BJP ಯವರನ್ನು ಕೇಳಿಕೊಂಡು ಅಧಿಕಾರ ಮಾಡಲಾಗದು: ಪರಂ
Team Udayavani, Jun 18, 2023, 7:39 AM IST
ಬೆಂಗಳೂರು: ಬಿಜೆಪಿಯವರನ್ನು ಕೇಳಿಕೊಂಡು ಅಧಿಕಾರ ಮಾಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ಹೇಳಿದ್ದಾರೆ.
ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ ನಾವು ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಎಷ್ಟೇ ಕಷ್ಟವಾದರೂ ಜಾರಿಗೆ ತರುತ್ತೇವೆ. ಜನಪರ ಆಡಳಿತ ನೀಡುವ ವಿಚಾರದಲ್ಲಿ ಯಾವುದೇ ರೀತಿಯ ರಾಜಿಯಿಲ್ಲ. ಬಿಜೆಪಿಯರವನ್ನು ಕೇಳಿಕೊಂಡು ಆಡಳಿತ ನಡೆಸಬೇಕೇ ಎಂದು ವಾಗ್ಧಾಳಿ ನಡೆಸಿದರು.
ಬಿಜೆಪಿ ಮುಖಂಡರು ಈಗ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಮಾತನಾಡುತ್ತಿದ್ದಾರೆ. ದೇಶದ ಆಡಳಿತ ವ್ಯವಸ್ಥೆಯಲ್ಲಿ ಸಂವಿಧಾನವೇ ನಮಗೆ ಭಗವದ್ಗೀತೆ, ಬೈಬಲ್, ಖುರಾನ್ ಗ್ರಂಥಗಳಿದ್ದಂತೆ. ಕಲಂ 25ರಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಗೂ ಧರ್ಮ ಆಯ್ಕೆ ಹಕ್ಕು ನೀಡಲಾಗಿದೆ. ಅದಕ್ಕೆ ವಿರುದ್ಧವಾಗಿ ಬಿಜೆಪಿಯವರು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಸದನದಲ್ಲಿ ಈ ಮಸೂದೆಯನ್ನು ಮಂಡಿಸಿದಾಗಲೇ ವಿರೋಧಿಸಿದ್ದೆವು. ಅದು ಸಂವಿಧಾನ ವಿರೋಧಿಯಾಗಿದೆ ಎಂದು ಆವತ್ತೇ ಹೇಳಿದ್ದೆವು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ನಮ್ಮ ಸರಕಾರಕ್ಕೆ ಸಂವಿಧಾನದ ಮೇಲೆ ನಂಬಿಕೆ ಇದೆ. ಹೀಗಾಗಿ ನಾವು ಮತಾಂತರ ನಿಷೇಧ ಕಾನೂನನ್ನು ಹಿಂಪಡೆಯುತ್ತೇವೆ ಎಂದರು.
ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಮರಳು ಮಾಫಿಯಾ ಮತ್ತೆ ಹೆಡೆ ಎತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಬೇಕಾದ ಅಗತ್ಯವಿಲ್ಲ. ಆತ್ಮಸಾಕ್ಷಿಗೆ ತಕ್ಕಂತೆ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.