ಯಾರತ್ತ ಗುರಿ ಅಮೆರಿಕ, ಭಾರತ:ಯುದ್ಧಕ್ಕೆ ಸಿದ್ಧತೆ ನಡೆಸಿ…ಚೀನಾ ಸೇನೆಗೆ ಅಧ್ಯಕ್ಷ ಕ್ಸಿ ಸೂಚನೆ

ಲಡಾಖ್ ನಲ್ಲಿನ ಗಡಿ ವಿವಾದದ ಹಿನ್ನೆಲೆಯಲ್ಲಿ ಯುದ್ಧಕ್ಕೆ ಸಿದ್ದರಾಗಿರಿ ಎಂದು ಸೂಚನೆ ನೀಡಿರಬಹುದು

Team Udayavani, Oct 15, 2020, 6:47 PM IST

ಯಾರತ್ತ ಗುರಿ ಅಮೆರಿಕ, ಭಾರತ:ಯುದ್ಧಕ್ಕೆ ಸಿದ್ಧತೆ ನಡೆಸಿ…ಚೀನಾ ಸೇನೆಗೆ ಅಧ್ಯಕ್ಷ ಕ್ಸಿ ಸೂಚನೆ

ಬೀಜಿಂಗ್/ನವದೆಹಲಿ:ಒಂದೆಡೆ ಅಮೆರಿಕ ಜತೆ ಚೀನಾ ಸಂಘರ್ಷಕ್ಕೆ ಇಳಿದಿದ್ದು, ಮತ್ತೊಂದೆಡೆ ಲಡಾಖ್ ನ ಎಲ್ ಎಸಿ ಗಡಿ ವಿಚಾರದಲ್ಲಿ ಭಾರತದ ವಿರುದ್ಧ ಸೆಡ್ಡು ಹೊಡೆಯುತ್ತಿರುವ ನಡುವೆಯೇ ಎಲ್ಲಾ ರೀತಿಯಿಂದಲೂ “ಯುದ್ಧಕ್ಕೆ ಸಿದ್ಧತೆ” ನಡೆಸಿ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಸೇನೆಗೆ ಸೂಚನೆ ನೀಡಿರುವುದಾಗಿ ಕ್ಸಿನ್ ಹುವಾ ವರದಿ ಮಾಡಿದೆ.

ದೇಶದ ಸೇನಾಪಡೆ ಹೈ ಅಲರ್ಟ್ ಆಗಿದ್ದು, ನಿಮ್ಮೆಲ್ಲಾ ಮನಸ್ಸು ಮತ್ತು ಶಕ್ತಿಯನ್ನು ಯುದ್ಧದ ಸಿದ್ಧತೆಗೆ ವಿನಿಯೋಗಿಸಬೇಕು ಎಂದು ಕ್ಸಿ ನಿರ್ದೇಶನ ನೀಡಿರುವುದಾಗಿ ವರದಿ ವಿವರಿಸಿದೆ.

ನಮ್ಮ ಸೇನಾಪಡೆ ಸಂಪೂರ್ಣವಾಗಿ ನಿಷ್ಠಾವಂತ, ಸಂಪೂರ್ಣ ಶುದ್ಧ ಮತ್ತು ಸಂಪೂರ್ಣ ವಿಶ್ವಾಸಾರ್ಹವಾಗಿರಬೇಕು ಎಂದು ಕ್ಸಿ ಜಿನ್ ಪಿಂಗ್ ಅವರು ಚಾಝೌ ನಗರದ ಪಿಎಲ್ ಎ ಮೆರೈನ್ ಕಾರ್ಪ್ಸ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡುತ್ತ ತಿಳಿಸಿರುವುದಾಗಿ ವರದಿ ಹೇಳಿದೆ.

ಮೂಲಗಳ ಪ್ರಕಾರ, ಚೀನಾ ಅಧ್ಯಕ್ಷ ಕ್ಸಿ ಈ ಹೇಳಿಕೆ ಭಾರತವನ್ನು ನೇರವಾಗಿ ಉದ್ದೇಶಿಸಿ ಹೇಳಿಲ್ಲ ಎನ್ನಲಾಗಿದೆ. ಆದರೂ ಲಡಾಖ್ ನಲ್ಲಿನ ಗಡಿ ವಿವಾದದ ಹಿನ್ನೆಲೆಯಲ್ಲಿ ಯುದ್ಧಕ್ಕೆ ಸಿದ್ದರಾಗಿರಿ ಎಂದು ಸೂಚನೆ ನೀಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ:ಬಿಹಾರ ರಾಜಕೀಯ ರಂಗು: ಮೂವರು ಸ್ಟಾರ್ ನಾಯಕರು… ಅಟಲ್ ಮೇಲಿನ ಕೋಪಕ್ಕೆ ಎಲ್ ಜೆಪಿ ಸ್ಥಾಪನೆ

ಅಮೆರಿಕ ಗುರಿ?

ಅಮೆರಿಕದ ಯುದ್ಧ ನೌಕೆ ತೈವಾನ್ ಜಲಸಂಧಿಯಲ್ಲಿ ಸಂಚರಿಸಿದ್ದು, ಅಮೆರಿಕ ಮತ್ತು ಚೀನಾ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ ಎಂದು ವರದಿ ಹೇಳಿದೆ. ಅಮೆರಿಕದ ಕ್ಷಿಪಣಿ ನಾಶಕ ಯುಎಸ್ ಎಸ್ ಅಕ್ಟೋಬರ್ 14ರಂದು ತೈವಾನ್ ಜಲಸಂಧಿ ಮೂಲಕ ಹಾದು ಹೋಗಿತ್ತು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಚೀನಾ, ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ ಎಂದು ವರದಿ ಹೇಳಿದೆ.

ತೈವಾನ್ ನಲ್ಲಿ ಅಮೆರಿಕ ಯುದ್ಧ ನೌಕೆ ಸಂಚರಿಸಿರುವ ಘಟನೆ ಕಾಕತಾಳೀಯ ಎಂಬಂತೆ ಕ್ಸಿ ಜಿನ್ ಪಿಂಗ್ ಯುದ್ಧಕ್ಕೆ ಸಿದ್ದರಾಗಿ ಎಂಬ ಹೇಳಿಕೆ ನೀಡಿರುವುದು ಮೂರನೇ ಜಾಗತಿಕ ಯುದ್ಧದ ಮುನ್ಸೂಚನೆಯೇ ಎಂಬ ಬಗ್ಗೆ ವಿಶ್ಲೇಷಿಸಲಾಗುತ್ತಿದೆ.

ಲಡಾಖ್ ನಲ್ಲಿಯೂ ನಿಲ್ಲದ ಜಟಾಪಟಿ:

ಲಡಾಖ್ ಗಡಿಯಲ್ಲಿಯೂ ಸತತವಾಗಿ ಕಳೆದ ಮೂರು ತಿಂಗಳಿನಿಂದ ಭಾರತ ಮತ್ತು ಚೀನಾ ನಡುವೆ ಸಂಘರ್ಷ ನಡೆಯುತ್ತಲೇ ಇದೆ. ಅಷ್ಟೇ ಅಲ್ಲ ಗಡಿ ಪ್ರದೇಶದಲ್ಲಿ ಭಾರತ ಸೇನೆಯನ್ನು ಭಾರೀ ಪ್ರಮಾಣದಲ್ಲಿ ರವಾನಿಸಿದೆ. ಚೀನಾ ಕೂಡಾ ಸೇನೆಯನ್ನು ನಿಯೋಜಿಸಿದೆ. ಯುದ್ಧ ವಿಮಾನ, ಯುದ್ಧ ಟ್ಯಾಂಕ್, ರಫೇಲ್ ನಿಯೋಜನೆ ಯುದ್ಧದ ಭೀತಿಯನ್ನು ಮೂಡಿಸಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

arrested

Mangaluru: ಕಾರಾಗೃಹದೊಳಗೆ ಮೊಬೈಲ್ ಎಸೆಯಲು ಯತ್ನಿಸಿದವ ಅರೆಸ್ಟ್

Beggars baby

Indore; ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಂಡರೆ ನಾಗರಿಕರಿಗೆ 1,000 ರೂ. ಬಹುಮಾನ!

police crime

Anmol Bishnoi; ಅಪರಾಧ ಜಾಲದ ಪ್ರಾಬಲ್ಯ ಸ್ಥಾಪಿಸಲು ಬಾಬಾ ಸಿದ್ದಿಕಿ ಹ*ತ್ಯೆ!

Ullala-bike-Accident

Ullala: ಲಾರಿ-ಬೈಕ್ ಅಪಘಾತ: ಮೆಡಿಕಲ್ ಅಂಗಡಿ ಮಾಲೀಕ ದಾರುಣ ಮೃತ್ಯು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

South Korea: ಅಧ್ಯಕ್ಷ ಯೂನ್‌ ರನ್ನು ಕೂಡಲೇ ಬಂಧಿಸಿ: ಪೊಲೀಸರಿಗೆ ದಕ್ಷಿಣ ಕೊರಿಯಾ!

South Korea: ಅಧ್ಯಕ್ಷ ಯೂನ್‌ ರನ್ನು ಕೂಡಲೇ ಬಂಧಿಸಿ: ಪೊಲೀಸರಿಗೆ ದಕ್ಷಿಣ ಕೊರಿಯಾ!

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Trump-Maga

Make America Great Again: ಅಮೆರಿಕದಲ್ಲಿ ಸ್ವದೇಶಿ vs ವಲಸಿಗರು ಜಟಾಪಟಿ

Islamabad: ಪಾಕಿಸ್ಥಾನಕ್ಕೆ ವಿಶ್ವಬ್ಯಾಂಕ್‌ನಿಂದ 1.70 ಲಕ್ಷ ಕೋಟಿ ರೂ. ಸಾಲ

Islamabad: ಪಾಕಿಸ್ಥಾನಕ್ಕೆ ವಿಶ್ವಬ್ಯಾಂಕ್‌ನಿಂದ 1.70 ಲಕ್ಷ ಕೋಟಿ ರೂ. ಸಾಲ

9

Dhaka; ವರ್ಷಾಂತ್ಯಕ್ಕೆ ಬಾಂಗ್ಲಾ ಸಂಸತ್‌ ಚುನಾವಣೆ ಸಾಧ್ಯತೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

Untitled-1

Kasaragod Crime News: ನೇಣು ಬಿಗಿದು ಯುವಕ ಆತ್ಮಹ*ತ್ಯೆ

arrested

Mangaluru: ಕಾರಾಗೃಹದೊಳಗೆ ಮೊಬೈಲ್ ಎಸೆಯಲು ಯತ್ನಿಸಿದವ ಅರೆಸ್ಟ್

1-korata

Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು

Kaup ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

Kaup ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.