ದಿಲ್ಲಿಗೆ ಹೊರಡಲು ಸಿಎಂ ರೆಡಿ: ಹೈಕಮಾಂಡ್ ನಿಂದ ಸಿಗದ ಅವಧಿ?
ಸಂಪುಟ ಪುನರ್ ರಚನೆಯ ಕುರಿತು ಬಹಿರಂಗ ಚರ್ಚೆ ಮಾಡುವುದಿಲ್ಲ
Team Udayavani, Feb 2, 2022, 11:20 AM IST
ಬೆಂಗಳೂರು : ತಮ್ಮ ಆರು ತಿಂಗಳ ಸಾಧನೆಯ ರಿಪೋರ್ಟ್ ಕಾರ್ಡ್ ಹಾಗೂ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವುದಕ್ಕಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಬಿಜೆಪಿ ವರಿಷ್ಠರ ಭೇಟಿಗಾಗಿ ನಾಳೆ ದಿಲ್ಲಿಗೆ ತೆರಳಲು ಸಿದ್ಧತೆ ನಡೆಸಿದ್ದಾರೆ. ಇದು ರಾಜ್ಯ ಬಿಜೆಪಿ ಪಾಳಯದಲ್ಲಿ ಚಟುವಟಿಕೆ ಗರಿಗೆದರುವಂತೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ತಮ್ಮ ಸರಕಾರದ ಸಾಧನೆಯ ರಿಪೋರ್ಟ್ ಕಾರ್ಡ್ ಸಲ್ಲಿಕೆ ಮಾಡುವುದು ಬೊಮ್ಮಾಯಿ ಅವರ ಉದ್ದೇಶ. ಇದರ ಜತೆಗೆ ಸಂಪುಟ ವಿಸ್ತರಣೆ ಬಗ್ಗೆ ಪ್ರಾಸಂಗಿಕವಾಗಿ ಮಾತನಾಡುವ ಉದ್ದೇಶವನ್ನು ಅವರು ಹೊಂದಿದ್ದಾರೆ. ಆದರೆ ಪ್ರಧಾನಿ ಹಾಗೂ ಪಕ್ಷದ ವರಿಷ್ಠರಿಂದ ಇನ್ನೂ ಭೇಟಿಗೆ ಸಮಯ ನೀಡದೇ ಇರುವುದರಿಂದ ಸಿಎಂ ದಿಲ್ಲಿ ಪ್ರವಾಸ ಇನ್ನೂ ತೂಗುಯ್ಯಾಲೆಯಲ್ಲೇ ಇದೆ.
ಆರ್ ಟಿ ನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಬುಧವಾರ ಬೆಳಗ್ಗೆ ಮಾತನಾಡಿದ ಸಿಎಂ,ರಾಜ್ಯ ಬಜೆಟ್ ಮಂಡನೆಯ ಮುಂಚೆ ವಾಡಿಕೆಯಂತೆ ಎಲ್ಲಾ ಸಂಸದರನ್ನು ಭೇಟಿಯಾಗುವುದು ಕ್ರಮ, ದೆಹಲಿಗೆ ಹೋಗಲು ನಿರ್ಧರಿಸಿದ್ದೇನೆ. ಜಲ ವಿವಾದಗಳ ಕುರಿತು ಅಂತರ್ ರಾಜ್ಯ ವಕೀಲರನ್ನು ಕೂಡ ಭೇಟಿಯಾಗಲಿದ್ದೇನೆ. ಸಮಯ ನಿಗದಿ ಮಾಡಿಕೊಳ್ಳಲಾಗುತ್ತಿದೆ. ಬಹುತೇಕ ನಾಳೆ ಬೆಳಗ್ಗೆ ದೆಹಲಿ ಗೆ ಹೋಗುವ ಸಾಧ್ಯತೆ ಇದೆ ಎಂದರು.
ಸಂಪುಟ ಪುನರ್ ರಚನೆಯ ಕುರಿತು ಬಹಿರಂಗ ಚರ್ಚೆ ಮಾಡುವುದಿಲ್ಲ ಎಂದರು.
ವಿಜಯೇಂದ್ರ ಸಮಸ್ಯೆ ?
ಬಿಜೆಪಿ ಮೂಲಗಳ ಪ್ರಕಾರ ಯಾವ ಕ್ಷಣದಲ್ಲಿ ಬೇಕಾದರೂ ಸಂಪುಟ ವಿಸ್ತರಣೆಗೆ ಸಿಎಂ ಸಿದ್ದರಿದ್ದಾರೆ. ಆದರೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಸಂಪುಟಕ್ಕೆ ಸರ‍್ಪಡೆ ಮಾಡಿಕೊಳ್ಳುವ ವಿಚಾರ ಪ್ರಕ್ರಿಯೆಯನ್ನು ನಿಧಾನಗೊಳಿಸಿದೆ. ತಮ್ಮ ಪುತ್ರನಿಗೆ ಸಂಪುಟದಲ್ಲಿ ಅವಕಾಶ ನೀಡಲೇಬೇಕೆಂದು ಯಡಿಯೂರಪ್ಪ ಪಟ್ಟು ಹಿಡಿದಿದ್ದಾರೆ. ಆದರೆ ಪಕ್ಷದ ಕಡೆಯಿಂದ ಇದಕ್ಕೆ ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.
ಇದರ ಮಧ್ಯೆ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಅನೇಕ ಹಿರಿಯರಿಂದಲೂ ವಿಜಯೇಂದ್ರ ಸಂಪುಟ ಸೇರ್ಪಡೆಗೆ ವಿರೋಧವಿದೆ. ಆದರೆ ಯತ್ನಾಳ್ ರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಕ್ಕೆ ಸಿಎಂ ಮುಕ್ತ ಮನಸ್ಸಿನಿಂದ ಇದ್ದಾರೆ. ಹೀಗಾಗಿ ಪಕ್ಷದೊಳಗಿನ ಎರಡು ಬಣಗಳ ಸಮನ್ವಯ ಈಗ ಬೊಮ್ಮಾಯಿ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಹೀಗಾಗಿ ಬೊಮ್ಮಾಯಿ ಅವರ ದಿಲ್ಲಿ ಭೇಟಿ ಸಾಕಷ್ಟು ಕುತೂಹಲ ಸೃಷ್ಟಿಸಿದೆ.
ಆಕಾಂಕ್ಷಿಗಳು ಯಾರು ?
ಸಚಿವ ಸ್ಥಾನಕ್ಕೆ ಬಿಜೆಪಿಯಲ್ಲಿ ಆಕಾಂಕ್ಷಿಗಳ ಪಟ್ಟಿಯೇ ಇದೆ. ಬಸನಗೌಡ ಪಾಟೀಲ್ ಯತ್ನಾಳ್, ವಿಜಯೇಂದ್ರ, ಅರವಿಂದ ಬೆಲ್ಲದ್, ರೇಣುಕಾಚಾರ್ಯ, ರಾಜುಗೌಡ, ಪೂರ್ಣಿಮಾ ಸೇರಿದಂತೆ ಹಲವಾರು ಅಪೇಕ್ಷಿತರು ಇದ್ದಾರೆ. ಎಲ್ಲರಿಗೂ ಅವಕಾಶ ಕಲ್ಪಿಸಬೇಕಿದ್ದರೆ ಸಂಪುಟ ಪುನಾರಚನೆಯೇ ಆಗಬೇಕಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.