ನಾಳೆಯಿಂದ ಬಜೆಟ್ ಅಧಿವೇಶನ : ಸಿ.ಡಿ. ಬಾಂಬ್, ಮೀಸಲಾತಿ ಸದ್ದಿನ ನಿರೀಕ್ಷೆ
Team Udayavani, Mar 3, 2021, 7:00 AM IST
ಬೆಂಗಳೂರು: ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನ ಮಾ. 4ರಿಂದ ಆರಂಭವಾಗಲಿದ್ದು, ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ. ವಿವಾದ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಮೀಸಲಾತಿ ಹೋರಾಟ ಮತ್ತಿತರ ವಿಚಾರ ಸದ್ದು ಮಾಡುವ ನಿರೀಕ್ಷೆಯಿದೆ.
ಅಧಿವೇಶನ ಆರಂಭ ವಾಗಲು ಎರಡು ದಿನ ಇರು ವಾಗಲೇ “ಸಿ.ಡಿ. ಸ್ಫೋಟ’ ನಡೆದಿದ್ದು, ಇದನ್ನು ಅಸ್ತ್ರ ವಾಗಿರಿಸಿಕೊಂಡು ವಿಪಕ್ಷಗಳು ಸರಕಾರ ವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಯತ್ನಿಸಬಹುದು.
ಅಧಿವೇಶನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗುರುವಾರ ಬೆಳಗ್ಗೆ ಶಾಸಕಾಂಗ ಪಕ್ಷದ ಸಭೆ ನಡೆಸಿ ಸರಕಾರದ ವಿರುದ್ಧ ಮುಗಿಬೀಳುವ ವಿಚಾರದಲ್ಲಿ ಕಾರ್ಯತಂತ್ರ ರೂಪಿಸಲಿದೆ. ಜೆಡಿಎಸ್ ಕೂಡ ಗುರುವಾರ ಅಥವಾ ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ನಡೆಸುವ ಸಾಧ್ಯತೆಯಿದೆ.
ವಿಪಕ್ಷಗಳಿಗೆ ತಿರುಗೇಟು ನೀಡುವ ಸಂಬಂಧ ಬಿಜೆಪಿಯೂ ಸಜ್ಜಾಗುತ್ತಿದೆ.
19 ದಿನ ಕಲಾಪ
ಅಧಿವೇಶನ ಕುರಿತು ಮಂಗಳವಾರ ಮಾಹಿತಿ ನೀಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾ. 4ರಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಮೊದಲ 2 ದಿನ ಒಂದು ದೇಶ ಒಂದು ಚುನಾವಣೆ ಕುರಿತು ಚರ್ಚೆ ನಡೆಯಲಿದೆ. ಮಾ. 8ರಂದು ಬಜೆಟ್ ಮಂಡನೆಯಾಗಲಿದ್ದು, ಅನಂತರ ಮಾ. 31ರ ವರೆಗೆ ಬಜೆಟ್ ಮೇಲಿನ ಚರ್ಚೆ, ಸರಕಾರದ ಉತ್ತರ, ಪ್ರಶ್ನೋತ್ತರ ಕಲಾಪಗಳು ಇರಲಿವೆ ಎಂದಿದ್ದಾರೆ.
ಲೇವಾದೇವಿ ತಿದ್ದುಪಡಿ ಕಾಯ್ದೆ ಸೇರಿ ಮೂರು ಮಸೂದೆಗಳು ಮಂಡನೆ ಯಾಗಲಿವೆ. ಒಟ್ಟು 19 ದಿನ ಕಲಾಪ ನಡೆಯಲಿದೆ ಎಂದು ತಿಳಿಸಿದರು.
ಕೊರೊನಾ ಸಂಪೂರ್ಣ ನಿವಾರಣೆಯಾಗಿಲ್ಲ. ಇದನ್ನು ಗಮನದಲ್ಲಿ ಇರಿಸಿಕೊಂಡೇ ಅಧಿವೇಶನ ನಡೆಸಬೇಕಾಗಿದೆ. ಆರೋಗ್ಯ ಸಮಸ್ಯೆ ಇರುವ ಶಾಸಕರು ಅಧಿವೇಶನಕ್ಕೆ ಬರುವುದು ಬೇಡ. ಅಧಿಕಾರಿ- ಸಿಬಂದಿ ಈ ಬಗ್ಗೆ ಎಚ್ಚರ ವಹಿಸಬೇಕು.ಅಧಿವೇಶನಕ್ಕೆ ಬಂದಾಗ ಆರೋಗ್ಯ ಸಮಸ್ಯೆ ಎದುರಾದರೆ ತಪಾಸಣೆ ಮತ್ತು ತುರ್ತು ಚಿಕಿತ್ಸೆಗೆ ವ್ಯವಸ್ಥೆ ಇರಲಿದೆ.
– ವಿಶ್ವೇಶ್ವರ ಹೆಗಡೆ ಕಾಗೇರಿ, ಸ್ಪೀಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.