ವಿಜಯನಗರದಿಂದಲೇ ಬಿಜೆಪಿ ವಿಜಯಪತಾಕೆ ಹಾರಿಸಲು ಸಂಕಲ್ಪ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ ಪೊಲೀಸ್ ಸ್ಟೇಷನ್ ಮೇಲೆ ದಾಳಿ ಆದರೆ ಕಾಂಗ್ರೆಸ್ ಧ್ವನಿಯೇ ಇಲ್ಲ

Team Udayavani, Apr 17, 2022, 8:48 PM IST

1-ffsfsdfds

ಹೊಸಪೇಟೆ :ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಬಿಜೆಪಿ 2023ರಲ್ಲಿ ಮತ್ತೆ ಅಧಿಕಾರ ಪಡೆಯುವುದು ಅಷ್ಟೇ ಸತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಾರೋಪ ಭಾಷಣದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರ ಮಟ್ಟದಲ್ಲಿ ನರೇಂದ್ರ ಮೋದಿಜಿ ನಾಯಕತ್ವವಿದ್ದು, ಅವರು ವಿಶ್ವಮಟ್ಟದ ನಾಯಕರಾಗಿ ಹೊರಹೊಮ್ಮಿದ್ದಾರೆ. ಇಂಥ ನಾಯಕತ್ವ ಮತ್ತು ಅಭಿವೃದ್ಧಿ ಕಾರ್ಯಗಳಿಂದ ಬಿಜೆಪಿ ಗೆಲುವು ಖಚಿತ ಎಂದು ಅಭಿಪ್ರಾಯಪಟ್ಟರು. ಬಿಜೆಪಿ ವಿಜಯಪತಾಕೆ ಹಾರಿಸಲು ವಿಜಯನಗರದಿಂದಲೇ ಸಂಕಲ್ಪ ಮಾಡಿದ್ದೇವೆ ಎಂದರು.

2ಜಿ ಯಲ್ಲಿ, ಭೂಮಿ ಕೆಳಗೆ ಭ್ರಷ್ಟಾಚಾರ, ಭೂಮಿ ಮೇಲೆ- ಭೂಮಿಯಲ್ಲಿ ಭ್ರಷ್ಟಾಚಾರ ಕಾಂಗ್ರೆಸ್ ಕೊಡುಗೆಯಾಗಿತ್ತು. ದೇಶವನ್ನು ಅತ್ಯಂತ ದುರ್ಬಲವಾಗಿ ಕಾಂಗ್ರೆಸ್ ಮಾಡಿತ್ತು. ಆದರೆ, ಮೋದಿಯವರ ದೇಶಪ್ರೇಮ, ಪ್ರಾಮಾಣಿಕತೆ, ರೈತರ ಮತ್ತು ದುರ್ಬಲರ ಬಗೆಗಿನ ಕಳಕಳಿಯಿಂದ ಬಿಜೆಪಿ ಮತ್ತೆ 2019ರಲ್ಲಿ ದೇಶದ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಕಾಂಗ್ರೆಸ್ ದೇಶದೆಲ್ಲೆಡೆ ಮುಳಗುತ್ತಾ ಸಾಗಿದೆ. ಬಿಜೆಪಿ ಜನಮೆಚ್ಚುಗೆ ಪಡೆದುದಕ್ಕೆ ಪಂಚರಾಜ್ಯಗಳ ಚುನಾವಣೆಯ ಫಲಿತಾಂಶವೇ ಸಾಕ್ಷಿ ಎಂದರು.

2013ರಿಂದ ಬಂದ ಕಾಂಗ್ರೆಸ್ ಸರಕಾರದ ಕೆಟ್ಟ ಆಡಳಿತದಿಂದ ಹಿಂಸೆ, ಕೊಲೆ, ಸುಲಿಗೆ ಹೆಚ್ಚಾಗಿತ್ತು. ಹಿಂಸೆಯ ಹಿಂದಿದ್ದ ಪಿಎಫ್‍ಐ ಮೇಲಿನ 200ಕ್ಕೂ ಹೆಚ್ಚು ಕೇಸುಗಳನ್ನು ಸಿದ್ದರಾಮಯ್ಯ ಹಿಂಪಡೆದಿದ್ದರು. ಸಿದ್ದರಾಮಯ್ಯ ಮತಬ್ಯಾಂಕ್ ರಾಜಕೀಯ ಮಾಡಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್‍ನವರಿಗೆ ಅಧಿಕಾರ, ಮತಬ್ಯಾಂಕ್ ಮುಖ್ಯ. ಆದರೆ, ದೇಶ ಮುಖ್ಯವಲ್ಲ. ಹುಬ್ಬಳ್ಳಿ ಪೊಲೀಸ್ ಸ್ಟೇಷನ್ ಮೇಲೆ ದಾಳಿ ಆದರೆ ನಿಮ್ಮ ಧ್ವನಿಯೇ ಇಲ್ಲ. ಹಿಜಾಬ್ ವಿಚಾರವನ್ನು ಮೊಳಕೆಯಲ್ಲೇ ಚಿವುಟಬಹುದಿತ್ತು. ಆ ವಿಚಾರಕ್ಕೆ ಸಂಬಂಧಿಸಿ ನಿಮ್ಮ ಪಕ್ಷದ ವಕೀಲರು ವಾದ ಮಾಡುತ್ತಾರೆ. ಕೋರ್ಟ್ ಆದೇಶ ಪಾಲಿಸಿ ಎಂದು ಮಾತನಾಡಿಲ್ಲ ಯಾಕೆ? ಯಾವ ಕಡೆ ಹೊರಟಿದ್ದೀರಿ ನೀವು ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ. ಜೀಪ್ ಖರೀದಿ ಮೂಲಕ ನೆಹರೂ ಕಾಲದಿಂದ ಭ್ರಷ್ಟಾಚಾರ ಮಾಡಿಕೊಂಡು ಬಂದವರು ಕಾಂಗ್ರೆಸ್ಸಿಗರು. ಅಧಿಕಾರದಲ್ಲಿ ಇಲ್ಲದಾಗ ಹತ್ತಿ ಕಟ್ಟಿಗೆಯಂತಿರುತ್ತಾರೆ. ಅಧಿಕಾರ ಬಂದಾಗ ಕಬ್ಬಾಗುತ್ತಾರೆ. ತಹಶೀಲ್ದಾರರಿಂದ ಹಿಡಿದು ಎಲ್ಲ ಕಚೇರಿಯಲ್ಲೂ ಏಜೆಂಟರಿರುತ್ತಾರೆ ಎಂದು ಆರೋಪಿಸಿದರು.

ಭ್ರಷ್ಟಾಚಾರವನ್ನು ಸಕ್ರಮಗೊಳಿಸಿದ ಕಾಂಗ್ರೆಸ್ ಪಕ್ಷ ಮನೆ ಕಟ್ಟುವುದು, ಹಾಸ್ಟೆಲ್ ಸವಲತ್ತಿನಲ್ಲೂ ಭ್ರಷ್ಟಾಚಾರ, ಕಾಂಟ್ರಾಕ್ಟ್ ಗಳಲ್ಲಿ ಭ್ರಷ್ಟಾಚಾರ ಮಾಡಿದೆ. ಕಾಂಗ್ರೆಸ್ ತನ್ನ ಪಾಪದ ಪ್ರಾಯಶ್ಚಿತ್ತ ಪಡುವ ದಿನ ದೂರವಿಲ್ಲ. ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರಗಳು ಮಾಡಿದ ಕೆಲಸಗಳ ಆಧಾರದಲ್ಲಿ ಚುನಾವಣೆಗೆ ಹೋಗುತ್ತೇವೆ. ಜನರು ಕಮಲವನ್ನು ಅರಳಿಸಿ ಕೊಡುವ ವಿಶ್ವಾಸವಿದೆ ಎಂದು ತಿಳಿಸಿದರು.

ಪ್ರಜಾಪ್ರಭುತ್ವದ ಸಮರ ಇಲ್ಲಿಂದ ಆರಂಭವಾಗಿದೆ. ನವ ಕರ್ನಾಟಕಕ್ಕಾಗಿ ಕಾರ್ಯಕರ್ತರ ಶ್ರಮದಿಂದ ಗೆಲುವು ನಮ್ಮದಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

10-

Harapanahalli: ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ

1-gggggggg

Hagaribommanahalli; ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾ*ವು

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.