ಡಿಕೆಶಿ ವಿರುದ್ಧ ಕ್ರಮ ತೆಗೆದುಕೊಳ್ಳಿ: ಡಿಜಿಪಿಗೆ ಮಕ್ಕಳ ಆಯೋಗದ ಪತ್ರ
ಡಿಕೆಶಿಗೆ ಪೋಕ್ಸೋ ಸಂಕಷ್ಟ ? ಏಳು ದಿನದಲ್ಲಿ ವರದಿ ನೀಡಲು ಸೂಚನೆ
Team Udayavani, Jan 11, 2022, 11:53 AM IST
ಬೆಂಗಳೂರು:ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಒಂದಿಲ್ಲೊಂದು ವಿವಾದ ಸೃಷ್ಟಿಸಿಕೊಳ್ಳುತ್ತಲೇ ಬಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಈಗ ಮತ್ತೊಂದು ಆತಂಕ ಎದುರಾಗಿದೆ. ಅವರ ವಿರುದ್ಧ ಪೋಕ್ಸೋ ಹಾಗೂ ಆರ್‌ಟಿಇ ಕಾಯಿದೆ ಅನ್ವಯ ಶೀಘ್ರ ಕ್ರಮ ತೆಗೆದುಕೊಂಡು ವರದಿ ನೀಡುವಂತೆ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ರಾಜ್ಯ ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಪತ್ರ ಮುಖೇನ ನಿರ್ದೇಶನ ನೀಡಿದೆ.
ಶಾಲಾ ವಿದ್ಯಾರ್ಥಿಗಳನ್ನು ರಾಜಕೀಯ ಕಾರ್ಯಕ್ರಮಕ್ಕೆ ಬಳಸಿಕೊಳ್ಳುವುದರ ಜತೆಗೆ ಸೂಕ್ತ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ತೆಗೆದುಕೊಂಡ ಕ್ರಮ ಏನೆಂಬ ಬಗ್ಗೆ ಏಳು ದಿನದೊಳಗಾಗಿ ವರದಿ ನೀಡಿ ಎಂದು ಆಯೋಗದ ಅಧ್ಯಕ್ಷೆ ಪ್ರಿಯಾಂಕ ಕನೂನ್ಗೋ ಸೂಚಿಸಿದ್ದಾರೆ.
ಕೋವಿಡ್ ನಿಯಮ ಉಲ್ಲಂಘನೆಗಾಗಿ ಸೋಮವಾರ ರಾಜ್ಯ ಸರಕಾರ ಡಿ.ಕೆ.ಶಿವಕುಮಾರ್ ಸೇರಿದಂತೆ 30 ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಿತ್ತು. ಇದರ ಬೆನ್ನಲ್ಲೆ ರಾಷ್ಟ್ರೀಯ ಮಕ್ಕಳ ಹಕ್ಕು ಆಯೋಗವೂ ಅಖಾಡಕ್ಕೆ ಇಳಿದಿದ್ದು, ಮೇಕೆದಾಟು ಪಾದಯಾತ್ರೆ ರಾಷ್ಟ್ರ ಮಟ್ಟದಲ್ಲಿ ವಿವಾದ ಸೃಷ್ಟಿಸುವುದು ನಿಚ್ಚಳವಾಗಿದೆ.
ಏನಿದು ವಿವಾದ ? :
ಮೇಕೆದಾಟು ಪಾದಯಾತ್ರೆಯ ಎರಡನೇ ದಿನ ಕನಕಪುರದ ಶಾಲೆಗೆ ಭೇಟಿ ನೀಡಿದ್ದ ಶಿವಕುಮಾರ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮಾಸ್ಕ್ ಧರಿಸದೇ ಮಕ್ಕಳ ಜತೆ ಅರ್ಧಗಂಟೆಗೂ ಹೆಚ್ಚು ಕಾಲ ಸಮಯ ಕಳೆದಿದ್ದರು. ಜತೆಗೆ ಮಕ್ಕಳಿಂದ ರಾಜಕೀಯ ಘೋಷಣೆ ಹಾಕಿಸಿದ್ದರು. ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಲಾಗಿತ್ತು.
ಮಕ್ಕಳ ಜತೆಗೆ ಕಳೆದ ಸಮಯದ ವಿಡಿಯೋ ತುಣುಕನ್ನು ಶಿವಕುಮಾರ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದನ್ನು ಗಮನಿಸಿದ ಆಯೋಗ ಸುಮೋಟೋ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.