ಚಿಕ್ಕಬಳ್ಳಾಪುರ ಜಿಲ್ಲೆಯ 5ವಿಧಾನಸಭಾ ಕ್ಷೇತ್ರದಲ್ಲಿ ಕಮಲ ಅರಳಿಸುವುದೇ ಗುರಿ: ಡಾ.ಕೆ.ಸುಧಾಕರ್
Team Udayavani, Dec 6, 2020, 9:21 PM IST
ಚಿಕ್ಕಬಳ್ಳಾಪುರ: ಕೋಲಾರ-ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿಜೆಪಿ ಪಕ್ಷವನ್ನು ಬಲಿಷ್ಠಗೊಳಿಸಲು ಈಗಾಗಲೇ ಕ್ರಮ ಕೈಗೊಂಡಿದ್ದು ಮುಂದಿನ ದಿನಗಳಲ್ಲಿ ಬಿಜೆಪಿ ಪ್ರಬಲ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ನಗರದ ಸಿದ್ದೇಶ್ವರ ಸಮುದಾಯ ಭವನದಲ್ಲಿ ಮಾಜಿ ಶಾಸಕ ಎಂ.ರಾಜಣ್ಣ,ಜಿಪಂ ಸದಸ್ಯ ಡಾ.ಜಯರಾಂರೆಡ್ಡಿ ಹಾಗೂ ಅವರ ಬೆಂಬಲಿಗರನ್ನು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ರಾಜಣ್ಣ,ಮಾಜಿ ಶಾಸಕ ದಿ.ಎಸ್.ಮುನಿಶಾಮಪ್ಪ ಅವರ ಪುತ್ರ ಜಿಪಂ ಸದಸ್ಯೆ ಡಾ.ಜಯರಾಂರೆಡ್ಡಿ ಅವರ ಬೆಂಬಲಿಗರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಒಂದು ಶಕ್ತಿಬಂದಿದೆ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಮೆಚ್ಚಿ ರಾಜ್ಯ ಬಿಜೆಪಿ ಸರ್ಕಾರದ ನೀತಿ ಮತ್ತು ಜನಪರ ಯೋಜನೆಗಳನ್ನು ನೋಡಿ ಅನೇಕ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಬಿಜೆಪಿ ಪಕ್ಷಕ್ಕೇ ಸೇರ್ಪಡೆಯಾಗಲು ತುದಿಗಾಲಿನಲ್ಲಿ ನಿಂತಿದ್ದಾರೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಾಜಿ ಶಾಸಕ ಎಂ.ರಾಜಣ್ಣ ಅವರು ಸೇರ್ಪಡೆಯಾಗಿರುವುದು ಕೇವಲ ಟ್ರೇಲರ್ ಮಾತ್ರ ಮುಂದೆ ಪಿಕ್ಚರ್ ಅಭೀ ಬಾಕಿ ಹೈ ಎನ್ನುವ ಮೂಲಕ ಅನೇಕ ಮುಖಂಡರು ಪಕ್ಷಾಂತರ ಮಾಡಲಿದ್ದಾರೆ ಎಂದು ಸುಳಿವು ನೀಡಿದರು.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ ಜೊತೆಗೆ ಶಿಸ್ತಿನ ಪಕ್ಷ ಇಲ್ಲಿ ಸುಧಾಕರ್ ಹೇಳದಂಗೆ ಇನ್ನೊಬ್ಬರು ಹೇಳದಂಗೆ ನಡೆಯುವುದಿಲ್ಲ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಅನೇಕ ರೀತಿಯ ಅಭಿವೃಧ್ಧಿ ಕೆಲಸವನ್ನು ಮಾಡಿರುವ ಮಾಜಿ ಶಾಸಕ ಎಂ.ರಾಜಣ್ಣ ಅವರು ಬೇಷರತ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಪಕ್ಷದ ವರಿಷ್ಠರು ಕ್ಷೇತ್ರದಲ್ಲಿ ಜನರ ವಿಶ್ವಾಸವನ್ನುಗಳಿಸಿ ಪಕ್ಷ ಸಂಘಟನೆ ಮಾಡಿ ಕೆಲಸ ಮಾಡುವರನ್ನು ಗುರುತಿಸಿ ಪಕ್ಷದ ವರಿಷ್ಠರು ಟಿಕೇಟ್ ನೀಡಲು ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್ ಮುಳುಗುತ್ತಿರುವ ಹಡಗು: ರಾಜ್ಯದಲ್ಲಿ ಸರ್ಕಾರ ಜಾರಿಗೊಳಿಸುವ ಯೋಜನೆಗಳನ್ನು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಪರಿಣಾಮ ಅಭಿವೃಧ್ಧಿಯಲ್ಲಿ ರಾಜ್ಯದಲ್ಲಿ 7ನೇ ಸ್ಥಾನವನ್ನು ಪಡೆದುಕೊಂಡರು ಸಹ ತಮ್ಮ ಅಧಿಕಾರಾವಧಿಯಲ್ಲಿ ಯಾವುದೇ ರೀತಿಯ ಒಂದು ಕಪ್ಪುಚುಕ್ಕೆ ಇಲ್ಲದೇ ಪಾರದರ್ಶಕವಾಗಿ ಆಡಳಿತ ನಡೆಸಿದರು ಜೆಡಿಎಸ್ ಪಕ್ಷದಿಂದ ಟಿಕೇಟ್ ತಪ್ಪಿಸಿದರು ಪಕ್ಷದ ಧೋರಣೆಯಿಂದ ಬೇಸತ್ತು ಅನೇಕ ಮುಖಂಡರು ಬೇರೆ ಪಕ್ಷಗಳಿಗೆ ಹೋಗುತ್ತಿದ್ದಾರೆ ರಾಜ್ಯ ಜೆಡಿಎಸ್ ನಾಯಕರು ಹತಾಶರಾಗಿದ್ದಾರೆ ಜೆಡಿಎಸ್ ಪಕ್ಷ ಮುಳುಗುತ್ತಿರುವ ಹಡಗು ಮಾತ್ರ ಎಂದು ಲೇವಡಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಮಾವು ಅಭಿವೃಧ್ಧಿ ನಿಗಮದ ಅಧ್ಯಕ್ಷ ಕೆವಿ ನಾಗರಾಜ್,ನಗರಸಭೆಯ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ(ಬಾಬು),ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಾಂಜಿಪ್ಪ,ಪ್ರಧಾನ ಕಾರ್ಯದರ್ಶಿ ಮರಳಕುಂಟೆ ಕೃಷ್ಣಮೂರ್ತಿ,ಜಿಲ್ಲಾ ಸಹ ವಕ್ತಾರ ರಮೇಶ್‍ಬಾಯಿರಿ,ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ,ಚಿಕ್ಕಬಳ್ಳಾಪುರ ತಾಪಂ ಅಧ್ಯಕ್ಷ ರಾಮಸ್ವಾಮಿ,ಶಿಡ್ಲಘಟ್ಟ ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಂದ್ರಗೌಡ,ನಗರ ಮಂಡಲ ಅಧ್ಯಕ್ಷ ರಾಘವೇಂದ್ರ,ಮುಖಂಡರಾದ ನಾರ್ಥ್‍ಈಸ್ಟ್ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.