MP ಸಹಾಯಕ ಎಂಜಿನಿಯರ್‌ ಮೇಲೆ ʻಲೋಕಾʼದಿಂದ ಸಿನಿಮೀಯ ದಾಳಿ

30 ಸಾವಿರ ಸಂಬಳ... ಆಸ್ತಿ 7 ಕೋಟಿ... ಸರ್ಕಾರಿ ಅಧಿಕಾರಿಯ ಆಸ್ತಿ ನೋಡಿದ ಪೊಲೀಸರಿಗೇ ಶಾಕ್‌!

Team Udayavani, May 12, 2023, 7:46 PM IST

bhopal engineer

ಭೋಪಾಲ: ಭೋಪಾಲದ ಸಹಾಯಕ ಇಂಜಿನಿಯರ್‌ ಒಬ್ಬರ ಮನೆ ಮೇಲೆ ದಾಳಿ ನಡೆಸಿದ ಮಧ್ಯ ಪ್ರದೇಶ ಲೋಕಾಯುಕ್ತ ಅಧಿಕಾರಿಗಳು ಅಕ್ಷರಶಃ ಬೆಚ್ಚಿ ಬಿದ್ದಿದ್ದಾರೆ.

ಭ್ರಷ್ಟಾಚಾರ ಮತ್ತು ಆದಾಯ ಮೀರಿದ ಆಸ್ತಿ ಗಳಿಕೆ ಹಿನ್ನಲೆಯಲ್ಲಿ ಗುರುವಾರ ಮಧ್ಯ ಪ್ರದೇಶ ಪೊಲೀಸ್‌ ವಸತಿ ನಿಗಮದ ಸಹಾಯಕ ಇಂಜಿನಿಯರ್‌ ಹೇಮಾ ಮೀನಾ ಅವರ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಅವರ ಮನೆಯಲ್ಲಿ 30 ಲಕ್ಷದ ಟಿ.ವಿ, ವಿದೇಶಿ ತಳಿಯ ನಾಯಿಗಳು, 10 ಕ್ಕೂ ಹೆಚ್ಚು ಐಶಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ತಿಂಗಳಿಗೆ 30,000 ರೂ. ಸಂಬಳ ಹೊಂದಿರುವ ಹೇಮಾ ಮೀನಾ ತಮ್ಮ ಆದಾಯಕ್ಕಿಂತ ಶೇ.232 ಹೆಚ್ಚಿನ ಆಸ್ತಿ ಗಳಿಸಿದ್ದಾರೆ. ಅಂದರೆ ಈ ಪ್ರಕಾರ ಇವರ ತಿಂಗಳ ಸಂಬಳ ಬರೋಬ್ಬರಿ 18 ಲಕ್ಷ.!

ಸಿನಿಮೀಯ ಕಾರ್ಯಾಚರಣೆ:

ಈ ಕಾರ್ಯಾಚರಣೆಗಾಗಿ ಮಧ್ಯ ಪ್ರದೇಶ ಲೋಕಾಯುಕ್ತ ಪೊಲೀಸ್‌ 50 ಮಂದಿಯ ವಿಶೇಷ ತಂಡವನ್ನು ರಚಿಸಿತ್ತು. ಮನೆಯನ್ನು ಸರ್ಚ್‌ ಮಾಡುವ ಸಲುವಾಗಿ ಸಿವಿಲ್‌ ಡ್ರೆಸ್‌ನಲ್ಲಿ ಬಂದಿದ್ದ ಪೋಲಿಸರು ಬಂಗಲೆಯ ಗಾರ್ಡ್‌ಗಳ ಬಳಿಯಲ್ಲಿ ತಮ್ಮನ್ನು ತಾವು ಸೋಲಾರ್‌ ಕಂಪೆನಿಯವರೆಂದು, ಪಶು ಸಂಗೋಪನಾ ಇಲಾಖೆಯವರೆಂದು  ಪರಿಚಯಿಸಿಕೊಂಡು ಬಂಗಲೆಯನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಆ ಬಳಿಕ ಬಂಗಲೆಯ ಮೂಲೆ ಮೂಲೆಯನ್ನೂ ಹುಡುಕಾಡಿದ ಅಧಿಕಾರಿಗಳು ಅಕ್ಷರಶಃ ಬೆಚ್ಚಿ ಬಿದ್ದಿದ್ದಾರೆ.

ಏನೇನು ವಶಕ್ಕೆ?

ಭೋಪಾಲ್‌ ಬಳಿಯಲ್ಲಿರುವ ಹೇಮಾ ಮೀನಾ ಅವರ ಬಂಗಲೆಯ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ತಮ್ಮ ತಂದೆಯ ಹೆಸರಿನಲ್ಲಿರುವ 20,000 ಚದರ ಅಡಿಯ 40 ಕೋಣೆಗಳ ಬಂಗಲೆಯನ್ನು ವಶ ಪಡಿಸಿಕೊಂಡಿದ್ಧಾರೆ. ಅದೂ ಅಲ್ಲದೇ ಸುಮಾರು 50 ಕ್ಕೂ ಹೆಚ್ಚು ವಿದೇಶಿ ನಾಯಿಗಳನ್ನು ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ಹಲವು ಪಿಟ್‌ಬುಲ್‌, ಡಾಬರ್‌ಮನ್‌ ನಾಯಿಗಳು ಹೆಚ್ಚಾಗಿದ್ದವು ಎಂದು ಪೊಲಿಸರು ಮಾಹಿತಿ ನೀಡಿದ್ದರು. ಅದರ ಜೊತೆಗೆ ಸುಮಾರು 70 ಕ್ಕೂ ಹೆಚ್ಚು ವಿವಿಧ ತಳಿಯ ಹಸುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಗಲೆಯ ಕೆಲಸದವರನ್ನು ಸಂಪರ್ಕಿಸಲು ಹೇಮಾ ವಾಕಿ-ಟಾಕಿ ಬಳಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

2.50 ಲಕ್ಷ ರೂ. ಮೌಲ್ಯದ ರೋಟಿ ಮೇಕಿಂಗ್‌ ಮೆಷಿನ್‌:

ನಾಯಿಗಳಿಗೆ ಆಹಾರವನ್ನು ಪೂರೈಸುವ ಉದ್ದೇಶದಿಂದ ಹೇಮಾ ತಮ್ಮ ಮನೆಯಲ್ಲಿ 2.50 ಲಕ್ಷ ಮೌಲ್ಯದ ರೋಟಿ ತಯಾರಿಕಾ ಯಂತ್ರವನ್ನು ಇಟ್ಟುಕೊಂಡಿದ್ದರು. ಅದನ್ನೂ ವಶ ಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅದೂ ಅಲ್ಲದೇ, ಹೇಮಾ ಅವರ ಫಾರ್ಮ್‌ ಹೌಸ್‌ಗೆ ದಾಳಿ ಮಾಡಿದ ಲೋಕಾಯುಕ್ತ ತಂಡ ಲಕ್ಷಾಂತರ ರೂ. ಮೌಲ್ಯದ ಕೃಷಿ ಯಂತ್ರಗಳನ್ನು ಜಪ್ತಿ ಮಾಡಿದ್ದಾರೆ. ವಿದೇಶಿ ಮದ್ಯ, ಸಿಗರೇಟುಗಳನ್ನೂ ವಶ ಪಡಿಸಿಕೊಂಡಿದ್ದಾರೆ.

ಈ ಪ್ರಕರಣದಲ್ಲಿ ಇನ್ನೂ ಹಲವು ಅಧಿಕಾರಿಗಳು ಭಾಗಿಯಾಗಿರುವ ಸಾಧ್ಯತೆಗಳಿದ್ದು, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿಶಾರುಖ್ ಪುತ್ರನ ಕೇಸ್; 25 ಕೋಟಿ ರೂ.ಲಂಚ: ಸಮೀರ್ ವಿರುದ್ಧ ಎಫ್‌ಐಆರ್

ಟಾಪ್ ನ್ಯೂಸ್

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.