ನಾಗ ಬನಕ್ಕೆ ಹಾನಿ ಪ್ರಕರಣ: ಕೋಡಿಕಲ್‍ನಲ್ಲಿ ಬಂದ್ ಆಚರಿಸಿ ಪ್ರತಿಭಟನೆ
Team Udayavani, Nov 15, 2021, 11:11 AM IST
ಮಂಗಳೂರು: ನಾಗಬನದಲ್ಲಿನ ವಿಗ್ರಹ ಕಿತ್ತು ಬಿಸಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಡಿಕಲ್ ಪ್ರದೇಶದಲ್ಲಿ ಸಂಪೂರ್ಣ ಬಂದ್ ಆಚರಿಸಿ ಸೋಮವಾರ ಪ್ರತಿಭಟನೆ ನಡೆಸಲಾಗುತ್ತಿದೆ.
ಸೋಮವಾರ ಬೆಳ್ಳಿಗ್ಗೆ 9ರಿಂದ ಸಂಜೆ 6ರ ವರೆಗೆ ಶಾಂತಿಯುತ, ಸ್ವಯಂ ಪ್ರೇರಿತ ಬಂದ್ ನಡೆಸಲಾಗುತ್ತಿದೆ.
ನಗರದ ಬಂಗ್ರ ಕೂಳೂರು ವಾರ್ಡ್‌ನ ಕೋಡಿಕಲ್‌ನ ನಾಗಬನದಿಂದ ನಾಗನ ಕಲ್ಲನ್ನು ಎಸೆದಿರುವ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಉರ್ವ ಪೊಲೀಸರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು ಈ ಹಿಂದೆ ಬೇರೆ ಕಡೆಗಳಲ್ಲಿ ಇದೇ ರೀತಿಯ ಕೃತ್ಯಗಳಲ್ಲಿ ಪಾಲ್ಗೊಂಡಿದ್ದವರು, ಗಾಂಜಾ ವ್ಯಸನಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಕೋಡಿಕಲ್ ಪರಿಸರದಲ್ಲಿ ಲಭ್ಯವಾದ ಸಿಸಿ ಕೆಮರಾ ದೃಶ್ಯಗಳನ್ನು ಕೂಡ ಸಂಗ್ರಹಿಸಿ ಪರಿಶೀಲನೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬರುತ್ತಿದ್ದವರ ಕಾರು ಕೆರೆಗೆ: ಇಬ್ಬರು ಸಾವು
ಕಳೆದ ಒಂದು ತಿಂಗಳ ವ್ಯಾಪ್ತಿಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 3 ಕಡೆ ನಾಗನಕಟ್ಟೆಗಳಿಗೆ ಹಾನಿ ಮಾಡಿ ನಾಗನ ಕಲ್ಲುಗಳನ್ನು ಎಸೆದಿರುವ ಘಟನೆಗಳು ನಡೆದಿವೆ. ಅ.17ರಂದು ಬೈಕಂಪಾಡಿಯಲ್ಲಿ ನಾಗನಕಟ್ಟೆಗೆ ಹಾನಿಗೊಳಿಸಿ ಕೆಲವು ಕಲ್ಲುಗಳನ್ನು ಎಸೆದಿದ್ದು ಬೆಳಕಿಗೆ ಬಂದಿತ್ತು. ಅ.23ರಂದು ಕೂಳೂರಿನ ನಾಗಬನದ 6 ನಾಗನಕಲ್ಲುಗಳು ನಾಪತ್ತೆಯಾಗಿದ್ದವು. ಮೂರು ದಿನಗಳ ಅನಂತರ ಪಕ್ಕದ ಗದ್ದೆಯಲ್ಲಿ ಪತ್ತೆಯಾಗಿದ್ದವು. ಇದೀಗ ಕೂಳೂರು ಸಮೀಪದ ಕೋಡಿಕಲ್‌ನಲ್ಲಿ ಇದೇ ರೀತಿಯ ಘಟನೆ ಮರುಕಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.