ಸಂಕಷ್ಟದ ಸಂದರ್ಭ ಬೊಮ್ಮಾಯಿ ಬದಲಾವಣೆ ಅಸಾಧ್ಯ: ಕಾರಜೋಳ
Team Udayavani, Nov 29, 2021, 3:56 PM IST
ವಿಜಯಪುರ : ರಾಜ್ಯದಲ್ಲಿ ಕೋವಿಡ್, ಪ್ರವಾಹದ ಸಂಕಷ್ಟದ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬದಲಾವಣೆ ಅಸಾಧ್ಯ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯದ ಜನರು ಸಂಕಷ್ಟದಲ್ಲಿ ಇರುವ ಜನರಿಗೆ ಸ್ಪಂದಿಸುವುದು ಮೊದಲ ಆದ್ಯತೆ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆಯಂಥ ಚಿಂತನೆಯೇ ಅಪ್ರಸ್ತುತ ಹಾಗೂ ಊಹಾಪೋಹ ಎಂದರು.
ಸ್ಥಳೀಯ ಸಂಸ್ಥೆಗಳ ಮೇಲ್ಮನೆಯ ಚುನಾವಣೆಯಲ್ಲಿ ವಿಜಯಪುರ ಸೇರಿದಂತೆ ರಾಜ್ಯದಲ್ಲಿ 16 ಸ್ಥಾನ ಗೆಲ್ಲಲಿದ್ದೇವೆ ಎಂದು ಸಚಿವ ಗೋವಿಂದ ಕಾರಜೋಳ ವಿಶ್ವಾಸ ವ್ಯಕಪಡಿದರು.
ದ್ವಿ ಸದಸ್ಯತ್ವದ ವಿಜಯಪುರ ಕ್ಷೇತ್ರದಲ್ಲಿ ಬಿಜೆಪಿ ಒಬ್ಬರನ್ನೇ ಕಣಕ್ಕಿಳಿಸಿದ್ದು, ಬಿಜೆಪಿ ಸದಸ್ಯ ಮತದಾರರು ಶೇಕಡಾ 16 ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಹೀಗಾಗಿ ಪಕ್ಷದಿಂದ ನಮ್ಮ ಅಭ್ಯರ್ಥಿ ಪಿ.ಎಚ್.ಪೂಜಾರ ಅವರ ಗೆಲುವು ನಿಶ್ಚಿತ ಎಂದರು.
ವಿಜಯಪುರ ಕ್ಷೇತ್ರದಲ್ಲಿ ವಿಜಯಪುರ ಜಿಲ್ಲೆಯಲ್ಲಿ 2200, ಬಾಗಲಕೋಟೆ ಜಿಲ್ಲೆಯಲ್ಲಿ 2100 ಸದಸ್ಯರು, 9 ಶಾಸಕರು, ಎರಡೂ ಜಿಲ್ಲೆಯ ಇಬ್ಬರು ಸಂಸದರು ಸೇರಿ ಸುಮಾರು 4300 ಮತದಾರರಿದ್ದು, ಗೆಲುವು ನಮ್ಮದೇ ಎಂದರು.
ಅವಳಿ ಜಿಲ್ಲೆಯ 7300 ಮತದಾರರಲ್ಲಿ 4300 ಮತದಾರರು ಬಿಜೆಪಿ ಪಕ್ಷಕ್ಕೆ ಸೇರಿದ್ದು, ನಮ್ಮ ಶಕ್ತಿಯ ಆಧಾರದಲ್ಲಿ ಬಿಜೆಪಿ ಒಬ್ಬರೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಎಂದರು.
ಇನ್ನು ವಿಜಯಪುರ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ನಮ್ಮ ಪಕ್ಷದ ಇನ್ನೋರ್ವ ವ್ಯಕ್ತಿಯನ್ನು ಕಣದಿಂದ ಹಿಂದೆ ಸರಿಸಿದ್ದೇವೆ. ಆದರೆ ವಿರೋಧಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯ ಭೀತಿಯಲ್ಲಿದೆ ಹಾಗೂ ಸೋಲುವ ಆತಂಕ ಎದುರಿಸುತ್ತಿದೆ ಎಂದರು.
ಕಾಂಗ್ರೆಸ್ ಬಂಡುಕೋರ ಮಲ್ಲಿಕಾರ್ಜುನ ಲೋಣಿ ಅವರನ್ನು ಕಣದಿಂದ ಹಿಂದೆ ಸರಿದು ಅವಿರೋಧ ಆಯ್ಕೆಗೆ ಸಹಕರಿಸಿ ಎಂದು ಮನವಿ ಮಾಡಿದ್ದೆವು. ನಾನು, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ಹಲವರು ಲೋಣಿ ಅವರಿಗೆ ಕರೆ ಮಾಡಿದ್ದು ಸತ್ಯ. ಅವರು ತಾವು ಕಾಂಗ್ರೆಸ್ ನಿಷ್ಟನಾಗಿದ್ದು, ನಿಮ್ಮ ಮನವಿಗೆ ಸ್ಪಂದಿಸುವ ಪ್ರಮೇಯವೇ ಬರುವುದಿಲ್ಲ ಎಂದರು. ಹೀಗಾಗಿ ಬಿಜೆಪಿ ಮತ್ತೊಂದು ಮತವನ್ನು ಲೋಣಿ ಅವರಿಗೆ ಕೊಡುವ ಪ್ರಶ್ನೆಯೂ ಉದ್ಭವಿಸುವುದಿಲ್ಲ ಎಂದು ಪ್ರತಿಕ್ರಿಯಿಸಿದರು.
ವಿಜಯಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಎಚ್.ಪೂಜಾರ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಶಾಸಕ ರಮೇಶ ಭೂಸನೂರ, ಮಾಜಿ ಸಚಿವ ಜಿ.ಎಸ್. ನ್ಯಾಮಗೌಡ, ಪಕ್ಷದ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಚಂದ್ರಶೇಖರ ಕವಟಗಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.