ಬಜೆಟ್ 2023: ಏನಿದು ಕೃತಕ ಬಂಡೆ ಸಾಲುಗಳ ಸ್ಥಾಪನೆ-ಮೀನುಗಾರರ ರಕ್ಷಣೆಗಾಗಿ ಹಲವು ಯೋಜನೆ ಘೋಷಣೆ


Team Udayavani, Feb 17, 2023, 12:47 PM IST

ಬಜೆಟ್ 2023: ಏನಿದು ಕೃತಕ ಬಂಡೆ ಸಾಲುಗಳ ಸ್ಥಾಪನೆ-ಮೀನುಗಾರರ ರಕ್ಷಣೆಗಾಗಿ ಹಲವು ಯೋಜನೆ ಘೋಷಣೆ

ಬೆಂಗಳೂರು: 2022-23ನೇ ಸಾಲಿನಲ್ಲಿ ಕರ್ನಾಟಕ ರಾಜ್ಯವನ್ನು ಅತ್ಯುತ್ತಮ ಕರಾವಳಿ ರಾಜ್ಯವೆಂದು ಗುರುತಿಸಿ ಕೇಂದ್ರ ಸರ್ಕಾರವು ಘೋಷಿಸಿದ್ದು, ಕಳೆದ ಸಾಲಿನಲ್ಲಿ 10.73 ಲಕ್ಷ ಮೆಟ್ರಿಕ್ ಟನ್ ಮೀನು ಉತ್ಪಾದನೆಯನ್ನು ಮಾಡಿ ದೇಶದಲ್ಲಿ ರಾಜ್ಯವು 3ನೇ ಸ್ಥಾನ ಪಡೆದಿರುವುದಾಗಿ ಸಿಎಂ ಬೊಮ್ಮಾಯಿ ಶುಕ್ರವಾರ (ಫೆ.17) ಮಂಡಿಸಿದ 2023-24ನೇ ಸಾಲಿನ ಬಜೆಟ್ ಮಂಡನೆಯಲ್ಲಿ ತಿಳಿಸಿದ್ದಾರೆ.

ಮೀನುಗಾರರಿಗೆ ಸಿಕ್ಕಿದ್ದೇನು?

*ಮೀನುಗಾರರಿಗೆ ನೆರವಾಗಲು 62 FFPOಗಳ ಸ್ಥಾಪನೆ ಹಾಗೂ 12,175 ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆಗೆ ಕ್ರಮ ವಹಿಸಲಾಗಿದೆ.

*ಸಾಂಪ್ರದಾಯಿಕ ಮೀನುಗಾರರ ಜೀವನೋಪಾಯವನ್ನು ಉತ್ತಪ ಪಡಿಸಲು ಕರಾವಳಿ ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಕೃತಕ ಬಂಡೆ ಸಾಲುಗಳನ್ನು (Artificial Reef) ಸ್ಥಾಪಿಸಲಾಗುವುದು.

*ಉತ್ತಮ ತಳಿಯ ಬಲಿತ ಬಿತ್ತನೆ ಮೀನು ಮರಿಗಳ ದಾಸ್ತಾನು ಪ್ರೋತ್ಸಾಹಿಸಲು 20 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.

*ಉತ್ತರ ಕರ್ನಾಟಕ ಭಾಗದಲ್ಲಿ ಮೀನು ಕೃಷಿಯನ್ನು ಉತ್ತೇಜಿಸಲು ಹಾವೇರಿ ಜಿಲ್ಲೆಯಲ್ಲಿ ಹೊಸದಾಗಿ ಮೀನುಮರಿ ಉತ್ಪಾದನಾ ಮತ್ತು ಪಾಲನಾ ಕೇಂದ್ರವನ್ನು ಸ್ಥಾಪಿಸಲಾಗುವುದು.

*ಸಾರ್ವಜನಿಕರಿಗೆ ಗುಣಮಟ್ಟದ ಮೀನು ಉತ್ಪನ್ನಗಳನ್ನು ಪೂರೈಸಲು ಪರಿಸರ ಸ್ನೇಹಿ ತ್ರಿಚಕ್ರ ಮೀನು ಮಾರಾಟ ವಾಹನಗಳನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಒದಗಿಸಲಾಗುವುದು.

*ಮೀನುಗಾರರ ಹಾಗೂ ಅವರ ದೋಣಿಗಳ ಸುರಕ್ಷತೆಗಾಗಿ 17 ಕೋಟಿ ರೂ.ಗಳ ಅನುದಾನದಲ್ಲಿ ಇಸ್ರೋ ಅಭಿವೃದ್ಧಿಪಡಿಸಿರುವ ಜಿಪಿಎಸ್ ಸಂವಹನ ವ್ಯವಸ್ಥೆಯನ್ನು ಎಲ್ಲಾ ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಲ್ಲಿ ಅಳವಡಿಸಲಾಗುವುದು. ಇದರಿಂದ ಆಳ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ ದೋಣಿಗಳನ್ನು ಪತ್ತೆ ಹಚ್ಚಲು ಅನುಕೂಲವಾಗಲಿದೆ.

*ಮೀನುಗಾರರಿಗೆ ವಸತಿ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಿರುವ ಸರ್ಕಾರ ಕಳೆದ ವರ್ಷ ವಸತಿ ರಹಿತ ಮೀನುಗಾರರಿಗೆ 5,000 ಮನೆಗಳನ್ನು ನಿರ್ಮಿಸಲು ಕ್ರಮ ಕೈಗೊಂಡಿದೆ. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯನ್ನು 10,000 ವಸತಿರಹಿತ ಮೀನುಗಾರರಿಗೆ ವಿಸ್ತರಿಸಲಾಗುವುದು.

*ಸೀಮೆಎಣ್ಣೆ ಬಳಕೆಯಿಂದ ಉಂಟಾಗುವ ಪರಿಸರ ಮಾಲಿನ್ಯ ಮತ್ತು ಅದರ ಬೆಲೆಯ ಏರಿಳಿತದಿಂದ ದೋಣಿಗಾರರಿಗೆ ಉಂಟಾಗುವ ಆರ್ಥಿಕ ಸಂಕಷ್ಟವನ್ನು ತಪ್ಪಿಸಲು ಮುಂದಿನ 2 ವರ್ಷಗಳಲ್ಲಿ ಎಲ್ಲಾ ಸೀಮೆಎಣ್ಣೆ ಆಧಾರಿತ ದೋಣಿಗಳಲ್ಲಿ ಪೆಟ್ರೋಲ್/ಡೀಸೆಲ್ ಆಧಾರಿತ ಮೋಟಾರ್ ಇಂಜಿನ್ ಅಳವಡಿಸಲು ತಲಾ 50 ಸಾವಿರ ರೂ.ನಂತೆ ಸಹಾಯಧನ ನೀಡಲಾಗುವುದು. ಇದಕ್ಕಾಗಿ ಪ್ರಸಕ್ತ ವರ್ಷದಲ್ಲಿ 40 ಕೋಟಿ ರೂ. ಮೀಸಲಿಡಲಾಗುವುದು. ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಮುಂದಿನ 2 ವರ್ಷಗಳ ಅವಧಿಗೆ ಸೀಮೆಎಣ್ಣೆ ಸಹಾಯಧನ ಮುಂದುವರಿಸಲಾಗುವುದು ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.

*ಮೀನುಗಾರರ ದೋಣಿಗಳಿಗೆ ರಿಯಾಯ್ತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು ಸದ್ಯದ 1.5 ಲಕ್ಷ ಕಿಲೋ ಲೀಟರ್ ಗಳಿಂದ 2 ಲಕ್ಷ ಕಿಲೋ ಲೀಟರ್ ಗಳವರೆಗೆ ಹೆಚ್ಚಿಸಲಾಗುವುದು. ಇದರಿಂದ ಮೀನುಗಾರರಿಗೆ ರಾಜ್ಯ ಸರ್ಕಾರದಿಂದ 250 ಕೋಟಿ ರೂ.ಗಳ ನೆರವಾಗಲಿದೆ.

* ಮೀನುಗಾರರಿಗೆ ನೀಡುತ್ತಿರುವ ಸೀಮೆಎಣ್ಣೆ ಸಹಾಯಧನದ ಪ್ರಕ್ರಿಯೆಯನ್ನು ಸರಳೀಕರಿಸಿ ಪ್ರಸಕ್ತ ಸಾಲಿನಿಂದ ಡಿಬಿಟಿ ಮುಖಾಂತರ ನೇರವಾಗಿ ಮೀನುಗಾರರ ಖಾತೆಗೆ ಜಮೆ ಮಾಡಲಾಗುವುದು.

*ಆಳಸಮುದ್ರ ಮೀನುಗಾರಿಕೆಯನ್ನು ಇನ್ನಷ್ಟು ಉತ್ತೇಜಿಸಲು 100 ಆಳ ಸಮುದ್ರ ಮೀನುಗಾರಿಕೆ ಬೋಟ್ ಗಳಿಗೆ (Deep Ses Fishing boats) ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಂಯೋಜಿಸಿ ಮತ್ಸ್ಯ ಸಿರಿ ಎಂಬ ವಿಶೇಷ ಯೋಜನೆಯನ್ನು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ರೂಪಿಸಲಾಗಿದೆ. ಆಯ್ಕೆಯಾದ ಎಲ್ಲಾ ಫಲಾನುಭವಿಗಳಿಗೆ ಕಾರ್ಯಾದೇಶ ನೀಡಲಾಗಿದ್ದು, ಬೋಟ್ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆತಿದೆ.

*ಸಿಗಡಿ ಉತ್ಪನ್ನಗಳ ರಫ್ತು ಪ್ರೋತ್ಸಾಹಿಸಲು ಕೇಂದ್ರ ಆಯವ್ಯಯದಲ್ಲಿ ರಫ್ತು ಸುಂಕವನ್ನು ಕಡಿಮೆ ಮಾಡಲಾಗಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸಿಗಡಿ ಕೃಷಿ ಕ್ಲಸ್ಟರ್ ಗಳನ್ನು ಸ್ಥಾಪಿಸಲಾಗುವುದು.

*ರಾಜ್ಯದ 8 ಮೀನುಗಾರಿಕೆ ಬಂದರುಗಳ ನ್ಯಾವಿಗೇಷನ್ ಚಾನೆಲ್ ಗಳಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಟೆಂಡರ್ ಕರೆಯಲಾಗಿದೆ. ಇದರಿಂದ ಮೀನುಗಾರಿಕೆ ದೋಣಿಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಲಿದೆ.

*ರಾಜ್ಯದಲ್ಲಿ ಮೀನಿನ ರಫ್ತು ಮತ್ತು ಮೌಲ್ಯವರ್ಧನೆಗಾಗಿ ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಸೀ ಫುಡ್ ಪಾರ್ಕ್ ಅನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.

ಟಾಪ್ ನ್ಯೂಸ್

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.