![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Feb 4, 2023, 7:47 PM IST
ಚೆನ್ನೈ: ಪ್ರಖ್ಯಾತ ಬಹುಭಾಷಾ ಹಿನ್ನೆಲೆ ಗಾಯಕಿ ವಾಣಿ ಜಯರಾಂ ಅವರು ಶನಿವಾರ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡು ಪೊಲೀಸರು ಅನುಮಾನಾಸ್ಪದ ಸಾವಿನ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
ವಾಣಿ ಜೈರಾಮ್ ಅವರ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಯ ನಂತರ ಆಸ್ಪತ್ರೆಯಿಂದ ಅವರ ನಿವಾಸಕ್ಕೆ ತರಲಾಗಿದೆ.
ಅವರ ನಿವಾಸದಲ್ಲಿ ದಿನನಿತ್ಯದ ಕೆಲಸಗಳನ್ನು ಮಾಡುತ್ತಿದ್ದ ಸೇವಕಿ ಮಲಾರಕೋಡಿ ಅವರು ಬೆಳಗ್ಗೆ 11 ಗಂಟೆಗೆ ಮನೆಗೆ ಬಂದಿದ್ದು, ”ನಾನು ಐದು ಬಾರಿ ಬೆಲ್ ಮಾಡಿದೆ. ಆದರೆ ಅವರು ಬಾಗಿಲು ತೆರೆಯಲಿಲ್ಲ. ನನ್ನ ಪತಿ ಕೂಡ ಅವರಿಗೆ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ. ನಿವಾಸದಲ್ಲಿ ಅವರೊಬ್ಬರೇ ಇದ್ದರು” ಎಂದು ಹೇಳಿದ್ದಾರೆ.
ಕೂಡಲೇ ಮಲಾರಕೋಡಿ ವಾಣಿ ಜಯರಾಂ ಅವರ ಸಹೋದರಿ ಉಮಾ ಅವರಿಗೆ ತಿಳಿಸಿದ್ದು, ಮನೆಗೆ ಪ್ರವೇಶಿಸಿದಾಗ ಬೆಡ್ರೂಮ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಹಣೆಯ ಮೇಲೆ ಗಾಯಗಳ ಗುರುತುಗಳಿದ್ದವು. ಪೊಲೀಸರಿಗೆ ಮಾಹಿತಿ ನೀಡಿ, ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚೆನ್ನೈನ ಕಿಲ್ಪಾಕ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ತಮಿಳುನಾಡು ಪೊಲೀಸರ ವಿಧಿವಿಜ್ಞಾನ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ.
ಟ್ರಿಪ್ಲಿಕೇನ್‌ನ ಡಿಸಿಪಿ ಶೇಖರ್ ದೇಶಮುಖ್ ಅವರನ್ನು ಸಂಪರ್ಕಿಸಿದಾಗ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಮತ್ತು ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಹೆಚ್ಚಿನ ವಿವರಗಳನ್ನು ತಿಳಿಯಲಾಗುವುದು ಎಂದು ತಿಳಿಸಿದ್ದಾರೆ.
2018 ರಲ್ಲಿ ಪತಿ ಜಯರಾಮ್ ನಿಧನರಾದ ನಂತರ ವಾಣಿ ಜಯರಾಮ್ ಅವರು ಚೆನ್ನೈನ ಹ್ಯಾಡೋಸ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು.
ವಾಣಿ ಅವರ ವೃತ್ತಿಜೀವನವು 1971 ರಲ್ಲಿ ಪ್ರಾರಂಭವಾಗಿ ನಿರಂತರ ಐದು ದಶಕಗಳವರೆಗೆ ದಾಖಲೆಯ 10,000 ಕ್ಕೂ ಹೆಚ್ಚು ಹಾಡುಗಳನ್ನು ರೆಕಾರ್ಡ್ ಮಾಡಿ ಒಂದು ಸಾವಿರಕ್ಕೂ ಹೆಚ್ಚು ಭಾರತದ ಚಲನಚಿತ್ರಗಳಿಗೆ ಹಿನ್ನೆಲೆ ಗಾಯಕಿಯಾಗಿ ಪ್ರಖ್ಯಾತಿಯ ಉತ್ತುಂಗಕ್ಕೆ ಏರಿದ್ದರು. ಸಾವಿರಾರು ಭಕ್ತಿಗೀತೆಗಳು ಮತ್ತು ಖಾಸಗಿ ಆಲ್ಬಂಗಳನ್ನು ರೆಕಾರ್ಡ್ ಮಾಡಿದ್ದರು. ಭಾರತ ಮತ್ತು ವಿದೇಶಗಳಲ್ಲಿ ಹಲವಾರು ಏಕವ್ಯಕ್ತಿ ಸಂಗೀತ ಕಚೇರಿಗಳಲ್ಲಿ ಭಾಗವಹಿಸಿದ್ದರು.
ಕನ್ನಡ, ತುಳು, ತಮಿಳು, ಹಿಂದಿ, ತೆಲುಗು, ಮಲಯಾಳಂ, ಮರಾಠಿ, ಒಡಿಯಾ,ಗುಜರಾತಿ,ಅಸ್ಸಾಮಿ ಮತ್ತು ಬಂಗಾಳಿ ಭಾಷೆಗಳಲ್ಲಿಯೂ ಅವರು ಹಾಡಿದ್ದರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.