ಬುರುಡೆ ಬೊಮ್ಮಾಯಿ..! : ಬಿಜೆಪಿಗೆ ಸಿದ್ದರಾಮಯ್ಯ ಟ್ವೀಟಾಸ್ತ್ರದ ತಿರುಗೇಟು
Team Udayavani, Oct 23, 2021, 7:56 PM IST
ಬೆಂಗಳೂರು : ಬುರುಡೆ ರಾಮಯ್ಯ ಎಂದು ಟ್ವೀಟ್ ಮಾಡಿ ರಾಜ್ಯದ ಪ್ರತಿಯೊಬ್ಬ ಪ್ರಜೆಯ ತಲೆಯ ಮೇಲೂ 44 ಸಾವಿರಕ್ಕೂ ಅಧಿಕ ಸಾಲದ ಹೊರೆ ಹೇರಿದ್ದೀರಿ ಎಂದು ಟ್ವೀಟ್ ಮಾಡಿದ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಅವರು ಶನಿವಾರ ”ಬುರುಡೆ ಬೊಮ್ಮಾಯಿ” ಎನ್ನುವ ಟ್ಯಾಗ್ ಬಳಸಿಕೊಂಡು ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಅವರು ಮಾಡಿರುವ ಸರಣಿ ಟ್ವೀಟ್ ಗಳು ಹೀಗಿವೆ
”ಬಿಜೆಪಿ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ ಈಗಿನ ಸಾಲ ರೂ.4,57,899 ಕೋಟಿ. 2020-21 ರಲ್ಲಿಯೇ ಮಾಡಿರುವ ಸಾಲ ರೂ. 69,000 ಕೋಟಿ.ಕಳೆದ 4 ವರ್ಷಗಳಲ್ಲಿ ರಾಜ್ಯ ಸರ್ಕಾರ ರೂ.2,14,479 ಕೋಟಿ ಹೆಚ್ಚು ಸಾಲಮಾಡಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾದ 3 ವರ್ಷಗಳಲ್ಲಿ ಸುಮಾರು ರೂ.1,90,000 ಕೋಟಿ ಸಾಲ ಮಾಡಿದ್ದಾರೆ”
”ಈಗ ಪ್ರತಿ ವರ್ಷ ಸಾಲ ಮಾಡುವ ಪ್ರಮಾಣ ರೂ. 72,000 ಕೋಟಿಗೆ ತಲುಪಲಿದೆ. ಕಳೆದ ವರ್ಷ ರೂ.69 ಸಾವಿರ ಕೋಟಿ ಸಾಲ ಮಾಡಿದರೂ ಕೊರೊನಾ ನಿರ್ವಹಣೆಗೆ ಖರ್ಚು ಮಾಡಿದ್ದು 5,400 ಕೋಟಿ ರೂ.ಗಳು ಮಾತ್ರ ಎಂದು ಹೇಳಿದ್ದೀರಿ. ಹಾಗಾದರೆ ಉಳಿದ ಹಣ ಎಲ್ಲಿಗೆ ಹೋಯಿತು” ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಪ್ರತಿ ಪ್ರಜೆಯ ಮೇಲೆ 44 ಸಾವಿರಕ್ಕೂ ಅಧಿಕ ಸಾಲದ ಹೊರೆ!:’ಬುರುಡೆರಾಮಯ್ಯ’ ಎಂದ ಬಿಜೆಪಿ
”ಜಿ.ಎಸ್.ಡಿ.ಪಿ ಯಲ್ಲಿ ಶೇಕಡಾವಾರು ಸಾಲದ ಪ್ರಮಾಣ ನಮ್ಮ ಸರ್ಕಾರದ ಅವಧಿಯಲ್ಲಿ 17 ರಿಂದ 20 ರ ಒಳಗೆ ಇತ್ತು. ಇದು ದೇಶದಲ್ಲಿಯೇ ಅತ್ಯುತ್ತಮ ನಿರ್ವಹಣೆಯಾಗಿತ್ತು. ಆದರೆ ಈಗ ಅದು 26.9 ರಷ್ಟಾಗಿದೆ. ನಿಯಮಗಳ ಪ್ರಕಾರ ಇದು 25% ಮೀರುವಂತಿಲ್ಲ.ಸಾಲಕ್ಕಾಗಿ ನಿಯಮಗಳನ್ನೇ ತಿದ್ದಿದವರು ನೀವಲ್ಲವೇ” ಎಂದು ಪ್ರಶ್ನಿಸಿದ್ದಾರೆ.
”2013 ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದ ಜಿ.ಎಸ್.ಡಿ.ಪಿ ಕೇವಲ 6,01,582 ಕೋಟಿ ಇತ್ತು. ನಾನು ಅಧಿಕಾರದಿಂದ ಇಳಿಯುವಾಗ ಅದು ರೂ.14,08,585 ಕೋಟಿಗೆ ಏರಿಕೆಯಾಗಿತ್ತು.’ನಾವು 2012-13 ರಲ್ಲಿ ಅಧಿಕಾರಕ್ಕೆ ಬಂದಾಗ ಇದ್ದ ಸಾಲ ರೂ. 1,21,000 ಕೋಟಿ. 2017-18 ರಲ್ಲಿ ನಮ್ಮ ಸರ್ಕಾರದ ಕೊನೆ ಬಜೆಟ್ ವೇಳೆ ಇದ್ದ ಸಾಲ ರೂ.2,42,420 ಕೋಟಿ”. ಎಂದು ವಿವರಗಳನ್ನು ನೀಡಿದ್ದಾರೆ.
”ಬಿಜೆಪಿ ಸರ್ಕಾರದ ಅವಧಿಯಲ್ಲಿನ ಸಾಲದ ಪ್ರಮಾಣ ಹಿಂದಿನ ಸರ್ಕಾರದ ಅವಧಿಗೆ ಹೋಲಿಸಿದರೆ ಒಟ್ಟಾರೆ ಶೇ. 94.18 ರಷ್ಟು ಏರಿಕೆಯಾಗಿತ್ತು. ನಮ್ಮ ಸರ್ಕಾರದ ಅವಧಿಯಲ್ಲಿ 2013-18 ರವರೆಗೆ ಏರಿಕೆಯಾಗಿದ್ದು ಶೇಕಡಾ 78 ರಷ್ಟು ಮಾತ್ರ.”
”ಕಳೆದ ಎರಡೂಕಾಲು ವರ್ಷಗಳ ರಾಜ್ಯ ಬಿಜೆಪಿ ಸರ್ಕಾರದ ಮತ್ತು ಏಳು ವರ್ಷಗಳ ನರೇಂದ್ರ ಮೋದಿ ಸರ್ಕಾರದ ವೈಫಲ್ಯಗಳು ಜನರನ್ನು ಭ್ರಮನಿರಸನಗೊಳಿಸಿದೆ. 2014 ರಲ್ಲಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ನೀಡಿದ್ದ ಯಾವುದೇ ಭರವಸೆಯನ್ನು ಈಡೇರಿಸಿಲ್ಲ”.
”4ನೇ ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ ರಾಜ್ಯಕ್ಕೆ 38,000 ಕೋಟಿ ರೂಪಾಯಿ ತೆರಿಗೆ ಪಾಲು ಬರುತ್ತಿತ್ತು. ಈಗದು 20,000 ಕೋಟಿ ರೂಪಾಯಿಗೆ ಬಂದು ನಿಂತಿದೆ. ಕೇಂದ್ರದ ಸಹಾಯಧನ, ಜಿ.ಎಸ್.ಟಿ ಪರಿಹಾರದ ಹಣ ಇವೆಲ್ಲಾ ಕಡಿಮೆಯಾಗಿ ರಾಜ್ಯಕ್ಕೆ ಕನಿಷ್ಟ ರೂ.40,000 ಕೋಟಿ ನಷ್ಟವಾಗ್ತಿದೆ”. ಎಂದು ಎಲ್ಲಾ ಟ್ವೀಟ್ ಅಂತ್ಯದಲ್ಲಿ ಬುರುಡೆ ಬೊಮ್ಮಾಯಿ ಟ್ಯಾಗ್ ಮಾಡುವ ಮೂಲಕ ಭರ್ಜರಿ ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.