Instagramನಲ್ಲಿ ಬಟ್ಟೆ ಆರ್ಡರ್: 80,560 ರೂ. ವಂಚನೆ
Team Udayavani, Apr 23, 2023, 7:16 AM IST
ಮಂಗಳೂರು: ಇನ್ಸ್ಟಾಗ್ರಾಂ ಖಾತೆಯ ಮೂಲಕ ಬಟ್ಟೆ ಆರ್ಡರ್ ಮಾಡಿದ ವ್ಯಕ್ತಿಯೋರ್ವರ ಖಾತೆಯಿಂದ 80,560 ರೂ.ಗಳನ್ನು ಮೋಸದಿಂದ ವರ್ಗಾಯಿಸಿಕೊಂಡಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರ ವ್ಯಕ್ತಿ ಮಾ.22ರಂದು P7_allure ಎಂಬ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಟ್ಟೆಯೊಂದನ್ನು ಆರ್ಡರ್ ಮಾಡಿದ್ದರು. ಹಲವು ದಿನ ಕಳೆದರೂ ಪಾರ್ಸೆಲ್ ಮನೆಗೆ ಬಂದಿರಲಿಲ್ಲ. ಎ.18ರಂದು ಬೆಳಗ್ಗೆ 10ಕ್ಕೆ ಅವರಿಗೆ 8371886720 ಸಂಖ್ಯೆಯಿಂದ ಕರೆ ಮಾಡಿದ ಅಪರಿಚಿತ ವ್ಯಕ್ತಿ ಪಾರ್ಸೆಲ್ ಬರುತ್ತದೆ ಎಂದು ತಿಳಿಸಿದ್ದ. ಮರುದಿನ ಬೆಳಗ್ಗೆ ದೂರುದಾರ ವ್ಯಕ್ತಿಯ ಮೊಬೈಲ್ಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಪಾರ್ಸೆಲ್ ಟ್ರ್ಯಾಕ್ ಕಳುಹಿಸುವುದಾಗಿ ಹೇಳಿ https://q1x.26b.myftpupload.com/ ಲಿಂಕ್ ಕಳುಹಿಸಿದ್ದ. ದೂರುದಾರ ವ್ಯಕ್ತಿ ಅದನ್ನು ಕ್ಲಿಕ್ ಮಾಡಿದ್ದರು. ಅಂದು ಸಂಜೆ ಅವರ ಖಾತೆಯಿಂದ ಹಂತ ಹಂತವಾಗಿ 50,0000 ರೂ. ಮತ್ತು 30,560 ರೂ. ಸೇರಿದಂತೆ ಒಟ್ಟು 80,560 ರೂ. ಕಡಿತವಾಗಿದೆ. ಬ್ಯಾಂಕ್ಗೆ ತೆರಳಿ ವಿಚಾರಿಸಿದಾಗ ಅಪರಿಚಿತರು ಮೋಸದಿಂದ ಹಣ ವರ್ಗಾಯಿಸಿರುವುದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.