![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, May 5, 2023, 7:10 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮೇ 6ರಂದು ನಡೆಸಲು ಉದ್ದೇಶಿಸಿದ್ದ ಬೃಹತ್ ರೋಡ್ ಶೋನಲ್ಲಿ ಬದಲಾವಣೆಯಾಗಿದ್ದು, ಶನಿವಾರ ಮಧ್ಯಾಹ್ನ ಆಯೋಜಿಸಿದ್ದ ರೋಡ್ ಶೋ ಭಾನುವಾರ ಬೆಳಗ್ಗೆ ನಡೆಯುತ್ತದೆ. ಇದರಿಂದಾಗಿ ಒಟ್ಟು ಎರಡು ದಿನಗಳ ಕಾಲ ಮೋದಿ ಬೆಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ.
ಇಡೀ ದಿನ ರೋಡ್ ಶೋ ನಡೆಸಿದರೆ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಬಹುದು. ಇದರಿಂದ ದೈನಂದಿನ ವ್ಯವಹಾರದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದೆಂಬ ಕಾರಣಕ್ಕೆ ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರಿಗೆ ಕರೆ ಮಾಡಿ ರೋಡ್ ಶೋ ವೇಳಾಪಟ್ಟಿ ಬದಲಾವಣೆಗೆ ಸೂಚಿಸಿದ್ದಾರೆ.
ರೋಡ್ ಶೋ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ವಿವರಣೆ ನೀಡಿದ ಕೇಂದ್ರ ಸಚಿವೆ, ರಾಜ್ಯ ಚುನಾವಣ ನಿರ್ವಹಣ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ, ರಾಜಧಾನಿಯ ಎಲ್ಲರನ್ನೂ ನೋಡಬೇಕು, 17 ಕ್ಷೇತ್ರಗಳಿಗೆ ಭೇಟಿ ನೀಡಬೇಕೆಂಬ ಆಶಯದೊಂದಿಗೆ ಪ್ರಧಾನಿಯವರು ಬೆಂಗಳೂರಿಗೆ ಬರುತ್ತಿದ್ದಾರೆ. ಒಂದೇ ದಿನ ರೋಡ್ ಶೋ ನಡೆಸಿದರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂಬ ಉದ್ದೇಶದಿಂದ ಎರಡು ದಿನ ರೋಡ್ ಶೋ ನಡೆಸಲಾಗುತ್ತಿದೆ. ಸಾರ್ವಜನಿಕರ ಭಾವನೆಗಳಿಗೆ ಗೌರವ ಕೊಟ್ಟು ಪ್ರಧಾನಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ರೋಡ್ ಶೋ ನಡೆಯುತ್ತದೆ. ಹೊಸ ತಿಪ್ಪಸಂದ್ರದ ಕೆಂಪೇಗೌಡ ಪ್ರತಿಮೆಯಿಂದ ಹೊರಟು ಬ್ರಿಗೇಡ್ ರಸ್ತೆಯ ಯುದ್ಧ ಸ್ಮಾರಕದಲ್ಲಿ ಕೊನೆಗೊಳ್ಳಲಿದೆ. ಮೇ 7ರಂದು ರವಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ರೋಡ್ ಶೋ ಬ್ರಿಗೇಡ್ ರಸ್ತೆಯ ಯುದ್ಧ ಸ್ಮಾರಕದಿಂದ ಹೊರಟು ಮಲ್ಲೇಶ್ವರದ ಸ್ಯಾಂಕಿ ಕೆರೆ ಬಳಿ ಮುಕ್ತಾಯಗೊಳ್ಳಲಿದೆ. ರೋಡ್ ಶೋ ಮಾರ್ಗದ ವಿವರಗಳನ್ನು ಸಾರ್ವಜನಿಕರಿಗೆ ನೀಡಲಾಗುವುದು ಎಂದರು.
ಮೇ 5ರಂದು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಪ್ರಧಾನಿಯ ವರು ಬಳ್ಳಾರಿಯಲ್ಲಿ, ಸಂಜೆ 4.30ಕ್ಕೆ ತುಮಕೂರು ಗ್ರಾಮಾಂತರದಲ್ಲಿ ಬೃಹತ್ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮೇ 6ರಂದು ಬೆಂಗಳೂರಿನಲ್ಲಿ ರೋಡ್ ಶೋ ಮುಗಿಸಿದ ನಂತರ ಸಂಜೆ 4 ಗಂಟೆಗೆ ಬಾದಾಮಿಯಲ್ಲಿ, ಸಂಜೆ 7 ಗಂಟೆಗೆ ಹಾವೇರಿಯಲ್ಲಿ ಚುನಾವಣ
ಸಮಾವೇಶಗಳಲ್ಲಿ ಭಾಗಿಯಾಗಲಿದ್ದಾರೆ.
ಮೇ 7ರಂದು ರವಿವಾರ ಬೆಂಗಳೂರಿನಲ್ಲಿ ರೋಡ್ ಶೋ ಮುಗಿಸಿದ ಅನಂತರ ಸಂಜೆ 4 ಗಂಟೆಗೆ ಶಿವಮೊಗ್ಗ, ಸಂಜೆ 7 ಗಂಟೆಗೆ ನಂಜನಗೂಡಿನಲ್ಲಿ ಸಾರ್ವಜನಿಕ ಸಭೆಗಳನ್ನುದ್ದೇಶಿ ಭಾಷಣ ಮಾಡಲಿದ್ದಾರೆ. ನಂಜನಗೂಡಿನಲ್ಲಿ ಸಾರ್ವಜನಿಕ ಸಭೆ ಅನಂತರ ಪ್ರಧಾನಿ ಮೋದಿ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ ಎಂದು ವಿವರಿಸಿದರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.