CM ಕಗ್ಗಂಟು: ಬೀದಿಗಿಳಿದ ಬೆಂಬಲಿಗರು


Team Udayavani, May 18, 2023, 7:44 AM IST

SIDDU DKS

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಮುಖ್ಯಮಂತ್ರಿ ಸ್ಥಾನದ ಕಗ್ಗಂಟು ಜಟಿಲವಾಗಿರುವ ನಡುವೆಯೇ ಅವರ ಬೆಂಬಲಿಗರು ಬೀದಿಗಿಳಿಯುವ ಮೂಲಕ ಹೈಕಮಾಂಡ್‌ ಮೇಲೆ ಒತ್ತಡ ಮುಂದುವರಿಸಿದ್ದಾರೆ. ರಾಮನಗರ ಜಿಲ್ಲೆ ಸೇರಿ ಹಲವೆಡೆ ಡಿ.ಕೆ.ಶಿವಕುಮಾರ್‌ ಬೆಂಬಲಿಗರು ಪ್ರತಿಭಟನೆ ನಡೆಸುವ ಮೂಲಕ ಪಕ್ಷಕ್ಕೆ ಮುನ್ನಡೆ ದೊರಕಿಸಿಕೊಟ್ಟ ಶಿವಕುಮಾರ್‌ ಅವರಿಗೇ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಿದರು. ಇನ್ನು ಸಿದ್ದರಾಮಯ್ಯ ಪರವಾಗಿಯೂ ರಾಜ್ಯದ ಹಲವೆಡೆ ಬೆಂಬಲಿಗರು ದನಿ ಎತ್ತಿದ್ದಾರೆ. ಸಿದ್ದರಾಮನ ಹುಂಡಿಯಲ್ಲಿ ಬೆಂಬಲಿಗರು, ಕಾರ್ಯಕರ್ತರು ಸಿದ್ದರಾಮಯ್ಯ ಅವರ ಕಟೌಟ್‌ಗೆ ಕ್ಷೀರಾಭಿಷೇಕ ಮಾಡುವ ಮೂಲಕ ಅಭಿಮಾನ ಮೆರೆದಿದ್ದಾರೆ.

ಕಾರ್ಯಕರ್ತರ ಆಕ್ರೋಶ, ರಾಮನಗರದಲ್ಲಿ ರಸ್ತೆ ತಡೆ

ರಾಮನಗರ: ಡಿ.ಕೆ.ಶಿವಕುಮಾರ್‌ಗೆ ಸಿಎಂ ಗಾದಿ ಕೈ ಜಾರುತ್ತಿದೆ ಎಂಬ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಡಿಕೆಶಿ ತವರು ಜಿಲ್ಲೆಯ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಆಕ್ರೋಶ ಭುಗಿಲೆದ್ದಿದೆ. ಗುರುವಾರ ಸಂಜೆ ಜಿಲ್ಲಾ ಕಾಂಗ್ರೆಸ್‌ನ ಪದಾಧಿಕಾರಿಗಳು ತಮ್ಮ ನಾಯಕನ ಪರವಾಗಿ ರಸ್ತೆಗಿಳಿದು ಪ್ರತಿಭಟನೆ ನಡೆಸುವ ಮೂಲಕ ಡಿ.ಕೆ.ಶಿವಕುಮಾರ್‌ ಪರ ಬ್ಯಾಟಿಂಗ್‌ ಬೀಸಿದ್ದಾರೆ.

ಪಟ್ಟಣದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು ಡಿ.ಕೆ.ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಮಾಡಲೇಬೇಕೆಂದು ಹೈಕಮಾಂಡ್‌ ಅನ್ನು ಒತ್ತಾಯಿಸಿದರು. ಡಿಕೆಶಿ ಭಾವಚಿತ್ರವನ್ನು ಹಿಡಿದು ಘೋಷಣೆ ಕೂಗುತ್ತ  ಕೆಲಕಾಲ ರಸ್ತೆ ತಡೆ ನಡೆಸಿದರು.

ದುಡಿದವರಿಗೆ ಬೆಲೆ ನೀಡಿ

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಚೇತನ್‌, ರಾಜ್ಯದಲ್ಲಿ 135 ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆಲ್ಲುವಲ್ಲಿ ಡಿ.ಕೆ.ಶಿವಕುಮಾರ್‌ ಕೊಡುಗೆ ಸಾಕಷ್ಟಿದೆ. ಪಕ್ಷ ಸಂಕಷ್ಟದಲ್ಲಿದ್ದಾಗ ಮುನ್ನಡೆಸಿ ಅಧಿಕಾರಕ್ಕೆ ಬರಲು ಕಾರಣವಾದ ಇವರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕಿರುವುದು  ನ್ಯಾಯೋಚಿತ ಎಂದು ಹೇಳಿದರು.

ಬೆಂಗಳೂರು -ಮೈಸೂರು ರಸ್ತೆಯಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಕಾಂಗ್ರೆಸ್‌ ಬಾವುಟಗಳನ್ನು ಹಿಡಿದು ಮೂವತ್ತು ನಿಮಿಷಕ್ಕೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು.

ರಾಮನಗರದಲ್ಲಿ ಬಿಗಿ ಪೊಲೀಸ್‌ ಭದ್ರತೆ

ರಾಮನಗರ: ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಹುದ್ದೆ ಕೈ ಜಾರಿದೆ ಎಂಬ ಮಾಹಿತಿ ಗುರುವಾರ ಮಧ್ಯಾಹ್ನ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ, ರಾಮನಗರ ಜಿಲ್ಲೆಯಲ್ಲಿ ಪೊಲೀಸರು ಅಲರ್ಟ್‌ ಆಗಿದ್ದಾರೆ. ಜಿಲ್ಲೆಯ ಪ್ರಮುಖ ವೃತ್ತಗಳಲ್ಲಿ ಭದ್ರತೆಗಾಗಿ ಮೀಸಲು ಪಡೆಯ ಪೊಲೀಸರನ್ನು ನಿಯೋಜಿಸಲಾಗಿದೆ.  ಡಿ.ಕೆ.ಶಿವಕುಮಾರ್‌ಗೆ ಮುಖ್ಯಮಂತ್ರಿ ಗಾದಿ ದೊರೆಯಲಿದೆ ಎಂದು ಬಹುತೇಕ ಮುಖಂಡರು ಭಾವಿಸಿದ್ದರು. ಆದರೆ, ಗುರುವಾರ ಮಧ್ಯಾಹ್ನದ ಸುಮಾರಿಗೆ ಸಿದ್ದರಾಮಯ್ಯಗೆ ಸಿಎಂ ಹುದ್ದೆ ದೊರೆಯಲಿದೆ ಎಂಬ ಮಾಹಿತಿ ಹರಿದಾಡಿದ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಎಚ್ಚೆತ್ತುಕೊಂಡಿದೆ. ಮುಂಜಾಗೃತ ಕ್ರಮವಾಗಿ ಡಿಕೆಶಿ ತವರು ಜಿಲ್ಲೆಯಲ್ಲಿ ಪೊಲೀಸ್‌ ಭದ್ರತೆ ಹೆಚ್ಚಳಗೊಳಿಸಲಾಗಿದೆ.

ಸಿದ್ದು ಪರ ಸಂಘಟನೆಗಳ ಬ್ಯಾಟಿಂಗ್‌

ಬೆಂಗಳೂರು/ಮೈಸೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರನ್ನು ಪರಿಗಣಿಸಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಕಾಂಗ್ರೆಸ್‌ ಹೈಕಮಾಂಡ್‌ ಅನ್ನು ಒತ್ತಾಯಿಸಿವೆ. ಶೋಷಿತ ಸಮುದಾಯಗಳ ಒಗ್ಗಟ್ಟಿನ ರಾಜಕೀಯ ಹೋರಾಟದ ಫಲವಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದ್ದು, ಸಾಮಾಜಿಕ ನ್ಯಾಯ ಮತ್ತು ಸಮಾನತಾ ವಾದದ ಗಟ್ಟಿ ದನಿಯಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ನೇಮಿಸಬೇಕೆಂದು  ದಲಿತ ಸಂಘರ್ಷ ಸಮಿತಿ ಸೇರಿ ಹಲವು ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ. ಇನ್ನು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ನೇಮಿಸಲಾಗುತ್ತದೆ ಎಂದು ತಿಳಿದು ವರುಣ ವಿಧಾನಸಭಾ ಕ್ಷೇತ್ರ ಹಾಗೂ ಸಿದ್ದರಾಮಯ್ಯ ತವರೂರು ಸಿದ್ದರಾಮನಹುಂಡಿಯಲ್ಲಿ ಬುಧವಾರ ಸಂಭ್ರಮಾಚರಣೆ ಕಂಡು ಬಂತು. ವರುಣ ಕ್ಷೇತ್ರದ ಹಲವೆಡೆ ಸಿದ್ದರಾಮಯ್ಯ ಅವರ ಕಟೌಟ್‌ ಇಟ್ಟು ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸಲಾಯಿತು. ಯುವ ಕಾಂಗ್ರೆಸ್‌ ಕಾರ್ಯಕರ್ತರು ಬೈಕ್‌ ರ್ಯಾಲಿ ನಡೆಸಿದರು. ಸಿದ್ದರಾಮಯ್ಯ ಪರವಾಗಿ ಘೋಷಣೆ ಕೂಗಿದರು. ಸಿದ್ದರಾಮನಹುಂಡಿಯಲ್ಲಿ ಅಭಿಮಾನಿಗಳು ಸಿದ್ದರಾಮಯ್ಯ ಅವರ ಕಟೌಟ್‌ ಮುಂದೆ ನೃತ್ಯ ಮಾಡಿ ಸಂಭ್ರಮಿಸಿದರು. ಕಟೌಟ್‌ಗೆ ಹಾಲಿನ ಅಭಿಷೇಕ ಮಾಡಲಾಯಿತು.

ಟಾಪ್ ನ್ಯೂಸ್

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

6-delhi-pollution

Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್‌, ಬಸ್‌ಗಳಿಗೆ ನಿರ್ಬಂಧ

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.