RBI: ಶುಶ್ರುತಿ ಸಹಕಾರ ಬ್ಯಾಂಕ್ ಪರವಾನಗಿ ರದ್ದು
Team Udayavani, Jul 7, 2023, 7:29 AM IST
ನವದೆಹಲಿ: ಬೆಂಗಳೂರಿನ ಶುಶ್ರುತಿ ಸೌಹಾರ್ದ ಸಹಕಾರ ಬ್ಯಾಂಕ್ ನಿಯಮಿತ ಮತ್ತು ಮಹಾರಾಷ್ಟ್ರದ ಬುಲ್ದಾನದ ಮಲ್ಕಾಪುರ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ.ನ ಬ್ಯಾಂಕಿಂಗ್ ಪರವಾನಗಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ರದ್ದುಪಡಿಸಿದೆ.
2023ರ ಜು.5ರಿಂದ ಎಲ್ಲಾ ರೀತಿಯ ಬ್ಯಾಂಕಿಂಗ್ ವ್ಯವಹಾರಗಳನ್ನು ನಿಲ್ಲಿಸುವಂತೆ ಈ ಎರಡು ಬ್ಯಾಂಕುಗಳಿಗೆ ಆರ್‌ಬಿಐ ಸೂಚಿಸಿದೆ.
ಈ ಎರಡು ಬ್ಯಾಂಕುಗಳು ಸಾಕಷ್ಟು ಬಂಡವಾಳ ಮತ್ತು ಗಳಿಕೆಯ ನಿರೀಕ್ಷೆ ಹೊಂದಿಲ್ಲ ಮತ್ತು ಬ್ಯಾಂಕಿಂಗ್ ನಿಯಂತ್ರಣ ಕಾಯಿದೆಯ ಅವಶ್ಯಕತೆಗಳನ್ನು ಪೂರೈಸಲು ವಿಫಲವಾಗಿವೆ. ಈ ಬ್ಯಾಂಕುಗಳ ಸದ್ಯದ ಆರ್ಥಿಕ ಪರಿಸ್ಥಿತಿ ನೋಡಿದರೆ ಠೇವಣಿದಾರರಿಗೆ ಪೂರ್ಣ ಹಣ ಹಿಂತಿರುಗಿಸುವುದು ಕಷ್ಟವಿದೆ. ಹಾಗಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ಈ ಎರಡೂ ಬ್ಯಾಂಕ್‌ಗಳ ವ್ಯವಹಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಆರ್‌ಬಿಐ ತಿಳಿಸಿದೆ.
ಡೆಪಾಸಿಟ್ ಇನ್ಶೂರೆನ್ಸ್ ಆ್ಯಂಡ್ ಕ್ರೆಡಿಟ್ ಗ್ಯಾರೆಂಟಿ ಕಾರ್ಪೊರೇಷನ್(ಡಿಐಸಿಜಿಸಿ) ವತಿಯಿಂದ ಠೇವಣಿದಾರರಿಗೆ ಗರಿಷ್ಠ 5 ಲಕ್ಷ ರೂ. ವರೆಗೆ ವಿಮಾ ಹಕ್ಕಿನ ಮೊತ್ತ ಸಿಗಲಿದೆ ಎಂದೂ ಆರ್‌ಬಿಐ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.