ಸಿಎಂ ಸಾವಂತ್ ಗೆ ಸರಳ ಬಹುಮತದ ವಿಶ್ವಾಸ ; ಪಾರ್ಸೇಕರ್ ಸವಾಲು
Team Udayavani, Jan 27, 2022, 7:26 PM IST
ಪಣಜಿ: ರಾಜ್ಯದ ಎಲ್ಲ 40 ಕ್ಷೇತ್ರಗಳಲ್ಲಿ ಬಿಜೆಪಿಯು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು 22 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸುಲಭವಾಗಿ ಜಯ ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಾಖಳಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಾವಂತ್ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಗೋವಾ ಚುನಾವಣಾ ಪ್ರಭಾರಿ ದೇವೇಂದ್ರ ಫಡ್ನವೀಸ್ ಮತ್ತು ರಾಜೇಶ್ ಪಾಟ್ನೇಕರ್ ಉಪಸ್ಥಿತರಿದ್ದರು.
ಸಾಖಳಿ ಕ್ಷೇತ್ರದಲ್ಲಿ ಜನತೆ ಪ್ರಸಕ್ತ ಬಾರಿ ಮತ್ತೆ ನನ್ನನ್ನು ಆಶೀರ್ವದಿಸಲಿದ್ದಾರೆ. ಪ್ರಸಕ್ತ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದರು.
ಒತ್ತಡಕ್ಕೆ ಮಣಿಯುವುದಿಲ್ಲ
ನಾನು ಚುನಾವಣೆಯಲ್ಲಿ ಸ್ಫರ್ಧಿಸಲು ತೀರ್ಮಾನಿಸಿದ್ದೇನೆ. ನನ್ನ ಜೊತೆ ಚರ್ಚೆಗೆ ಬರುವವರು ಬರಲಿ ಚರ್ಚೆಗೆ ಸಿದ್ಧನಿದ್ದೇನೆ. ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಲಕ್ಷ್ಮೀಕಾಂತ ಪಾರ್ಸೇಕರ್ ಹೇಳಿದ್ದಾರೆ.
ಇದನ್ನೂ ಓದಿ : ವಿಧಾನಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಉತ್ಪಲ್ ಪರ್ರಿಕರ್
ಬಿಜೆಪಿಯಿಂದ ಟಿಕೆಟ್ ಲಭಿಸದ ಕಾರಣ ಪಾರ್ಸೇಕರ್ ಮಾಂದ್ರೆ ಕ್ಷೇತ್ರದಿಂದ ಪಕ್ಷೇತರರಾಗಿ ಕಣಕ್ಕಿಳಿದಿದ್ದು ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇದುವರೆಗೂ ನನ್ನೊಂದಿಗೆ ಯಾರೂ ಚರ್ಚೆಗೆ ಬಂದಿಲ್ಲ. ಬರಲಿಚ್ಛಿಸುವವರು ನೇರವಾಗಿ ಚರ್ಚೆಗೆ ಬರಲಿ ಎಂದು ಬಿಜೆಪಿ ನಾಯಕರಿಗೆ ಸವಾಲೆಸೆದಿದ್ದಾರೆ. ಮುಖ್ಯಮಂತ್ರಿ ಅಥವಾ ಸಚಿವನಾಗಲು ನನಗೆ ಟಿಕೆಟ್ ಬೇಡ. ಹಾಗಾಗಿ ಬಿಜೆಪಿಗೆ ಮತ್ತೆ ಸೇರುವ ಪ್ರಶ್ನೆಯೇ ಉಧ್ಭವಿಸುವುದಿಲ್ಲ. ಪಕ್ಷಕ್ಕಾಗಿ ಇಲ್ಲಿಯ ವರೆಗೆ ಸಾಕಷ್ಟು ಕೆಲಸ ಮಾಡಿದ್ದೇನೆ. ಇನ್ನು ಮುಂದೆಯೂ ಜನಪರ ಕೆಲಸ ಮಾಡುತ್ತೇನೆ. ಎಂದು ಹೇಳುವ ಮೂಲಕ ಬಿಜೆಪಿ ನಾಯಕರು ತನ್ನ ಮನವೊಲಿಸುವ ಎಲ್ಲಾ ಸಾಧ್ಯತೆಗಳನ್ನು ಪಾರ್ಸೇಕರ್ ತಳ್ಳಿಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.