ಜನರ ನಡುವೆ ಹೋಗಿ ಕೆಲಸ ಮಾಡಿ : ಡಿಸಿಗಳಿಗೆ ಸಿಎಂ ಬೊಮ್ಮಾಯಿ ಕ್ಲಾಸ್
Team Udayavani, Dec 31, 2021, 11:24 AM IST
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಆಡಳಿತ ಪಾಠ ಮಾಡಿದರು.
ಸಭೆಯಲ್ಲಿ, ಅತಿವೃಷ್ಟಿಯಿಂದ ಬೆಳೆಹಾನಿ,ಮನೆಗಳ ಹಾನಿ ಬಗ್ಗೆ ಪರಾಮರ್ಶೆ ನಡೆಸಲಾಯಿತು. ಜನರ ಸೇವೆ ಮಾಡುವ ಪಬ್ಲಿಕ್ ಸರ್ವೆಂಟ್ಸ್ ಜಿಲ್ಲೆಗಳಲ್ಲಿ ಅಧಿಕಾರ ಇದೆ ಎನ್ನುವುದನ್ನು ಬಿಟ್ಟು ಜನರ ಕೆಲಸ ಮಾಡಿ. ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂದುಕೊಂಡು ಫೀಲ್ಡಿನಲ್ಲೂ ಅದೇ ಥರ ಕೆಲಸ ಮಾಡಬೇಡಿ. ಜನರ ನಡುವೆ ಹೋಗಿ ಜನರ ಜತೆ ಕೆಲಸ ಮಾಡಿ. ಕೆಳಹಂತದ ಅಧಿಕಾರಿಗಳು ಡಿಸಿಗಳಂತೆ ವರ್ತಿಸಲು ಅವಕಾಶ ಕೊಡಬೇಡಿ. ನಿಮ್ಮಸ್ವಂತಿಕೆ, ವಿವೇಚನೆ ಬಳಸಿ ಕೆಲಸ ಮಾಡಿ. ಅಧಿಕಾರ ನಿಮ್ಮಲ್ಲಿ ಇದ್ದಾಗ ಇನ್ನಷ್ಟು ಮೃದುತ್ವ, ವಿನಯತೆ ತರಬೇಕು. ಎಚ್ಚರಿಕೆಯಿಂದ ಆಡಳಿತದ ಕೆಲಸ ಮಾಡಿ ಎಂದು ಸಿಎಂ ಸೂಚನೆ ನೀಡಿದರು.
ಬೆಳೆಗಳ ಹಾನಿ,ಮನೆಗಳ ಹಾನಿಗೆ ಪರಿಹಾರ ಕೊಡದ ಡಿಸಿಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದ ಸಿಎಂ,
ಕೆಲಸ ಆಗಲಿಲ್ಲ ಅಂತ ಕೆಳಗಿನ ಅಧಿಕಾರಿಗಳ ಮೇಲೆ ಹಾಕಬೇಡಿ. ಕೆಲಸಗಳು ಆಗದಿರುವುದಕ್ಕೆ ನೀವೇ ಹೊಣೆ, ನಿಮ್ಮದೆ ಹೊಣೆಗಾರಿಕೆ ಎಂದು ಸಭೆಯಲ್ಲಿ ಡಿಸಿಗಳಿಗೆ ಸಿಎಂ ಕ್ಲಾಸ್ ತೆಗೆದುಕೊಂಡರು.
ಕಂದಾಯ ಸಚಿವ ಆರ್. ಅಶೋಕ್, ಸಚಿವ ಸಂಪುಟದ ಇತರ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.