ಕೋವಿಡ್ ಸೋಂಕು ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಸೀಲ್‌ಡೌನ್‌ಗೆ ಸಿಎಂ ಸೂಚನೆ : ಸಚಿವ ಸುಧಾಕರ್
ಸಿಎಂ ನೇತೃತ್ವದಲ್ಲಿ ಟಾಸ್ಕ್‌ಫೋಸ್‌೯ ಸಭೆ ; ಕೋವಿಡ್ ನಿಗ್ರಹಕ್ಕೆ ಸಚಿವರಿಗೆ ಜವಾಬ್ದಾರಿ ಹಂಚಿಕೆ
Team Udayavani, Jul 4, 2020, 7:28 PM IST
ಬೆಂಗಳೂರು : ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ಸೀಲ್‌ಡೌನ್ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಕಳೆದ ಕೆಲ ದಿನಗಳಿಂದ ಈಚೆಗೆ ಬೆಂಗಳೂರು ನಗರದ ಕೆಲವೆಡೆ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಅಂತಹ ಪ್ರದೇಶಗಳನ್ನು ಗುರುತಿಸಿ ಸೀಲ್‌ಡೌನ್ ಮಾಡುವಂತೆ ಇಂದು ಮಧ್ಯಾಹ್ನ ನಡೆದ ಕೋವಿಡ್ ನಿಗ್ರಹ ಕಾಯ೯ಪಡೆ ಸಭೆಯಲ್ಲಿ ಮುಖ್ಯಂತ್ರಿಯವರು ಸೂಚನೆ ನೀಡಿದರು ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ತಿಳಿಸಿದರು.
ಸಚಿವರು, ಅಧಿಕಾರಿಗಳು, ವೈದ್ಯರು ಮತ್ತು ಎಲ್ಲಾ ಸಿಬ್ಬಂದಿ ಪರಿಶ್ರಮದಿಂದ ಕೆಲಸ ಮಾಡಿದ್ದರಿಂದಲೇ ಕನಾ೯ಟಕ ಇಂದು ಸಮಾಧಾನಕರ ಸ್ಥಿತಿಯಲ್ಲಿದೆ. ಇತ್ತೀಚೆಗೆ ಬೆಂಗಳೂರು ನಗರ ಮತ್ತು ಕೆಲ ಜಿಲ್ಲೆಗಳಲ್ಲಿ ಅನೇಕ ಕಾರಣಗಳಿಂದ ಸೋಂಕು ಹೆಚ್ಚಿದೆ. ಅದನ್ನು ನಿಯಂತ್ರಿಸಿ ಕೋವಿಡ್ ರೋಗವನ್ನು ಹಿಮ್ಮೆಟ್ಟಿಸಲು ಮುಂದಿನ ದಿನಗಳಲ್ಲಿ ಎಲ್ಲರೂ ಇನ್ನಷ್ಟು ಪರಿಶ್ರಮದಿಂದ ಕಾಯ೯ನಿವ೯ಹಿಸಬೇಕು ಎಂದು ತಿಳಿಸಿದ್ದಾರೆ ಎಂದರು.
ಜವಾಬ್ದಾರಿ ಹಂಚಿಕೆ : ಇಡೀ ವ್ಯವಸ್ಥೆ ಅಚ್ಚುಕಟ್ಟಾಗಿ, ಪಾರದಶ೯ಕ ರೀತಿಯಲ್ಲಿ ಕಾಯಾ೯ಚರಿಸಬೇಕು. ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯುವ ವ್ಯವಸ್ಥೆ ಆಗಬೇಕು. ಈ ನಿಟ್ಟಿನಲ್ಲಿ ಸಚಿವರು ಸಂಘಟಿತವಾಗಿ ಕೆಲಸ ಮಾಡಬೇಕು ಎಂದಿದ್ದಾರೆ.
ಕೋವಿಡ್ ವಿಷಯಕ್ಕೆ ಸಂಬಂಧಿಸಿದ ಎಲ್ಲಾ ನೀತಿ ನಿರೂಪಣೆ, ಮಾಗ೯ಸೂಚಿ, ಮಾಧ್ಯಮಗಳಿಗೆ ಮಾಹಿತಿ ನೀಡುವುದು, ವಾರ್ ರೂಮ್ ಜವಾಬ್ದಾರಿಯನ್ನು ತಮಗೆ ವಹಿಸಲಾಗಿದೆ. ಕೋವಿಡ್ ಕೇರ್ ಸೆಂಟರ್‌ಗಳ ಸ್ಥಾಪನೆ ಮತ್ತು ನಿವ೯ಹಣೆಯನ್ನು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಅವರಿಗೆ ಹಂಚಿಕೆ ಮಾಡಲಾಗಿದೆ.
ಕಂದಾಯ ಸಚಿವ ಆರ್. ಅಶೋಕ್ ಮತ್ತು ಮುಖ್ಯಮಂತ್ರಿಯವರ ರಾಜಕೀಯ ಕಾಯ೯ದಶಿ೯ ವಿಶ್ವನಾಥ್ ಅವರಿಗೆ ಖಾಸಗಿ ಆಸ್ಪತ್ರೆಗಳ ನಿವ೯ಹಣೆ ಜವಾಬ್ದಾರಿ ನೀಡಲಾಗಿದೆ. ಎಲ್ಲರೂ ಸಮನ್ವಯದಿಂದ ಕೆಲಸ ಮಾಡಲು ಮುಖ್ಯಮಂತ್ರಿಯವರು ಸೂಚಿಸಿದ್ದಾರೆ ಎಂದರು.
ಕಾನೂನು ಕ್ರಮ : ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳಪೆ ಪಿಪಿಇ ಕಿಟ್ ನೀಡಲಾಗಿದೆ ಎಂಬ ವರದಿ ಮತ್ತು ಅದನ್ನು ಸಮಪ೯ಕವಾಗಿ ವಿಲೇವಾರಿ ಮಾಡದೆ ಬಿಸಾಡಲಾಗಿತ್ತು ಎಂಬ ವಿಷಯ ಗಮನಕ್ಕೆ ಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗೆ ಮುಂದೆ ಇಂತಹ ಘಟನೆ ಮರುಕಳಿಸದಂತೆ ಸೂಚನೆ ನೀಡಲಾಗಿದೆ. ಇಷ್ಟರ ಮೇಲೂ ಅಂತಹ ಪ್ರಕರಣ ಮರುಕಳಿಸಿದರೆ ಎಚ್ಚರಿಕೆ ನೀಡಲಾಗುವುದು. ಆಗಲೂ ಪರಿಸ್ಥಿತಿ ಸರಿಯಾಗದಿದ್ದಲ್ಲಿ ಕಾನೂನು ಮೂಲಕ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಟಾಸ್ಕ್‌ಫೋಸ್‌೯ ಸಭೆಯಲ್ಲಿ ಲಾಕ್‌ಡೌನ್ ವಿಚಾರವು ಚಚೆ೯ಗೆ ಬಂತು. ಈ ಸನ್ನಿವೇಶದಲ್ಲಿ ಲಾಕ್‌ಡೌನ್ ಬೇಕಿಲ್ಲ ಎಂದು ತಾವು ಮತ್ತು ಡಿಸಿಎಂ ಅಶ್ವತ್ಥನಾರಾಯಣ ಅವರು ಸಿಎಂ ಅವರಿಗೆ ಹೇಳಿದ್ದೇವೆ. ಮುಂದೆ ಅವರು ನಿಧಾ೯ರ ಕೈಗೊಳ್ಳಲಿದ್ದಾರೆ.
ಈಗಾಗಲೇ ಸಿಎಂ ಅವರು ಪ್ರಕಟಿಸಿದ್ದಂತೆ ಭಾನುವಾರ ಮತ್ತು ರಾತ್ರಿ ಕಫ್ಯೂ೯ ಮುಂದಿನ ಆದೇಶದವರೆಗೆ ಮುಂದುವರಿಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಿಎಂ ನೇತೃತ್ವದಲ್ಲಿ ನಡೆದ ಟಾಸ್ಕ್‌ಫೋಸ್‌೯ ಸಭೆಯಲ್ಲಿ ಡಿಸಿಎಂ ಅಶ್ವತ್ಥನಾರಾಯಣ, ಸಚಿವರಾದ ಶ್ರೀರಾಮುಲು, ಬಸವರಾಜ ಬೊಮ್ಮಾಯಿ, ಆರ್. ಅಶೋಕ್, ಸಿಎಂ ಅವರ ರಾಜಕೀಯ ಕಾಯ೯ದಶಿ೯ ಎಸ್. ಆರ್. ವಿಶ್ವನಾಥ್ ಮತ್ತು ಹಿರಿಯ ಅಧಿಕಾರಿಗಳು ಹಾಜರಿದ್ದರು ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.