ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ : ಬಿಎಸ್ ವೈ, ಸಚಿವರು ಹೇಳಿದ್ದೇನು?
Team Udayavani, Mar 4, 2022, 6:27 PM IST
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶುಕ್ರವಾರ ಮಂಡನೆ ಮಾಡಿರುವ ಬಜೆಟ್ ಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ , ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿ ಪ್ರಮುಖ ಸಚಿವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಸರ್ವತೋಮುಖ ಬಜೆಟ್
ಬೊಮ್ಮಾಯಿ ಮಂಡನೆ ಮಾಡಿರುವ ಬಜೆಟ್ ರಾಜ್ಯದ ಸರ್ವತೋಮುಖ ಬಜೆಟ್ . ಕೃಷಿ , ನೀರಾವರಿ , ನೇಕಾರ ಸಮುದಾಯಕ್ಕೆ ಅನುಕೂಲ ಮಾಡಿದೆ ಪ್ರಾದೇಶಿಕ ಸಮತೋಲನ ಮಾಡಿದ್ದಾರೆ. ಕೋವಿಡ್ ನಂತರ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಆಗುತ್ತಿದೆ. 2,65,720 ಕೋಟಿ ಬಜೆಟ್ ಮಂಡನೆ ಮಾಡಿದ್ದಾರೆ. ಮೋದಿ ಆಶಯದಂತೆ ರೈತರ ಬಗ್ಗೆ ಕಾಲಜಿ ತೋರಿಸಲಾಗಿದೆ. ಹೈನುಗಾರಿಕೆ ಪ್ರೋತ್ಸಾಹ ನೀಡಿದ್ದಾರೆ. ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ , ಅನುದಾನ ನೀಡಿ ಹೆಚ್ಚು ಒತ್ತು ನೀಡಲಾಗಿದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.
ದೀನ ದಲಿತರ ಬಜೆಟ್
ನೀರಾವರಿ ಯೋಜನೆ 21 ಸಾವಿರ ಕೋಟಿ ನೀಡಲಾಗಿದೆ. ಮಹದಾಯಿ,ಮೇಕೆದಾಟು ಎಲ್ಲದಕ್ಕೂ ಅವಕಾಶ ಬಜೆಟ್ ಮೂಲಕ ಸಿಎಂ ಕೊಟ್ಟಿದ್ದಾರೆ
ದೀನ ದಲಿತರ ಉದ್ಧಾರಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಎಸ್ಸಿಎಸ್ಟಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುದಾನ ನೀಡಿ ಸಮಾಜಕಲ್ಯಾಣದ ಬಜೆಟ್ ನೀಡಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಮೆಚ್ಚುಗೆ ಸೂಚಿಸಿದ್ದಾರೆ.
ಸಮಗ್ರ ಅಭಿವೃದ್ಧಿಗೆ ಪೂರಕ ಚಿಂತನೆ
ಕೋವಿಡ್ ಸಾಂಕ್ರಾಮಿಕದ ಬಳಿಕ ಚೇತರಿಸಿಕೊಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಹೇಳಿದ್ದಾರೆ.
ಕಳೆದ ಸಾಲಿನ ಬಜೆಟ್‍ಗಿಂತ ಶೇ 7.7ರಷ್ಟು ಹೆಚ್ಚು ಪ್ರಮಾಣದ ಬಜೆಟ್ ಇದಾಗಿದ್ದು, ಶಿಕ್ಷಣ- ಉದ್ಯೋಗ- ಸಬಲೀಕರಣಕ್ಕೆ ಆದ್ಯತೆ ನೀಡಲಿದೆ. ರೈತರ ಆದಾಯ ದ್ವಿಗುಣಗೊಳಿಸಲು ಆದ್ಯತೆ ಮತ್ತು ವಿಶೇóಷ ಉಪಕ್ರಮಗಳಿರುವ ಆಯವ್ಯಯ ಪತ್ರ. ಇದಾಗಿದ್ದು, ರೈತ ಶಕ್ತಿ ಹೊಸ ಯೋಜನೆ ಪ್ರಕಟಿಸಲಾಗಿದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.ಮೇಕೆದಾಟು ಯೋಜನೆ ಅನುಷ್ಠಾನಕ್ಕೆ 1 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಮಹಿಳಾ ಸಬಲೀಕರಣ, ಮಕ್ಕಳ ಕಲ್ಯಾಣ ಸೇರಿದಂತೆ ಎಲ್ಲ ವಲಯಗಳ ಅಭಿವೃದ್ಧಿಯ ಅಂಶಗಳನ್ನು ಈ ಬಜೆಟ್ ಒಳಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ಗ್ರಾರಾಜ್ಯದ ಎಲ್ಲ ವರ್ಗಗಳ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನ ಈ ಬಜೆಟ್ ಒಳಗೊಂಡಿದೆ ಎಂದು ತಿಳಿಸಿದ್ದಾರೆ.
ಬಜೆಟ್ ಆನೆ ಬಲ ತುಂಬಿದೆ
ದೇವಾಲಯಗಳನ್ನು ಸಮಗ್ರ ಅಭಿವೃದ್ದಿ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕನಸನ್ನು ನನಸು ಮಾಡುವ ನನ್ನ ಉದ್ದೇಶಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಆನೆ ಬಲ ತುಂಬಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಸಚಿವೆ ಶಶಿಕಲಾ ಜೊಲ್ಲೆಹೇಳಿದ್ದಾರೆ.
ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ದಿಗೆ 100 ಕೋಟಿ ರೂಪಾಯಿಗಳ ಅನುದಾನ, ತಸ್ತೀಕ್ ಹಣ 48 ಸಾವಿರಗಳಿಂದ 60 ಸಾವಿರಕ್ಕೆ ಹೆಚ್ಚಳ ಸ್ವಾಗತಾರ್ಹ.ಎಂದು ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿದ್ದಾರೆ.
ರಚನಾತ್ಮಕ ಹೆಜ್ಜೆಗಳ ದಿಟ್ಟ ಬಜೆಟ್
`ಕೃಷಿ, ಉದ್ಯೋಗ ಸೃಷ್ಟಿ, ಶಿಕ್ಷಣದ ಬಲವರ್ಧನೆ ಮತ್ತು ಆರೋಗ್ಯಸೇವೆಗಳ ವಿಸ್ತರಣೆಗೆ ವಿಶೇಷ ಒತ್ತು ನೀಡಿರುವ ಬಜೆಟ್ ಇದಾಗಿದೆ. ಜತೆಗೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಬೇಕಾಗುವ ರಚನಾತ್ಮಕ ಕಾರ್ಯಕ್ರಮಗಳನ್ನು ಘೋಷಿಸಿರುವುದು ದಿಟ್ಟ ಕ್ರಮವಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಬಜೆಟ್ ಮಂಡನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ರಾಜ್ಯದ ಸಮತೋಲಿತ ಅಭಿವೃದ್ಧಿಗೆ ದೂರದೃಷ್ಟಿಯುಳ್ಳ ಯೋಜನೆಗಳು ಮತ್ತು ಉಪಕ್ರಮಗಳು ಮುಖ್ಯ. ಈ ನಿಟ್ಟಿನಲ್ಲಿ ಬೊಮ್ಮಾಯಿ ಗಮನ ಹರಿಸಿರುವುದು ನಿಚ್ಚಳವಾಗಿದೆ. ಇದರಿಂದಾಗಿ ಮುಂಬರುವ ದಿನಗಳಲ್ಲಿ ನಿರುದ್ಯೋಗದಂತಹ ಸಮಸ್ಯೆಗಳು ನಿವಾರಣೆಯಾಗಲಿವೆ’ ಎಂದರು.
ಸಹಕಾರಿ ಕ್ಷೇತ್ರದ ಬಲವರ್ಧನೆ, ಸ್ವ-ಸಹಾಯ ಸಂಘಗಳಿಗೆ ಆರ್ಥಿಕ ಸ್ವಾತಂತ್ರ್ಯ: ಸಚಿವ ಎಸ್.ಟಿ.ಸೋಮಶೇಖರ್
ದೂರದೃಷ್ಟಿಯ ಬಜೆಟ್
ಎಲ್ಲಾ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಸಮಗ್ರ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ. ಇದೊಂದು ಅಭಿವೃದ್ಧಿ ಪರವಾದ ದೂರದೃಷ್ಟಿಯ ಬಜೆಟ್ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದ್ದಾರೆ.
ಬಜೆಟ್ ಕುರಿತಂತೆ ಪ್ರತಿಕ್ರಿಯಿಸಿ, ಯಶಸ್ವಿನಿ ಯೋಜನೆ ಜಾರಿಯಿಂದ ರೈತರಿಗೆ ಸಾಕಷ್ಟು ಅನುಕೂಲವಾಗಲಿದೆ ಜೊತೆಗೆ ಈ ಬಾರಿ ಮಹಿಳೆಯರಿಗಾಗಿ ಸಾಕಷ್ಟು ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. 2022-23ನೇ ಸಾಲಿನಲ್ಲಿ 33 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂ.ಗಳ ಕೃಷಿ ಸಾಲ ವಿತರಿಸುವ ಗುರಿ ನೀಡಲಾಗಿದೆ. ಇದರಲ್ಲಿ 3 ಲಕ್ಷ ಹೊಸ ರೈತರಿಗೆ ಸಾಲ ವಿತರಣೆ ಮಾಡಲಾಗುವುದು. ಇದರಿಂದ ರೈತರ ಆರ್ಥಿಕ ಚಟುವಟಿಕೆಗಳಿಗೆ ಪುಷ್ಟಿ ಸಿಕ್ಕಂತಾಗಲಿದೆ ಎಂದು ತಿಳಿಸಿದ್ದಾರೆ.
ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್
ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ನೀಡಲು ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್ ಸ್ಥಾಪಿಸಲು ಸರ್ಕಾರ ಉದ್ಧೇಶಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಸಂದರ್ಭದಲ್ಲಿ 2022-23ನೇ ಸಾಲಿನ ಆಯವ್ಯಯವನ್ನು ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ಧಾರವನ್ನು ಮುಕ್ತಕಂಠದಿ0ದ ಶ್ಲಾಘಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಈ ಉದ್ದೇಶಿತ ಬ್ಯಾಂಕಿಗೆ ಹಾಲು ಉತ್ಪಾದಕರ ಸಹಕಾರಿ ಸಂಘ, ಕರ್ನಾಟಕ ಹಾಲು ಮಹಾಮಂಡಳ ಹಾಗೂ ಜಿಲ್ಲಾ ಹಾಲು ಒಕ್ಕೂಟಗಳು ಒಟ್ಟಾರೆ 260 ಕೋಟಿ ರೂ. ಮತ್ತು ರಾಜ್ಯ ಸರ್ಕಾರವು ಇದಕ್ಕಾಗಿ 100 ಕೋಟಿ ರೂ.ಗಳ ಶೇರು ಬಂಡವಾಳವನ್ನು ಒದಗಿಸಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.