Legislative Council ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ
ವಿಧಾನ ಪರಿಷತ್ ವಿಪಕ್ಷ ನಾಯಕ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಸಿ.ಟಿ. ರವಿ, ರವಿ ಕುಮಾರ್ ಗೆ ನಿರಾಸೆ
Team Udayavani, Jul 22, 2024, 10:27 PM IST
ಬೆಂಗಳೂರು: ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ಬಿಜೆಪಿ ವರಿಷ್ಠರು ನೇಮಿಸಿದ್ದಾರೆ.
ವಿಧಾನ ಪರಿಷತ್ ವಿಪಕ್ಷ ನಾಯನಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದರಾಗಿ ಆಯ್ಕೆಯಾದ ನಂತರ ಈ ಸ್ಥಾನ ತೆರವುಗೊಂಡಿತ್ತು. ಮೇಲ್ಮನೆಯಲ್ಲಿ ಪ್ರಬಲ ನಾಯಕನ ಅಗತ್ಯ ಮನಗಂಡ ಬಿಜೆಪಿ, ಚಿಕ್ಕಮಗಳೂರಿನಿಂದ ಪರಾಭವಗೊಂಡಿದ್ದ ಮಾಜಿ ಶಾಸಕ ಸಿ.ಟಿ.ರವಿಯವರನ್ನು ಮೇಲ್ಮನೆಗೆ ಇತ್ತೀಚೆಗೆ ಆಯ್ಕೆ ಮಾಡಿತ್ತು. ಆದರೆ ಇಲ್ಲಿಯವರೆಗೆ, ಪಕ್ಷವು ವಿಪಕ್ಷ ನಾಯಕನ ಸ್ಥಾನದ ಜವಾಬ್ದಾರಿ ಅಧಿಕೃತಗೊಳಿಸಿರಲಿಲ್ಲ.
ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನಲೆಯ ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಟರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ… pic.twitter.com/w76g6aUUzj
— Vijayendra Yediyurappa (@BYVijayendra) July 22, 2024
ಇದೀಗ ಮುಂಗಾರು ಅಧಿವೇಶನ ಮಧ್ಯಯೇ ಬಿಜೆಪಿ ಅಂತಿಮವಾಗಿ ಛಲವಾದಿ ನಾರಾಯಣಸ್ವಾಮಿಯವರ ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ನೇಮಕ ಮಾಡಿದೆ. ಇದರಿಂದ ವಿಪಕ್ಷ ನಾಯಕನ ಹುದ್ದೆ ಆಕಾಂಕ್ಷಿಗಳಾಗಿದ್ದ ಸಿ.ಟಿ. ರವಿ ಮತ್ತು ರವಿ ಕುಮಾರ್ ಗೆ ನಿರಾಸೆಯಾಗಿದೆ. ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾದ ಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕೆ ಬಿಜೆಪಿಯಲ್ಲಿ ಪೈಪೋಟಿ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.