ಒಳ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಮುಖಂಡರ ಸಮಯ ಸಾಧಕತನ: ಛಲವಾದಿ ನಾರಾಯಣಸ್ವಾಮಿ
Team Udayavani, Dec 13, 2022, 5:34 PM IST
ಬೆಂಗಳೂರು: ಒಳ ಮೀಸಲಾತಿ ವಿಚಾರ ಸಂಪುಟದ ಮುಂದಿದೆ. ಈ ವಿಷಯ ಪರಿಶೀಲನೆಗೆ ಐದು ಸದಸ್ಯರ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ ಎಂದು ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಖಂಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದೇ ದಿನದಲ್ಲಿ ಸಮಿತಿ ರಚಿಸಿದ್ದಾರೆ. ಸಂಪುಟ ಉಪ ಸಮಿತಿ ವರದಿ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಿದ್ದಾರೆ. ಕೂಡಲೇ ಸಮಿತಿ ರಚಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು ಎಂದು ತಿಳಿಸಿದರು.
ಜನರ ಒತ್ತಾಯ ಅರಿತು ಕೂಡಲೇ ಸಮಿತಿ ರಚಿಸಿದ್ದಾರೆ. ಒಂದೆರಡು ತಿಂಗಳಲ್ಲಿ ವರದಿ ಸಿಗಲಿದೆ ಎಂದು ಅವರು ವಿವರಿಸಿದರು. ನಮ್ಮ ಸರಕಾರದ ಅವಧಿಯಲ್ಲಿ ಇದರ ಸಾಧಕ- ಬಾಧಕಗಳನ್ನು ಪರಿಗಣಿಸಿ ಒಮ್ಮತದ ತೀರ್ಮಾನ ಮಾಡಿ ಅನುಷ್ಠಾನ ಮಾಡುತ್ತೇವೆ. ಕಾಂಗ್ರೆಸ್‍ನವರು ಸಮಯಸಾಧಕತನ ಮಾಡುತ್ತಾರೆ ಎಂದು ಆಕ್ಷೇಪಿಸಿದರು. ಜನರನ್ನು ಒಡೆದು, ಜಾತಿಗಳನ್ನು ಒಡೆದು ಆಡಳಿತ ಮಾಡುವುದೇ ಸಿದ್ದರಾಮಯ್ಯ ಅವರ ವೃತ್ತಿಯಾಗಿತ್ತು ಎಂದು ಆರೋಪಿಸಿದರು.
ಇದನ್ನೂ ಓದಿ: ಬಿಲ್ಕಿಸ್ ಬಾನೋ ಪ್ರಕರಣ: ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಬೇಲಾ ತ್ರಿವೇದಿ
ಒಳ ಮೀಸಲಾತಿ ವಿಚಾರದಲ್ಲಿ ರಾಜ್ಯದಲ್ಲಿ ಹಲವು ದಿನಗಳಿಂದ ಹೋರಾಟ ನಡೆದಿದೆ. ಇದು ಇವತ್ತಿನ ವಿಷಯವಲ್ಲ. 20- 25 ವರ್ಷಗಳಿಂದ ಸತತ ಹೋರಾಟ ನಡೆಯುತ್ತಲೇ ಬಂದಿತ್ತು. ಹಿಂದಿನ ಸರಕಾರಗಳೂ ಆಯೋಗ ರಚನೆ ಮಾಡಿ ವರದಿ ಸಲ್ಲಿಕೆಯಾಗಿ ಹೆಚ್ಚು ಕಡಿಮೆ 9 ವರ್ಷಗಳೇ ಆಗಿವೆ. ಆದರೂ ಕೂಡ ವರದಿ ಸದನದಲ್ಲಿ ಚರ್ಚೆಗೆ ಬಂದಿಲ್ಲ ಎಂದು ಆಕ್ಷೇಪಿಸಿದರು.
ಒತ್ತಡ ಹೆಚ್ಚಾಗುತ್ತಿರುವ ಕಾರಣ ಬಿಜೆಪಿಯ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಇತರರು ಈ ಸಮಸ್ಯೆ ಪರಿಹಾರಕ್ಕೆ ಮುಂದಾದರು. ಹರಿಹರದಿಂದ ಹೋರಾಟ ಮಾಡುವವರು ಈಗಾಗಲೇ ಬೆಂಗಳೂರು ತಲುಪಿದ್ದಾರೆ. ಕಾಂಗ್ರೆಸ್‍ನ ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ, ಮಹದೇವಪ್ಪ ಸೇರಿ ಹಲವು ಮುಖಂಡರು ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ ಸದಾಶಿವ ಆಯೋಗದ ವರದಿಯನ್ನು ಪುರಸ್ಕರಿಸಿ ಮುಂದೆ ಒಳ ಮೀಸಲಾತಿ ಕೊಡುವುದಾಗಿ ಹೇಳಿದ್ದಾರೆ ಎಂದು ವಿವರಿಸಿದರು.
ಆರು ವರ್ಷಗಳ ಕಾಲ ವರದಿಯನ್ನು ಹಾಗೇ ಇಟ್ಟುಕೊಂಡು ಚರ್ಚೆಗೆ ತೆಗೆದುಕೊಂಡಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು. ಮಳೆ ಜೋರಾಗಿದೆ; ಹೋರಾಟನಿರತರು ಸರಕಾರದ ಸಕಾರಾತ್ಮಕ ಸ್ಪಂದನೆಯನ್ನು ಗಮನಿಸಿ ಹೋರಾಟ ರದ್ದು ಮಾಡಬೇಕೆಂದು ಅವರು ಮನವಿ ಮಾಡಿದರು.
ಹೋರಾಟಕ್ಕೆ ಶ್ರಮದಿಂದ ನಡೆದುಬಂದವರೇ ಬೇರೆ. ಅವರ ಜೊತೆ ಎಸ್‍ಡಿಪಿಐ ನವರು ಸೇರಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
MUST WATCH
ಹೊಸ ಸೇರ್ಪಡೆ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.