ಚಾಮರಾಜನಗರ ಆಸ್ಪತ್ರೆಯಲ್ಲಿ ಸಾವು ಪ್ರಕರಣ : ಸಚಿವ ಸುಧಾಕರ್ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ
Team Udayavani, May 13, 2021, 7:12 PM IST
ಚಾಮರಾಜನಗರ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕೋವಿಡ್-19ರ ಸಮಸ್ಯೆಗಳ ನಿಗಾವಣೆಗೆ ರಚಿಸಲಾದ ಸಮಿತಿಯ ವರದಿಯಲ್ಲಿ ಆಕ್ಸಿಜನ್ ಕೊರತೆಯಿಂದ 36 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿದೆ. ಹೀಗಾಗಿ, ಮೂರೇ ಮಂದಿ ಮೃತಪಟ್ಟಿರುವುದು ಎಂದು ಸಮರ್ಥಿಸಿಕೊಂಡ ಆರೋಗ್ಯ ಸಚಿವ ಡಾ. ಸುಧಾಕರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಅಲ್ಲದೇ ಈ ಘಟನೆಗೆ ಕಾರಣರಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಒತ್ತಾಯಿಸಿದರು.
ಗುರುವಾರ, ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜವಾಬ್ದಾರಿಯುತ ಸಚಿವರಾಗಿರುವ ಸುಧಾಕರ್ ಅವರು ಘಟನೆ ನಡೆದ ಮಾರನೆಯ ದಿನ ಚಾ.ನಗರಕ್ಕೆ ಬಂದು ಸುಳ್ಳು ಹೇಳಿಕೆಯನ್ನು ನೀಡಿದ್ದಾರೆ. ಮುಖ್ಯಮಂತ್ರಿ ಈ ಪ್ರಕರಣದ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆಯ ನಂತರ ನಿಖರವಾಗಿ ತಿಳಿದು ಹೇಳುತ್ತೇನೆ ಎನ್ನಬಹುದಿತ್ತು. ಅಥವಾ ವೈದ್ಯರಿಂದ ಮಾಹಿತಿಯನ್ನು ಪಡೆದು ಇಷ್ಟು ಜನ ಮರಣ ಹೊಂದಿದ್ದಾರೆ ಎಂದು ತಿಳಿಸಬಹುದಿತ್ತು. ಆದರೆ ಅವರು ಸುಳ್ಳು ಹೇಳಿಕೆಯನ್ನು ನೀಡಿದ್ದಾರೆ ಎಂದರು.
ಇದನ್ನೂ ಓದಿ :ದೆಹಲಿಯಲ್ಲಿ ಕಳೆದ 24ಗಂಟೆಯಲ್ಲಿ 10,489 ಕೋವಿಡ್ ಪ್ರಕರಣ ಪತ್ತೆ, 308 ಮಂದಿ ಸಾವು
3 ಜನ ಮಾತ್ರ ಆಕ್ಸಿಜನ್ ಕೊರತೆಯಿಂದ ಇನ್ನುಳಿದವರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ. ಹಾಗಾಗಿ ಡಾ. ಸುಧಾಕರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಅವರು ಕೂಡ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಆಮ್ಲಜನಕ ಪೂರೈಕೆ ಮಾಡುವುದು ಸರ್ಕಾರದ ಕರ್ತವ್ಯ. ಕೂಡಲೇ ಮುಖ್ಯಮಂತ್ರಿಯವರು ಅವರಿಂದ ರಾಜೀನಾಮೆ ಮಾಡಬೇಕು ಎಂದು ಒತ್ತಾಯಿಸಿದರು.
ಅಲ್ಲದೇ 304 ಸೆಕ್ಷನ್ ಅನ್ವಯಿಸಿ, ಈ ಸಾವಿಗೆ ಯಾರು ಯಾರು ಕಾರಣರಾಗಿದ್ದಾರೆ. ಆರೋಗ್ಯ ಸಚಿವರಿಂದ ಅಧಿಕಾರಿಗಳವರೆಗೆ ಅವರ ವಿರುದ್ಧ ಕೇಸ್ ದಾಖಲು ಮಾಡಬೇಕು. ಕಠಿಣ ಕ್ರಮ ಕೈಗೊಳ್ಳಬೇಕು. ಘಟನೆಯಲ್ಲಿ ಮೃತರಾದವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.