರೆ ಹುದ್ದೆಗಳಲ್ಲಿ ಕೆಲಸ ಮಾಡಿ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ ಎಂಬ ತೃಪ್ತಿ ನನಗಿದೆ ಎಂದು ಬಿ ಎಸ್ ವೈ ಭಾವುಕರಾಗಿ ನುಡಿದಿದ್ದಾರೆ.
ಶಿಕಾರಿಪುರದ ಜನ ನನ್ನನ್ನು ಏಳು ಬಾರಿ ಆಯ್ಕೆ ಮಾಡಿದ್ದಾರೆ. ರಾಷ್ಟ್ರೀಯ ನಾಯಕರು ನನ್ನನ್ನು ಬೆಂಬಲಿಸಿದ್ದಾರೆ. ಬಿಜೆಪಿ ನೀಡಿದ ಸ್ಥಾನಕ್ಕೆ, ಅವಕಾಶಕ್ಕೆ ನಾನು ಎಂದಿಗೂ ಋಣಿಯಾಗಿರುತ್ತೇನೆ ಎಂದು ಅವರು ಹೇಳಿದ್ದಾರೆ.
ಮೋದಿ ಮತ್ತೆ ಲೋಕ ಸಭೆ ಚುನಾವಣೆಯಲ್ಲಿ ಗೆದ್ದು ಬರಲಿ, ದೇಶವನ್ನು ವಿಶ್ವ ಮಟ್ಟದಲ್ಲಿ ತೆಗೆದುಕೊಂಡು ಹೋಗುವ ಶಕ್ತಿ ಅವರಿಗೆ ಒಲಿಯಲಿ ಎಂದು ಅವರು ಶುಭ ಹಾರೈಸಿದ್ದಾರೆ.
ಇನ್ನು, ಕಾರ್ಗಿಲ್ ವಿಜಯ್ ದಿವಸ್ ಆಚರಣೆಯ ಶುಭಾಶಯವನ್ನು ತಿಳಿಸಿದ್ದಲ್ಲದೇ, ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಯೋಧರ ಶ್ರಮಕ್ಕೆ ಪ್ರಣಾಮಗಳನ್ನು ತಿಳಿಸಿದ್ದಾರೆ.
ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾಗವಹಿಸುತ್ತಿರುವ ಕರ್ನಾಟಕದ ಕ್ರೀಡಾಳುಗಳಿಗೆ ಹಾಗೂ ದೇಶದ ಕ್ರೀಡಾಳುಗಳಿಗೆ ಶುಭಾಶಯ ತಿಳಿಸಿದ್ದಾರೆ.
ಇದನ್ನೂ ಓದಿ : ಕನ್ನಡದ ಹಿರಿಯ ನಟಿ ‘ಅಭಿನಯ ಶಾರದೆ’ ಜಯಂತಿ ಇನ್ನಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.