CBI: ಸಿಬಿಐ ಮುಕ್ತ ತನಿಖೆಯ ಅನುಮತಿ ಅಧಿಸೂಚನೆ ಹಿಂಪಡೆದ ರಾಜ್ಯ ಸಚಿವ ಸಂಪುಟ!
ಇದು ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ಕೈಗೊಂಡ ನಿರ್ಧಾರವಲ್ಲ...
Team Udayavani, Sep 26, 2024, 5:39 PM IST
ಬೆಂಗಳೂರು: ಸಿಬಿಐ (CBI) ತನಿಖಾ ದಳಕ್ಕೆ ರಾಜ್ಯದಲ್ಲಿ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಗುರುವಾರ (ಸೆ.26) ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್(HK Patil) ತಿಳಿಸಿದ್ದಾರೆ.
ಮುಖ್ಯವಾಗಿ ಚುನಾವಣೆಗೂ ಮೊದಲು ಭಾರತೀಯ ಜನತಾ ಪಕ್ಷ ವಿಪಕ್ಷಗಳ ನಾಯಕರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ನೀಡುವ ಸೂಚನೆಯಂತೆ ಸಿಬಿಐ ಕಾರ್ಯಪ್ರವೃತ್ತವಾಗುತ್ತದೆ ಎಂದು ಪಾಟೀಲ್ ಆರೋಪಿಸಿದರು.
ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸಿಬಿಐ ಮುಕ್ತವಾಗಿ ತನಿಖೆ ನಡೆಸಲು ಈ ಹಿಂದೆ ಸರ್ಕಾರ ಅನುವು ಮಾಡಿಕೊಟ್ಟಿತ್ತು.
ಆದರೆ ನಾವೀಗ ರಾಜ್ಯದಲ್ಲಿ ಸಿಬಿಐಗೆ ನೀಡಿರುವ ಮುಕ್ತ ತನಿಖೆಯ ಅವಕಾಶವನ್ನು ಹಿಂಪಡೆದಿದ್ದೇವೆ. ಕೇಂದ್ರ ತನಿಖಾ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ನಾವು ನಮ್ಮ ಕಳವಳವನ್ನು ವ್ಯಕ್ತಪಡಿಸಿದ್ದೇವೆ. ಸಿಬಿಐ ಪಕ್ಷಪಾತಿ…ಹೀಗಾಗಿ ನಾವು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಸಚಿವ ಪಾಟೀಲ್ ಹೇಳಿದರು.
ಇದು ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ಕೈಗೊಂಡ ನಿರ್ಧಾರವಲ್ಲ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು. ನಾವು ಎಲ್ಲಾ ಪ್ರಕರಣವನ್ನು ಸಿಬಿಐಗೆ ಶಿಫಾರಸು ಮಾಡಿದ್ದೇವು. ಆದರೆ ಅವರು ಆರೋಪಪಟ್ಟಿಯನ್ನೇ ಈವರೆಗೂ ಸಲ್ಲಿಸಿಲ್ಲ. ಹಲವು ಪ್ರಕರಣಗಳು ಬಾಕಿ ಇದೆ. ನಾವು ಶಿಫಾರಸು ಮಾಡಿದ ಪ್ರಕರಣಗಳ ತನಿಖೆ ನಡೆಸಲು ನಿರಾಕರಿಸುತ್ತಿದೆ ಎಂದು ಪಾಟೀಲ್ ಹೇಳಿದರು.
ಈಗಾಗಲೇ ಸಿಬಿಐ ಮುಕ್ತ ತನಿಖೆ ಅವಕಾಶ ರದ್ದುಗೊಳಿಸಿದ ವಿಪಕ್ಷ ಆಡಳಿತ ಇರುವ ಪಶ್ಚಿಮಬಂಗಾಳ, ತಮಿಳುನಾಡು, ಕೇರಳ ರಾಜ್ಯದ ಸಾಲಿಗೆ ಕರ್ನಾಟಕ ಸೇರಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.