ಸಚಿವಾಕಾಂಕ್ಷಿಗಳು ಮತ್ತೆ ಸದ್ದು ಮಾಡುವುದು ನಿಶ್ಚಿತ: ಸಂಪುಟಕ್ಕೆ ಸರ್ಜರಿ ಪಕ್ಕಾ?
Team Udayavani, Mar 5, 2022, 11:31 AM IST
ಬೆಂಗಳೂರು : ಪಂಚರಾಜ್ಯಗಳ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಚಿವ ಸಂಪುಟ ವಿಸ್ತರಣೆ ತಲೆಬಿಸಿ ಆರಂಭವಾಗಲಿದೆ. ಇಷ್ಟು ದಿನಗಳ ಕಾಲ ಮೌನವಾಗಿದ್ದ ಸಚಿವಾಕಾಂಕ್ಷಿಗಳ ತಾಳ್ಮೆಯ ಕಟ್ಟೆ ಮಾರ್ಚ್10 ರ ನಂತರ ಒಡೆಯುವುದು ಗ್ಯಾರಂಟಿ ಎಂಬ ಮಾತು ಬಿಜೆಪಿ ಒಳಮನೆಯಿಂದ ಕೇಳಿ ಬರುತ್ತಿದೆ.
ಕಳೆದ ಎರಡು ತಿಂಗಳಿಂದ ಕೇಳಿ ಬರುತ್ತಿದ್ದ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಆಗ್ರಹಕ್ಕೆ ಪಂಚರಾಜ್ಯಗಳ ಚುನಾವಣೆ ಬ್ರೇಕ್ ಹಾಕಿದೆ.ಹಾಗೂ ಹೀಗೂ ವರಿಷ್ಠರ ಒಪ್ಪಿಗೆ ಪಡೆಯಲು ದಿಲ್ಲಿಗೆ ತೆರಳಿದ್ದ ಬೊಮ್ಮಾಯಿ ಅವರಿಗೆ ಕೇಂದ್ರ ಗೃಹ ಸಚಿವ “ಗುರ್ ” ಎಂದು ಕಳುಹಿಸಿದ ಮೇಲೆ ಆಕಾಂಕ್ಷಿಗಳ ಕೂಗು ಕಡಿಮೆಯಾಗಿತ್ತು.ಆದರೆ ಬೊಮ್ನಾಯಿ ಬಜೆಟ್ ಅಧಿವೇಶನ ಹಾಗೂ ಪಂಚರಾಜ್ಯ ಚುನಾವಣಾ ಫಲಿತಾಂಶ ಹೆಚ್ಚುಕಡಿಮೆ ಒಂದೇ ವೇಳೆಗೆ ಮುಕ್ತಾಯವಾಗುವುದರಿಂದ ಸಚಿವಾಕಾಂಕ್ಷಿಗಳು ಮತ್ತೆ ಸದ್ದು ಮಾಡುವುದು ನಿಶ್ಚಿತ.
ಬಿಜೆಪಿ ಮೂಲಗಳ ಪ್ರಕಾರ ವರಿಷ್ಠರೂ ಕೂಡಾ ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಂಪುಟ ವಿಸ್ತರಣೆ ಅಥವಾ ಪುನಾರ್ರಚನೆ ಮಾಡಲೇಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. ವಲಸೆ ಬಂದವರ ಪೈಕಿ ಕೆಲವರು ವಾಪಾಸ್ ಕಾಂಗ್ರೆಸ್ ಸೇರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದ್ದು ಅವರನ್ನು ಸಂಪುಟದಿಂದ ಕೈ ಬಿಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಹೆಚ್ಚು ಕಡಿಮೆ ಏಪ್ರೀಲ್ ಮೊದಲ ವಾರದ ವೇಳೆಗೆ ಕರ್ನಾಟಕದ ಎಲ್ಲ ಗೋಜಲುಗಳಿಗೆ ಅಂತ್ಯ ಹಾಡುವುದಕ್ಕೆ ವರಿಷ್ಠರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Raichur: ಕಾಂಗ್ರೆಸ್ ಸರ್ಕಾರ ಬಂದಿರುವುದೇ ಅಲ್ಲಾಹುವಿನ ಕೃಪೆಯಿಂದ… ಚಕ್ರವರ್ತಿ ಸೂಲಿಬೆಲೆ
MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದ ರಾಜಕೀಯ ಪಿತೂರಿ: ಡಿಕೆಶಿ
Hubballi: ED ಬಿಜೆಪಿಯ ಅಂಗ ಸಂಸ್ಥೆಯೇ…? ಸಚಿವ ಎಚ್.ಕೆ.ಪಾಟೀಲ್ ಗರಂ
MUST WATCH
ಹೊಸ ಸೇರ್ಪಡೆ
ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.