ಸಿಡಿದೆದ್ದ ಪ್ರತಿಭಟನೆ : ರಮೇಶ್‌ಗೆ ನೋಟಿಸ್, ಇಂದು ಮ್ಯಾಜಿಸ್ಟ್ರೇಟ್ ಮುಂದೆ ಯುವತಿ ಹಾಜರು
Team Udayavani, Mar 29, 2021, 7:35 AM IST
ಬೆಂಗಳೂರು : ರಮೇಶ್ ಜಾರಕಿಹೊಳಿ ಅವರ ಸಿ.ಡಿ. ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹೆಸರು ಕೇಳಿ ಬರುತ್ತಿದ್ದಂತೆಯೇ ಪ್ರತಿಭಟನೆಗಳೂ ಹೆಚ್ಚಿವೆ. ಉಪಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿಗೆ ತೆರಳಿದ ಡಿ.ಕೆ.ಶಿ. ಅವರಿಗೆ ಪ್ರತಿಭಟನೆಯ ಸ್ವಾಗತ ಸಿಕ್ಕಿದ್ದು, ಅವರ ಕಾರಿನ ಮೇಲೆ ಕಲ್ಲು ತೂರಾಟವೂ ನಡೆದಿದೆ.
ಬೆಳಗಾವಿ ವಿಮಾನ ನಿಲ್ದಾಣಕ್ಕೆ ಡಿ.ಕೆ.ಶಿ. ಆಗಮಿಸುತ್ತಿದ್ದಂತೆ ಪ್ರವೇಶ ದ್ವಾರದ ಬಳಿ ಸೇರಿದ್ದ ಜಾರಕಿಹೊಳಿ ಬೆಂಬಲಿಗರು ಕಪ್ಪು ಬಾವುಟ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಡಿ.ಕೆ.ಶಿ. ಅವರ ಬೆಂಗಾವಲು ವಾಹನ, ಬೆಂಬಲಿಗರ ವಾಹನಗಳನ್ನು ಗುರಿಯಾಗಿಸಿಕೊಂಡು ಪ್ರತಿಭಟನಕಾರರು ಚಪ್ಪಲಿ, ಕಲ್ಲು ತೂರಾಟ ನಡೆಸಿದರು. ಕೆಲವು ವಾಹನಗಳ ಗಾಜುಗಳು ಪುಡಿಯಾದವು. ಅವಾಚ್ಯ ಶಬ್ದಗಳಿಂದ ನಿಂದಿಸಿ ಗೋ ಬ್ಯಾಕ್ ಡಿಕೆಶಿ, ಗೋ ಬ್ಯಾಕ್ ಎಂದು ಘೋಷಣೆ ಕೂಗಿದರು. ಆದರೆ ಡಿ.ಕೆ.ಶಿ. ಅವರ ಕಾರಿನ ಮೇಲೆ ಕಲ್ಲು ಮತ್ತು ಚಪ್ಪಲಿ ಎಸೆದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ರಮೇಶ್‌ಗೆ ನೋಟಿಸ್
ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು ರಮೇಶ್ ಜಾರಕಿಹೊಳಿ ಅವರಿಗೆ ರವಿವಾರ ಮೂರನೇ ಬಾರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಜಾರಕಿಹೊಳಿ ನಿವಾಸಕ್ಕೆ ರವಿವಾರ ರಾತ್ರಿ ಆಗಮಿಸಿದ ಪೊಲೀಸರು ಸೋಮವಾರ ಬೆಳಗ್ಗೆ 10ಕ್ಕೆ ಆಡುಗೋಡಿಯ ಟೆಕ್ನಿಕಲ್ ಸೆಲ್‌ನಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ
ಜಾರಕಿಹೊಳಿ ಅವರನ್ನು ಬಂಧಿಸುವ ಬದಲಿಗೆ ಸರಕಾರ, ಪೊಲೀಸ್ ಇಲಾಖೆ ರಕ್ಷಣೆಗೆ ನಿಂತಿದೆ. ಕೂಡಲೇ ಅವರನ್ನು ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಕಾಂಗ್ರೆಸ್ ಎಚ್ಚರಿಸಿದೆ. ಈ ನಡುವೆ ಬೆಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ಕಡೆಯಿಂದ ಜಾರಕಿಹೊಳಿ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ.
ಇಂದು ಯುವತಿ ಹಾಜರು
ಪ್ರಕರಣದ ಕೇಂದ್ರಬಿಂದು ಯುವತಿ ಸೋಮವಾರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗುತ್ತಾರೆ ಎಂದು ಆಕೆಯ ಪರ ವಕೀಲ ಕೆ.ಎನ್.ಜಗದೀಶ್ ಹೇಳಿದ್ದಾರೆ. ರವಿವಾರ ಫೇಸ್‌ಬುಕ್ ಲೈವ್ ಆಗಿ ಈ ವಿಚಾರ ತಿಳಿಸಿರುವ ಅವರು, ಸಿಆರ್‌ಪಿಸಿ ಸೆಕ್ಷನ್ 164 ಪ್ರಕಾರ ಯುವತಿಗೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಿ ಹೇಳಿಕೆ ನೀಡಲು ಅವಕಾಶ ಇದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.