ರಾಜ್ಯಾದ್ಯಂತ ಇಂದಿನಿಂದ CET ಪರೀಕ್ಷೆ
ಪರೀಕ್ಷೆ ಬರೆಯಲಿದ್ದಾರೆ 2.61ಲಕ್ಷ ವಿದ್ಯಾರ್ಥಿಗಳು-592 ಕೇಂದ್ರಗಳಲ್ಲಿ ಆಯೋಜನೆ
Team Udayavani, May 20, 2023, 6:56 AM IST
ಬೆಂಗಳೂರು: ಕರ್ನಾಟಕ ಸಾಮಾನ್ಯ ಅರ್ಹತಾ ಪರೀಕ್ಷೆ (ಸಿಇಟಿ) ಮೇ 20 ರಿಂದ ಮೇ 22 ರವರೆಗೆ ನಡೆಯಲಿದ್ದು ರಾಜ್ಯಾದ್ಯಂತ 2.61ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರಿಂಗ್, ನ್ಯಾಚುರೋಪತಿ ಮತ್ತು ಯೋಗ, ಕೃಷಿ ವಿಜ್ಞಾನ ಮತ್ತು ಬಿ. ಫಾರ್ಮ, ಪಶು ವೈದ್ಯಕೀಯ ಮತ್ತು ಬಿಎಸ್ಸಿ ನರ್ಸಿಂಗ್ ಪ್ರವೇಶಕ್ಕೆ ಸಿಇಟಿ ನಡೆಯಲಿದೆ. ಈ ಪೈಕಿ ಬಿಎಸ್ಸಿ ನರ್ಸಿಂಗ್‌ಗೆ ಮೊದಲ ಬಾರಿಗೆ ಸಿಇಟಿ ನಡೆಯುತ್ತಿದೆ.
ರಾಜ್ಯದ 592 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಈ ಪೈಕಿ 121 ಕೇಂದ್ರಗಳು ಬೆಂಗಳೂರಿನಲ್ಲಿವೆ. 1.40 ಲಕ್ಷ ವಿದ್ಯಾರ್ಥಿನಿಯರು ಮತ್ತು 1.21ಲಕ್ಷ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿನ ಈ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಸುಮಾರು 24 ಸಾವಿರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಮಕ್ಕಳು ವಾಚ್, ಲೋಹದ ಆಭರಣ, ಫುಲ್ ಸ್ಲಿವ್ ಶರ್ಟ್ ಧರಿಸಿ ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಕಿವಿ, ತಲೆ ಮುಚ್ಚುವಂತಹ ವಸ್ತ್ರಗಳನ್ನು ಧರಿಸುವ ಹಾಗಿಲ್ಲ. ಹಾಗೆಯೇ ಎಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್ ಫೋನ್, ಬ್ಲೂಟೂಥ್, ಕ್ಯಾಲ್ಕೂಲೇಟರ್, ಸ್ಲೆ„ಡ್ ರೂಲ್ಸ್, ವೈಟ್ ಫೂÉಯೈಡ್, ವೈರ್‌ಲೆಸ್ ಸೆಟ್, ಪೇಪರ್ ಚೀಟಿ, ಪುಸ್ತಕವನ್ನು ಪರೀಕ್ಷಾ ಕೇಂದ್ರಕ್ಕೆ ತರುವುದನ್ನು ನಿಷೇಧಿಸಲಾಗಿದೆ. ನೀಲಿ ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ ಪೆನ್ ಮಾತ್ರ ಬಳಸಬೇಕು. ಮೂರಕ್ಕಿಂತ ಹೆಚ್ಚು ಪೆನ್ನು ಮತ್ತು ಪೆನ್ಸಿಲ್ ತೆಗೆದುಕೊಂಡು ಹೋಗುವ ಹಾಗಿಲ್ಲ. ಎಂದು ಸೂಚಿಸಲಾಗಿದೆ.
ಕೋವಿಡ್ – 19 ರ ಲಕ್ಷಣಗಳಿದ್ದರೆ ಸರ್ಜಿಕಲ್ ಮಾಸ್ಕ್ ಧರಿಸಬೇಕು ಎಂದು ಸೂಚಿಸಲಾಗಿದೆ. ಪ್ರವೇಶ ಪತ್ರದ ಜೊತೆಗೆ ಕಡ್ಡಾಯವಾಗಿ ಮಾನ್ಯತೆ ಇರುವ ಭಾವಚಿತ್ರವುಳ್ಳ ಗುರುತಿನ ಕಾರ್ಡ್ ತೆಗೆದುಕೊಂಡು ಬರಬೇಕು ಎಂದು ಸೂಚಿಸಲಾಗಿದೆ.
ವೇಳಾಪಟ್ಟಿ
ಮೇ 20ರಂದು ಬೆಳಗ್ಗೆ 10.30 ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ಗಣಿತ ಪರೀಕ್ಷೆ ನಡೆಯಲಿದೆ. ಮೇ. 21 ರಂದು ಬೆಳಗ್ಗೆ 10.30 ರಿಂದ 11.50ರವರೆಗೆ ಭೌತ ಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿದೆ. ಮೇ 22 ರಂದು ಹೊರನಾಡ ಕನ್ನಡಿಗರಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.