ಮುಂಜಾಗ್ರತೆ ವಹಿಸಿ…ಐದು ರಾಜ್ಯಗಳಲ್ಲಿ ಕೋವಿಡ್ ಹೆಚ್ಚಳ; ಕೇಂದ್ರದ ಎಚ್ಚರಿಕೆ
ಭಾರತದಲ್ಲಿನ ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದೆ
Team Udayavani, Apr 9, 2022, 10:50 AM IST
ನವದೆಹಲಿ: ಚೀನಾ, ಅಮೆರಿಕ ಮತ್ತು ಯುರೋಪ್ ನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ನಡುವೆಯೇ ಶನಿವಾರ (ಏಪ್ರಿಲ್ 09) ಕೇಂದ್ರ ಸರ್ಕಾರ ಐದು ರಾಜ್ಯಗಳಿಗೆ ಕೋವಿಡ್ ಹೆಚ್ಚಳವಾಗುತ್ತಿರುವ ಬಗ್ಗೆ ಎಚ್ಚರಿಸಿದ್ದು, ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.
ಇದನ್ನೂ ಓದಿ:ಸತತ ಮೂರು ಗೆಲುವು: ದಾಖಲೆ ಪಟ್ಟಿ ಸೇರಿದ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್
ಭಾರತದಲ್ಲಿನ ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಆರ್ಥಿಕ ಮತ್ತು ಸಾಮಾಜಿಕ ಚಟುವಟಿಕೆಗಳ ಪುನರಾರಂಭಕ್ಕೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿವಿಧ ರೀತಿಯ ಕ್ರಮಗಳನ್ನು ತೆಗೆದುಕೊಂಡಿತ್ತು. ಈ ನಿಟ್ಟಿನಲ್ಲಿ ಕೋವಿಡ್ 19 ಸೋಂಕು ನಿರ್ವಹಣೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅಗತ್ಯವಿದೆ ಎಂದು ಭೂಷಣ್ ಪತ್ರದಲ್ಲಿ ತಿಳಿಸಿರುವುದಾಗಿ ವರದಿ ಹೇಳಿದೆ.
ಯಾವುದು ಆ ಐದು ರಾಜ್ಯಗಳು:
ಕೇರಳ, ಮಿಜೋರಾಂ, ಮಹಾರಾಷ್ಟ್ರ, ದೆಹಲಿ ಮತ್ತು ಹರ್ಯಾಣ ರಾಜ್ಯಗಳಿಗೆ ಕೇಂದ್ರ ಸರ್ಕಾರ ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪತ್ರ ಬರೆದಿದೆ.
ಕಳೆದ ವಾರ ಕೇರಳದಲ್ಲಿ 2,321 ಕೋವಿಡ್ ಪ್ರಕರಣ ವರದಿಯಾಗಿತ್ತು. ದೇಶದ ಕೋವಿಡ್ ಪ್ರಕರಣಗಳಲ್ಲಿನ ಶೇ.31.08ರಷ್ಟು ಸೋಂಕು ಕೇರಳದಲ್ಲಿ ಪತ್ತೆಯಾಗಿದೆ. ವಾರದ ಪಾಸಿಟಿವಿಟಿ ದರ ಕೂಡಾ ಶೇ.13.45ರಿಂದ ಶೇ.15.53ಕ್ಕೆ ಏರಿಕೆಯಾಗಿದೆ.
ದೆಹಲಿಯಲ್ಲಿಯೂ ಕಳೆದ ವಾರದಲ್ಲಿ 826 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ವಾರದ ಪಾಸಿಟಿವಿಟಿ ದರ ಕೂಡಾ ಶೇ.0.51ರಿಂದ ಶೇ.1.25ಕ್ಕೆ ಹೆಚ್ಚಳವಾಗಿದೆ. ಹರ್ಯಾಣದಲ್ಲಿ 416 ಕೋವಿಡ್ ಪ್ರಕರಣ ವರದಿಯಾಗಿದ್ದು, ವಾರದ ಪಾಸಿಟಿವಿಟಿ ದರ ಶೇ.1.06ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ 794 ಕೋವಿಡ್ ಪ್ರಕರಣಗಳು ವರದಿಯಾಗಿದೆ. ವಾರದ ಪಾಸಿಟಿವಿಟಿ ದರ ಶೇ.0.43ಕ್ಕೆ ಏರಿಕೆಯಾಗಿದೆ. ಮಿಜೋರಾಂನಲ್ಲಿ 814 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ವಾರದ ಪಾಸಿಟಿವಿಟಿ ದರ ಶೇ.16.48ಕ್ಕೆ ಏರಿಕೆಯಾಗಿದೆ ಎಂದು ಪತ್ರದಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.