![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 8, 2020, 7:20 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಶನಿವಾರ ಓರ್ವ ಮಹಿಳೆ ಮೃತಪಟ್ಟಿದ್ದು, ಕೋವಿಡೇತರ ಕಾರಣದಿಂದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. 60 ಪ್ರಕರಣಗಳು ಪತ್ತೆಯಾಗಿದ್ದು, 68 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕೊಳ್ಳೇಗಾಲ ತಾಲೂಕಿನ ಪುಷ್ಪಪುರ ಗ್ರಾಮದ 40 ವರ್ಷದ ಮಹಿಳೆ ಆ.4ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಶುಕ್ರವಾರ ರಾತ್ರಿ ಮೃತರಾಗಿದ್ದಾರೆ.
ಕೊಳ್ಳೇಗಾಲ ತಾಲೂಕಿನ ಹೊಸ ಹಂಪಾಪುರ ನಿವಾಸಿ 60 ವರ್ಷದ ವೃದ್ಧರು ಹೃದೊ್ರೀಗ ಸಮಸ್ಯೆಯಿಂದ ಆ.6ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಮೃತಪಟ್ಟರು. ನಂತರ ನಡೆದ ಪರೀಕ್ಷೆಯಲ್ಲಿ ಕೋವಿಡ್ ಸೋಂಕು ಇರುವುದು ದೃಢಪಟ್ಟಿತು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಶನಿವಾರ 506 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. 446 ಪ್ರಕರಣಗಳ ಫಲಿತಾಂಶ ನೆಗೆಟಿವ್ ಬಂದಿದೆ.
ತಾಲೂಕುವಾರು ಪ್ರಕರಣಗಳು: ಶನಿವಾರ ಚಾಮರಾಜನಗರ ತಾಲೂಕಿನಲ್ಲಿ 21, ಕೊಳ್ಳೇಗಾಲ ತಾಲೂಕಿನಲ್ಲಿ 17, ಗುಂಡ್ಲುಪೇಟೆ ತಾಲೂಕಿನಲ್ಲಿ 12, ಯಳಂದೂರು ತಾಲೂಕಿನಲ್ಲಿ 09, ಹನೂರು ತಾಲೂಕಿನಲ್ಲಿ 1 ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಒಟ್ಟು ಪ್ರಕರಣಗಳ ಸಂಖ್ಯೆ 1103ಕ್ಕೇರಿದೆ. ಇದರಲ್ಲಿ 383 ಸಕ್ರಿಯ ಪ್ರಕರಣಗಳಿವೆ. ಒಟ್ಟು 701 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ನಿಂದ ಜಿಲ್ಲೆಯಲ್ಲಿ ಒಟ್ಟಾರೆ 14 ಮಂದಿ ಮೃತಪಟ್ಟಿದ್ದಾರೆ. 5 ಮಂದಿ ಕೋವಿಡ್ ಅಲ್ಲದ ಕಾರಣದಿಂದ ಮೃತರಾಗಿದ್ದಾರೆ. 14 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
– ಇಂದಿನ ಪ್ರಕರಣಗಳು- 60
– ಇಂದು ಗುಣಮುಖ-68
– ಒಟ್ಟು ಗುಣಮುಖ-701
– ಇಂದಿನ ಸಾವು-1
– ಒಟ್ಟು ಸಾವು-14
– ಸಕ್ರಿಯ ಪ್ರಕರಣ-383
– ಒಟ್ಟು ಸೋಂಕಿತರು-1103
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.