ಮಕ್ಕಳೆ ರಾಜಕಾರಣಿ ಮಾತ್ರ ಆಗಬೇಡಿ: ಶಾಸಕ ಎಂ.ವೈ.ಪಾಟೀಲ್ ಕರೆ


Team Udayavani, Feb 25, 2023, 2:24 PM IST

thumb-2

ಕಲಬುರಗಿ: ಮಕ್ಕಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಂಡು ಗುರಿಯೊಂದಿಗೆ ಸಾಧನೆ ಮಾಡಬೇಕು ಎಂದು ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಮಕ್ಕಳಿಗೆ ಸಲಹೆ ನೀಡಿದರು.

ಕಲ್ಯಾಣ ಕರ್ನಾಟಕ ಉತ್ಸವದ ಹಿನ್ನೆಲೆಯಲ್ಲಿ ಕಲಬುರಗಿ ವಿವಿಯ ಬಯಲು ರಂಗಮಂದಿರ ಶನಿವಾರ ಆಯೋಜಿಸಿದ ಮಕ್ಕಳ ಉತ್ಸವ ಉದ್ಘಾಟಿಸಿ ಮಾತನಾಡಿ, ಇದು ಕೇವಲ ಉತ್ಸವ ಅಲ್ಲ, ನಮ್ಮ ಭಾಗದ ದೊಡ್ಡ ಹಬ್ಬವಾಗಿದೆ. ಭಾರತ ಸ್ವಾತಂತ್ರ್ಯ ಮತ್ತು ನಿಜಾಮ ಶಾಹಿಯಿಂದ ಮುಕ್ತಿ ಪಡೆದ ಬಳಿಕ ಸ್ವಾತಂತ್ರೋತ್ಸವವನ್ನು ಮಾರ್ಪಾಟಾಗಿ ಕಲ್ಯಾಣ ಕರ್ನಾಟಕ ಉತ್ಸವವಾಗಿ ಆಚರಿಸಲಾಗುತ್ತಿದೆ. ಹೀಗಾಗಿ ಈ ಭಾಗದ ಎಲ್ಲರು ಆಸಕ್ತಿಯಿಂದ ಪಾಲ್ಗೊಳ್ಳಬೇಕು ಎಂದರು.

ರಾಜಕಾರಣಿ ಮಾತ್ರ ಆಗಬೇಡಿ
ಏಳು ಜಿಲ್ಲೆಯನ್ನು ಒಳಗೊಂಡು ಈ ಉತ್ಸವ ಆಚರಿಸಲಾಗುತ್ತಿದೆ. ಆದರೆ ಶುಕ್ರವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಉದ್ಘಾಟನೆ ಸಮಾರಂಭದಲ್ಲಿ ಈ ಭಾಗದ ಜನಪ್ರತಿನಿಧಿಗಳ ಗೈರು ಹಾಜರಿ ಕಾಣುತ್ತಿತ್ತು ಎಂದು ಬೇಸರ ವ್ಯಕ್ತ ಪಡಿಸಿದ ಅವರು, ಈಗಾಗಲೇ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ ದೊಡ್ಡ ಮಟ್ಟದ ಉತ್ಸವಕ್ಕೆ ಎಲ್ಲ ಜನಪ್ರತಿನಿಧಿಗಳು ಭಾಗವಹಿಸಲು ಕೇಳಿಕೊಳ್ಳಲಾಯಿತು. ಆದರೆ ಅವರು ಭಾಗವಹಿಸದೆ ಇರುವುದು ನೋವು ತಂದಿದೆ ಎಂದರು.

ಮಕ್ಕಳು ಏನಾದರೂ ಆಗಿ ಆದರೆ ರಾಜಕಾರಣಿ ಮಾತ್ರ ಆಗಬೇಡಿ ಎಂದು ಸಲಹೆ ನೀಡಿದ ಅವರು, ಗುರಿ ಸಾಧಿಸಿ ಉನ್ನತ ಮಟ್ಟದ ಅಧಿಕಾರಿಗಳಾಗಿ ಹೊರಹೊಮ್ಮಿ ಎಂದರು.

ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಮಾತನಾಡಿ,ಕಲ್ಯಾಣ ಕರ್ನಾಟಕ ಭಾಗ ಕನ್ನಡಕ್ಕೆ ವಿಶೇಷ ಕೊಡುಗೆ ನೀಡಿದೆ. ಇಲ್ಲಿನ ಇತಿಹಾಸ ಎಲ್ಲರೂ ತಿಳಿದುಕೊಳ್ಳಬೇಕು ಎಂದರು. ಮಕ್ಕಳು ಸ್ಪರ್ಧಾತ್ಮಕ ಗುಣ ಬೆಳೆಸಿಕೊಂಡು ದೊಡ್ಡ ಕಲಾವಿದರಾಗಿ ಹೊರಹೊಮ್ಮಬೇಕು. ಈ ಭಾಗದ ಖ್ಯಾತ ಚಿತ್ರ ಕಲಾವಿದರಾದ ಎಸ್.ಎಂ.ಪಂಡಿತ, ನಾಡೋಜ ಖಂಡೇರಾವ್, ವಿ‌.ಜಿ.ಅಂದಾನಿ, ಎ.ಎಸ್.ಪಾಟೀಲ್ ಅವರ ಸಾಧನೆ ತಿಳಿದುಕೊಂದು ನೀವು ದೊಡ್ಡ ಕಲಾವಿದರಾಗಬೇಕು ಎಂದು ಕರೆ ನೀಡಿದರು. ರಾಜ್ಯ ಸರ್ಕಾರ ಶೀಘ್ರದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಪಟ್ಟಿ ಬಿಡುಗಡೆ ಮಾಡಲಿದ್ದು, ಅದರಲ್ಲಿ ನಮ್ಮ ಭಾಗದಿಂದ 5 ಸಾವಿರ ಶಿಕ್ಷಕರು ನೇಮಕವಾಗುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಕನಸು ನನಸಾಗಿಸಲು ಶ್ರಮಿಸಿ
ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ ಮಾತನಾಡಿ, ನಮ್ಮ ಭಾಗದ ಜಿಲ್ಲೆಗಳಲ್ಲಿರುವ ಮಕ್ಕಳ ಪ್ರತಿಭೆಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಶೇಷವಾಗಿ ಮಕ್ಕಳ ಉತ್ಸವ ಆಚರಿಸುತ್ತಿದ್ದೇವೆ. ಇದರ ಲಾಭ ಪಡೆದುಕೊಂಡರು ನಿಮ್ಮ ಕಲಾಪ್ರತಿಭೆ ಪ್ರದರ್ಶಿಸಬೇಕು. ಚಿತ್ರಕಲೆಯೊಂದಿಗೆ ಓದಿಗೆ ಒತ್ತು ನೀಡಿ ನಿಮ್ಮ ಕನಸು ನನಸಾಗಿಸಲು ಮುಂದೆ ಬರಬೇಕು. ತಾರೆ ಜಮಿನ್ ಪರ ಚಲನಚಿತ್ರವನ್ನು ಉದಾಹರಿಸಿ ಮಕ್ಕಳಿಗೆ ಹುರಿದುಂಬಿಸಿದರು.

ಕೆಕೆಆರ್ ಡಿಬಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಸುಮಾರು 500 ಸಾವಿರ ಕೋಟಿ ಮೀಸಲಿಟ್ಟಿದೆ. ನೂತನ ಶಾಲಾ ಕೋಣೆಗಳು ಸೇರಿತ ಮೂಲಸೌಕರ್ಯ ಒದಗಿಸಲಾಗುತ್ತಿದೆ ಎಂದರು.
ಸಮಾರಂಭದಲ್ಲಿ ಡಿಡಿಪಿಐ ಶಂಕರಗೌಡ ಬಿರಾದಾರ, ಬಿಇಓಗಳಾದ ವೀರಣ್ಣ ಬೊಮ್ಮನಹಳ್ಳಿ, ಶಂಕರಮ್ಮ ಡವಳಿ, ಚಿತ್ರಕಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಾನಂದ ಕೊಪ್ಪದ, ರಿಜಿಸ್ಟಾರ್ ಶರಣಪ್ಪ ಸತ್ಯಂಪೇಟೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತೆ ಪಂವಾರ್, ಚಂದ್ರಹಾಸ, ರಾಜೇಶ ಇತರರಿದ್ದರು.

ಗಮನ ಸೆಳೆದ ಮಕ್ಕಳ ಮೋಜಿನ ಆಟ
ಬಯಲು ರಂಗ ಮಂದಿರದಲ್ಲಿ ನಡೆದ ಮಕ್ಕಳ ಉತ್ಸವದಲ್ಲಿ ವಿಶೇಷವಾಗಿ ಮಕ್ಕಳ ಮೋಜಿನ ಆಟ ಗಮನ ಸೆಳೆಯಿತು. ಬಲೂನ ಒಡೆಯುವುದು, ಬಲೂನ ಸಹಾಯದಿಂದ ಗ್ಲಾಸ್ ಶಿಫ್ಟ್ ಮಾಡುವುದು, ಅದೃಷ್ಟದ ರಿಂಗ್ ಆಡುವುದು, ಧರ್ಮಾಕೋಲ ಬಾಲ ಸಂಗ್ರಹ, ಜಂಪಿಂಗ್ ಬಾಲ ಆಡುವುದು, ಬಕೆಟ್ ಗೋಲ್, ಟಿಕಳಿ ಮತ್ತು ಬಾಲ ಹಚ್ಚುವುದು, ನಿಂಬೆ ಹಣ್ಣಿನ ಆಟ, ಪಾಸಿಂಗ್ ಬಾಲ, ಬ್ಯಾಲೆನಸಿಂಗ್ ಬಾಲ ಆಟ ಆಡುವ ಮೂಲಕ ಸಂಭ್ರಮಿಸಿದರು. ಗೆದ್ದ ಮಕ್ಕಳಿಗೆ ಸ್ಥಳದಲ್ಲಿಯೇ ಚಾಕಲೇಟ್ ಮತ್ತು ಬಿಸ್ಕೆಟ್ ನೀಡಿ ಆಟಕ್ಕೆ ಆಯೋಜಕರು ಹುರಿದುಂಬಿಸಿದರು.

ಇನ್ನೊಂದೆಡೆ ಕಲ್ಯಾಣ ಕರ್ನಾಟಕ ಭಾಗದ ಸುಮಾರು 1500ಕ್ಕು ಹೆಚ್ಚು ಮಕ್ಕಳ ಚಿತ್ರಕಲೆ ಸ್ಪರ್ಧೆಯಲ್ಲಿ ಭಾಗವಹಿಸಿದರು. 6ನೇ ತರಗತಿಯಿಂದ 8ನೇ ತರಗತಿ ಮಕ್ಕಳಿಗೆ ಕಲ್ಯಾಣ ಕರ್ನಾಟಕ ಐತಿಹಾಸಿಕ ಸ್ಥಳಗಳು, 9 ರಿಂದ 12ನೇಯವರಿಗೆ ಕಲ್ಯಾಣ ಕರ್ನಾಟಕದ ಸಾಂಸ್ಕೃತಿಕ ವೈಭವ ಮತ್ತು ಸ್ನಾತಕ ಮತ್ತು ಪದವಿದವರಿಗೆ ಹೈದ್ರಾಬಾದ್ ಕರ್ನಾಟಕ ವಿಮೋಚನಾ ಚಳವಳಿ ವಿಷಯ ಕುರಿತು ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಪ್ರಥಮ ಬಹುಮಾನಕ್ಕೆ 10 ಸಾವಿರ, ದ್ವಿತೀಯ ಬಹುಮಾನಕ್ಕೆ 8500 ರೂ. ಮತ್ತು ತ್ರತೀಯ ಬಹುಮಾನಕ್ಕೆ 7000 ಸಾವಿರ ರೂ. ಹಾಗೂ 7 ಸಮಾಧಾನಕರ ಬಹುಮಾನವೆಂದು ತಲಾ 3 ಸಾವಿರ ರೂ. ನಿಗದಿಪಡಿಸಲಾಗಿದೆ. ಪ್ರತಿ ವಿಭಾಗದ ಸ್ಪರ್ಧೆಯ ನಿರ್ಣಾಯಕರಾಗಿ 9 ಜನ ಶಿಕ್ಷಕರು ಕಾರ್ಯನಿರ್ವಹಿಸಿದರು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.