ನಾಳೆ ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಬೊಮ್ಮಾಯಿ ಮನೆ ಘೇರಾವ್
ಏಪ್ರಿಲ್ 15ರಿಂದ 5 ದಿನಗಳ ಕಾಲ ಪ್ರತಿ ದಿನ ಹೋರಾಟ
Team Udayavani, Apr 13, 2022, 9:46 PM IST
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಏಪ್ರಿಲ್ 14, ಗುರುವಾರ ಬೆಳಿಗ್ಗೆ 10 ಗಂಟೆಗೆ ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಬೊಮ್ಮಾಯಿ ಅವರ ಮನೆಯನ್ನು ಘೇರಾವ್ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, 40% ಕಮಿಷನ್ ಭ್ರಷ್ಟಾಚಾರ, ಇದಕ್ಕಾಗಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರ ವಿರುದ್ಧ ನಾವು ಹೋರಾಟ ಮಾಡಬೇಕಿದೆ. ರಾಜ್ಯದ ಜನರಿಗೆ ಸತ್ಯವನ್ನು ತಿಳಿಸಬೇಕಿದೆ ಎಂದು ಬರೆದಿದೆ.
ಹಾಗೆಯೇ ಏಪ್ರಿಲ್ 15ರಿಂದ 5 ದಿನಗಳ ಕಾಲ ಪ್ರತಿ ದಿನ ಒಂದೊಂದು ಜಿಲ್ಲೆಯಲ್ಲಿ ಹೋರಾಟ ಹಮ್ಮಿಕೊಂಡಿದ್ದೇವೆ. ನಾನು ಸೇರಿದಂತೆ ವಿಪಕ್ಷ ನಾಯಕರು, ಕಾರ್ಯಾಧ್ಯಕ್ಷರು, ನಾಯಕರು ಜಿಲ್ಲೆಗಳನ್ನು ಹಂಚಿಕೊಂಡು ಅಲ್ಲಿಯ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದೇವೆ. ಭ್ರಷ್ಟ 40% ಕಮಿಷನ್ ಸರ್ಕಾರವನ್ನು ಕಿತ್ತೊಗೆಯುವವರೆಗೂ ಹೋರಾಟ ಮಾಡೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಒಂದು ನಿಮಿಷವೂ ತಡಮಾಡದೆ ಸಚಿವ ಈಶ್ವರಪ್ಪನವರ ಮೇಲೆ ಭ್ರಷ್ಟಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಿ ಬಂಧಿಸಬೇಕು. ಸಂತೋಷ್ ಕುಟುಂಬಕ್ಕೆ ಒಂದು ಕೋಟಿ ರೂ ಪರಿಹಾರವನ್ನು ನೀಡಬೇಕು ಎಂದು ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.