ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರ ಮಿತಿ: ಏ. 7ರಿಂದ ಅನ್ವಯ
Team Udayavani, Apr 3, 2021, 10:40 PM IST
ಬೆಂಗಳೂರು: ರಾಜ್ಯದ ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರ ಮಿತಿ ಹೇರಿಕೆಗೆ ಚಿತ್ರರಂಗದಿಂದ ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಮಾರ್ಗಸೂಚಿಯನ್ನು ಸ್ವಲ್ಪ ಸಡಿಲಿಸಿದ್ದು, ಏ. 6ರವರೆಗೆ ಚಿತ್ರಮಂದಿರಗಳಲ್ಲಿ ಶೇ. 100ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದೆ. ಶೇ. 50ರಷ್ಟು ಪ್ರೇಕ್ಷಕರ ಮಿತಿಯು ಏ. 7ರಿಂದ ಅನ್ವಯವಾಗಲಿದೆ.
ಕೋವಿಡ್ ವ್ಯಾಪಕವಾಗಿ ಕಾಣಿಸಿಕೊಳ್ಳುತ್ತಿರುವ ಬೆನ್ನಲ್ಲೇ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರ ಮಿತಿ ಸೇರಿದಂತೆ ಮಾರ್ಗಸೂಚಿಯನ್ನು ಏ. 20ರವರೆಗೆ ಅನ್ವಯವಾಗುವಂತೆ ಶುಕ್ರವಾರದಿಂದಲೇ ಜಾರಿಗೊಳಿಸಿತ್ತು. ಆದೇಶ ಹೊರಬಿದ್ದ ಕೆಲ ಹೊತ್ತಿನಲ್ಲೇ ನಟ ಪುನೀತ್ ರಾಜ್‌ಕುಮಾರ್ ಸಾಮಾಜಿಕ ಜಾಲತಾಣದ ಮೂಲಕ ಅಸಮಾಧಾನ ಹೊರಹಾಕುವ ಜತೆಗೆ ಶೇ. 100ರಷ್ಟು ಪ್ರೇಕ್ಷಕರ ವೀಕ್ಷಣೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು.
ಇದಕ್ಕೆ ದನಿಗೂಡಿಸಿ ಹಲವು ನಟ- ನಟಿಯರು, ಚಿತ್ರರಂಗದ ಪ್ರಮುಖರು ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಲಾರಂಭಿಸಿದ್ದರು. ಶನಿವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಇತರರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ನಟ ಪುನೀತ್ ಕುಮಾರ್ ಅವರು ಸಂಜೆ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಪ್ರೇಕ್ಷಕರ ಮಿತಿ ನಿರ್ಬಂಧ ಸಡಿಲಿಸುವಂತೆ ವಿನಂತಿಸಿದ್ದರು. ಮಾರ್ಗಸೂಚಿ ಹೊರಬಿದ್ದಾಗಿನಿಂದ ನಿರಂತರವಾಗಿ ಚಿತ್ರರಂಗದ ಗಣ್ಯರು, ಪ್ರಮುಖರ ವಿರೋಧ, ಒತ್ತಡ, ಮನವಿಗೆ ಕೊನೆಗೂ ಮಣಿದ ಸರ್ಕಾರ ಮಾರ್ಗಸೂಚಿಯನ್ನು ಸ್ವಲ್ಪ ಮಟ್ಟಿಗೆ ಸಡಿಲಿಸಿದೆ.
ಇದನ್ನೂ ಓದಿ :ಶಿರ್ವ :ಬಟ್ಟೆ ಖರೀದಿಗೆಂದು ತಾಯಿಜೊತೆ ಬಂದು ನಾಪತ್ತೆಯಾಗಿದ್ದ ಮಗು ಶವವಾಗಿ ಬಾವಿಯಲ್ಲಿ ಪತ್ತೆ
ಮುಖ್ಯ ಕಾರ್ಯದರ್ಶಿ ಆದೇಶ
ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರ ಮಿತಿ ನಿರ್ಬಂಧ ಮಾರ್ಗಸೂಚಿಯನ್ನು ಏ. 7ರಿಂದ ಅನ್ವಯವಾಗುವಂತೆ ಆದೇಶ ಹೊರಡಿಸಿದೆ. ಪ್ರೇಕ್ಷಕರು ಚಿತ್ರಮಂದಿರಗಳಲ್ಲಿ ಈಗಾಗಲೇ ಆನ್‌ಲೈನ್ ಮೂಲಕ ಟಿಕೆಟ್ ಕಾಯ್ದಿರಿಸಿದ್ದು, ದಿಢೀರ್ ನಿರ್ಬಂಧದಿಂದ ತೊಂದರೆಯಾಗಲಿದೆ ಎಂಬುದಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತ್ತು. ಆ ಹಿನ್ನೆಲೆಯಲ್ಲಿ ಏ. 2ರಿಂದ ಅನ್ವಯವಾಗಿದ್ದ ಶೇ. 50ರಷ್ಟು ಪ್ರೇಕ್ಷಕರ ಮಿತಿಯನ್ನು ಏ.7ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಶನಿವಾರ ಆದೇಶ ಹೊರಡಿಸಿದ್ದಾರೆ. ಹಾಗಾಗಿ ಏ.6ರವರೆಗೆ ಚಿತ್ರಮಂದಿರಗಳಲ್ಲಿ ಶೇ. 100ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶವಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.