ರಾಜ್ಯದ ಅಭಿವೃದ್ಧಿ ಯೋಜನೆ ಕುರಿತು ಎರಡು ತಿಂಗಳಿಗೊಮ್ಮೆ ಸಂಸದರೊಂದಿಗೆ ಸಭೆ: ಸಿಎಂ
Team Udayavani, Nov 27, 2020, 10:30 PM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಕರೆದಿದ್ದ ಅನೌಪಚಾರಿಕ ಸಭೆಯಲ್ಲಿ 10 ಮಂದಿ ಸಂಸದರು, ಒಬ್ಬ ರಾಜ್ಯಸಭಾ ಸದಸ್ಯರು ಪಾಲ್ಗೊಂಡಿದ್ದರು. ಬಿಜೆಪಿ ರಾಜ್ಯಾಧ್ಯಕ್ಷರಾದ ಸಂಸದ ನಳಿನ್ ಕುಮಾರ್ ಕಟೀಲು ಸಹಿತ ಇತರರು ಪಕ್ಷ ಚಟುವಟಿಕೆ ಹಾಗೂ ಇತರ ಕಾರ್ಯ ನಿಮಿತ್ತ ಗೈರಾಗಿದ್ದು, ಈ ಬಗ್ಗೆ ಪೂರ್ವಮಾಹಿತಿ ನೀಡಿದ್ದರು ಎನ್ನಲಾಗಿದೆ.
ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ಸಂಜೆ 4ರಿಂದ 5.15ರ ವರಗೆ ಸಭೆ ನಡೆಯಿತು. ಸಂಸದರಾದ ಬಿ.ವೈ.ರಾಘವೇಂದ್ರ, ಪ್ರತಾಪ್‌ಸಿಂಹ, ಸಂಗಣ್ಣ ಕರಡಿ, ರಾಜ ಅಮರೇಶ್ ನಾಯಕ್, ಡಾ| ಉಮೇಶ್ ಜಾಧವ್, ಶಿವಕುಮಾರ್ ಉದಾಸಿ, ದೇವೇಂದ್ರಪ್ಪ, ಜಿ.ಎಸ್.ಬಸವರಾಜು, ಎ.ನಾರಾಯಣಸ್ವಾಮಿ, ಪಿ.ಸಿ. ಗದ್ದಿಗೌಡರ್, ರಾಜ್ಯಸಭಾ ಸದಸ್ಯ ಕೆ.ಸಿ. ರಾಮಮೂರ್ತಿ ಇತರರು ಪಾಲ್ಗೊಂಡಿದ್ದರು.
ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳ ಜಾರಿಯ ಪ್ರಗತಿ ವೇಗವನ್ನು ಹೆಚ್ಚಿಸಲು ಇನ್ನು ಮುಂದೆ ರಾಜ್ಯದ ಸಂಸದರೊಂದಿಗೆ ಎರಡು ತಿಂಗಳಿಗೊಮ್ಮೆ ಸಭೆ ನಡೆಸಲಾಗುವುದು. ಸಂಸದರ ಸ್ಥಳೀಯ ಅಭಿವೃದ್ಧಿ ನಿಧಿಯನ್ನು (ಎಂಪಿಎಲ್‌ಎಡಿ ಫಂಡ್) ಮುಂದುವರಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:ಕಲ್ಲಿದ್ದಲು ಹೊಗೆಯಿಂದ ಉಸಿರುಗಟ್ಟಿ ಯುವತಿ ಸಾವು, ಮೂವರು ಅಸ್ವಸ್ಥ
ಸಂಸದರ ಪ್ರಮುಖ ಸಲಹೆ
ರಾಜ್ಯದಲ್ಲಿ ಈ ಬಾರಿ ಮೆಕ್ಕೆ ಜೋಳ, ಭತ್ತದ ಇಳುವರಿ ಹೆಚ್ಚಾಗಿದ್ದು, ಬೆಲೆ ಕುಸಿತ ತಡೆಯಲು ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಂಬಲ ಬೆಲೆ ನೀಡಬೇಕು. ಸಂಸದರಿಗೆ ಕನಿಷ್ಠ 3 ಕೋಟಿ ರೂ. ಸಂಸದರ ಸ್ಥಳೀಯ ಅಭಿವೃದ್ಧಿ ನಿಧಿ ಒದಗಿಸಬೇಕು. ಕಲಬುರಗಿಯ ಇಎಸ್‌ಐ ಆಸ್ಪತ್ರೆ ಉನ್ನತೀಕರಣಕ್ಕೆ 860 ಎಕರೆ ಭೂಮಿಯಿದ್ದು, 150 ಎಕರೆ ಪ್ರದೇಶದಲ್ಲಿ ಪ್ರಯೋಗಾಲಯ ಇತರ ಸೌಲಭ್ಯ ಕಲ್ಪಿಸಲು ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದು, ರಾಜ್ಯ ಅನುಮತಿ ನೀಡಬೇಕು ಸಹಿತ ಹಲವು ಸಲಹೆಗಳನ್ನು ಸಂಸದರು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.