ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 92 ಕೋವಿಡ್-19 ಕೇಸ್ ಪತ್ತೆ
Team Udayavani, Jul 29, 2020, 9:02 PM IST
ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 92 ಕೋವಿಡ್-19 ಪಾಸಿಟೀವ್ ಪ್ರಕರಣಗಳು ಕಂಡು ಬಂದಿದ್ದು ಒಟ್ಟಾರೆ ಸೋಂಕಿತರ ಸಂಖ್ಯೆ 1,647ಕ್ಕೆ ತಲುಪಿದೆ. ಕೋವಿಡ್ ಸೋಂಕುಗೆ ಚಿಕ್ಕಬಳ್ಳಾಪುರದಲ್ಲಿ ಒಬ್ಬರು ಮೃತ ಪಟ್ಟಿದ್ದು ಸಾವಿನ ಸಂಖ್ಯೆ ಜಿಲ್ಲೆಯಲ್ಲಿ 34ಕ್ಕೆ ಏರಿಕೆ ಕಂಡಿದೆ.
ಜಿಲ್ಲೆಯಲ್ಲಿ ಹೊಸ 92 ಪ್ರಕರಣಗಳಲ್ಲಿ ಚಿಕ್ಕಬಳ್ಳಾಪುರ 38, ಬಾಗೇಪಲ್ಲಿ 7, ಚಿಂತಾಮಣಿ 21, ಗೌರಿಬಿದನೂರು 19, ಗುಡಿಬಂಡೆ 4 ಹಾಗೂ ಶಿಡ್ಲಘಟ್ಟದಲ್ಲಿ 3 ಪ್ರಕರಣಗಳು ದಾಖಲಾಗಿವೆ. ಈ ಮದ್ಯೆ ಜಿಲ್ಲೆಯಲ್ಲಿ ಒಂದೇ ದಿನ 135 ಮಂದಿ ಸೋಂಕಿತರು ಚೇತರಿಕೆ ಕಂಡು ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಜಿಲ್ಲಾದ್ಯಂತ ಕೋವಿಡ್ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು ಅದರಲ್ಲೂ ಜಿಲ್ಲಾಡಳಿತದ ಶಕ್ತಿ ಕೇಂದ್ರ ಇರುವ ಚಿಕ್ಕಬಳ್ಳಾಪುರ ನಗರದಲ್ಲಿಯೆ ಅತ್ಯಧಿಕವಾಗಿ ಸೋಂಕಿತರು ಪತ್ತೆ ಆಗುತ್ತಲೇ ಇರುವುದು ಆರೋಗ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಒಟ್ಟಾರೆ ಸೋಂಕಿತರಲ್ಲಿ ಚಿಕ್ಕಬಳ್ಳಾಪುರದಲ್ಲಿ ಇದುವರೆಗೂ 564, ಬಾಗೇಪಲ್ಲಿ 213, ಚಿಂತಾಮಣಿ 265, ಗೌರಿಬಿದನೂರು 378. ಗುಡಿಬಂಡೆ 85, ಶಿಡ್ಲಘಟ್ಟ 142ಕ್ಕೆ ಏರಿಕೆ ಕಂಡಿದೆ.
1040 ಮಂದಿ ಡಿಸ್ಚಾರ್ಜ್:
ಜಿಲ್ಲೆಯಲ್ಲಿರುವ ಒಟ್ಟು 1,647 ಮಂದಿ ಪೈಕಿ ಇದುವರೆಗೂ ಜಿಲ್ಲೆಯಲ್ಲಿ 33 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. 1 ಕೋವಿಡ್ ಅಲ್ಲದ ಅನ್ಯ ಕಾರಣಕ್ಕೆ ಸಾವುಗೀಡಾಗಿದ್ದಾರೆ. ಉಳಿದಂತೆ ಒಟ್ಟು 1,040 ಮಂದಿ ಇದುವರೆಗೂ ರೋಗದಿಂದ ಗುಣಮುಖರಾಗಿದ್ದು, ಇನ್ನೂ 573 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿ ಇದ್ದು ಸೋಂಕಿತರು ಜಿಲ್ಲಾ ಕೋವಿಡ್ ಆಸ್ಪತ್ರೆ ಸೇರಿದಂತೆ ಆಯಾ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸ್ಥಾಪಿಸಿರುವ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.