ಎರಡನೇ ದಿನವೂ CET ಸುಸೂತ್ರ
Team Udayavani, May 22, 2023, 7:52 AM IST
ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ರಾಜ್ಯಾದ್ಯಂತ ರವಿವಾರ ನಡೆದ ಸಿಇಟಿ-2023 ಸೂಸೂತ್ರವಾಗಿ ನಡೆದಿದೆ.
ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 2,61,610 ಅಭ್ಯರ್ಥಿಗಳಲ್ಲಿ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಎರಡೂ ವಿಷಯಗಳಿಗೆ 2,43,728 (ಶೇ.93.16) ಅಭ್ಯರ್ಥಿಗಳು ಹಾಜರಾಗಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.
ಪರೀಕ್ಷೆಗೆ ಹೆಚ್ಚುವರಿ ಸಮಯ
ಬೆಂಗಳೂರು ನಗರದಲ್ಲಿ ರವಿವಾರ ಮಧ್ಯಾಹ್ನದ ಬಳಿಕ ಭರ್ಜರಿ ಮಳೆ ಸುರಿದಿದ್ದು, ಸಿಇಟಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಮೇಲೆಯೂ ಪರಿಣಾಮ ಬೀರಿತು. ದಟ್ಟ ಮೋಡ, ಬಿರುಗಾಳಿ- ಮಳೆಯಿಂದ ಕತ್ತಲೆ ಆದಂತೆ ಆಗಿತ್ತು. ಮಳೆಗೆ ಮರ ಬಿದ್ದು ಮಲ್ಲೇಶ್ವರದ 13 ಮತ್ತು 18ನೇ ಅಡ್ಡರಸ್ತೆಯಲ್ಲಿರುವ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯುತ್ ವ್ಯತ್ಯಯವಾಗಿತ್ತು. ಇದರಿಂದಾಗಿ ಅಭ್ಯರ್ಥಿಗಳು ಸಮಯ ಅಭಾವದ ಬಗ್ಗೆ ಆತಂಕ ವ್ಯಕ್ತಪಡಿಸಿದರು.
ವಿದ್ಯುತ್ ವ್ಯತ್ಯಯದ ಬಗ್ಗೆ ಬೆಸ್ಕಾಂನಿಂದ ಮಾಹಿತಿ ಪಡೆದ ಕೆಇಎ ಅಧಿಕಾರಿಗಳು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಹೆಚ್ಚುವರಿಯಾಗಿ 15 ನಿಮಿಷ ಅವಧಿಯನ್ನು ಪರೀಕ್ಷೆ ಬರೆಯಲು ನೀಡಲಾಗಿತ್ತು ಎಂದು ಎಸ್. ರಮ್ಯಾ ಸ್ಪಷ್ಟಪಡಿಸಿದ್ದಾರೆ.
ಇಂದಿನ ಪರೀಕ್ಷೆ
ಸೋಮವಾರ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಬೆಂಗಳೂರು, ಮಂಗಳೂರು, ಬೀದರ್, ಬೆಳಗಾವಿ, ಬಳ್ಳಾರಿ ಮತ್ತು ವಿಜಯಪುರ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಯು ಬೆಳಗ್ಗೆ 11.30ರಿಂದ ಮಧ್ಯಾಹ್ನ 12.30ರ ವರಗೆ ಒಂದು ಗಂಟೆ ಕಾಲ ಐವತ್ತು ಅಂಕಗಳಿಗೆ ನಡೆಯಲಿದೆ. 2,084 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.