ಕಾರ್ಮಿಕನನ್ನು ಸುಟ್ಟು ಹಾಕಿ ಕೊಲೆ- ವಿದ್ಯುತ್ ಸ್ಪರ್ಶವೆಂದು ಬಿಂಬಿಸಲು ಯತ್ನ
Team Udayavani, Jul 9, 2023, 5:53 AM IST
ಮಂಗಳೂರು: ಕಾರ್ಮಿಕನನ್ನು ಸುಟ್ಟು ಕೊಲೆಗೈದ ಘಟನೆ ನಗರದ ಮುಳಿಹಿತ್ಲುವಿನಲ್ಲಿ ಶನಿವಾರ ಸಂಭವಿಸಿದೆ.
ಗಜ್ಞಾನ್ ಯಾನೆ ಜಗು ಕೊಲೆಯಾದವನು. ಮುಳಿಹಿತ್ಲು ಜಂಕ್ಷನ್ನಲ್ಲಿ ಇರುವ ಜನರಲ್ ಸ್ಟೋರ್ನ ಮಾಲಕ ತೌಸಿಫ್ ಹುಸೈನ್ (32)ಬಂಧಿತ ಆರೋಪಿ.
ವಿದ್ಯುತ್ ಸ್ಪರ್ಶವೆಂದು ನಾಟಕ
ಮೃತ ಗಜ್ಞಾನ್ ಆರೋಪಿ ತೌಸಿಫ್ನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಶನಿವಾರ ಬೆಳಗ್ಗೆ ಕ್ಷುಲ್ಲಕ ಕಾರಣಕ್ಕೆ ಗಜ್ಞಾನ್ನನ್ನು ಬೆಂಕಿ ಹಚ್ಚಿ ಕೊಲೆ ಮಾಡಿದ್ದ.
ತಪ್ಪಿಸಿಕೊಳ್ಳುವ ಉದ್ದೇಶದಿಂದ ಅಂಗಡಿಯ ಸುತ್ತಮುತ್ತಲಿನ ಸಾರ್ವಜನಿಕರಿಗೆ ವಿದ್ಯುತ್ ಸ್ಪರ್ಶವಾಗಿರುವುದಾಗಿ ಮಧ್ಯಾಹ್ನ ಸುಮಾರು 1.30ಕ್ಕೆ ತಿಳಿಸಿದ್ದ. ಗಾಯಗೊಂಡ ಗಜ್ಞಾನನನ್ನು ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆತನನ್ನು ಪರೀಕ್ಷಿಸಿದ ವೈದ್ಯಾಧಿಕಾರಿ ಮೃತಪಟ್ಟಿರುವುದಾಗಿ ತಿಳಿಸಿದ್ದರು. ಅನಂತರದಲ್ಲಿ ಮಂಗಳೂರು ದಕ್ಷಿಣ ಪೊಲೀಸರು ತನಿಖೆಯನ್ನು ಆರಂಭಿಸಿ ಪರಿಸರದ ಸಾರ್ವಜನಿಕರನ್ನು ವಿಚಾರಿಸಿದಾಗ ಸಾಕ್ಷ್ಯಗಳು ಲಭ್ಯವಾಗಿದ್ದು ಇದೊಂದು ಕೊಲೆ ಪ್ರಕರಣವೆಂದು ದೃಢಪಟ್ಟಿದ್ದು ಆರೋಪಿ ತೌಸಿಫ್ ಹುಸೈನ್ನನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.