Bhagwant Khooba: ವೈಫಲ್ಯ ಮುಚ್ಚಿಕೊಳ್ಳಲು ಸಿಎಂ ಯತ್ನ- ಭಗವಂತ ಖೂಬಾ
Team Udayavani, Jun 20, 2023, 7:57 AM IST
ಬೀದರ್: ಅಕ್ಕಿ ವಿತರಣೆ ಗ್ಯಾರಂಟಿ ಯೋಜನೆ ಜಾರಿ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರಕಾರದತ್ತ ಬೊಟ್ಟು ಮಾಡಿ ತಮ್ಮ ಸರಕಾರದ ವೈಫಲ್ಯವನ್ನು ಮುಚ್ಚಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 2013ರಲ್ಲಿ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರಿಗೆ ಕೇಂದ್ರದಲ್ಲಿದ್ದ ತಮ್ಮದೇ ಯುಪಿಎ ಸರಕಾರ ಅಕ್ಕಿ ಪೂರೈಕೆಗೆ ನಿರಾಕರಿಸಿತ್ತು ಎಂಬುದನ್ನು ಅವರು ಮರೆತಿದ್ದಾರೆ. ಐದು ಗ್ಯಾರಂಟಿಗಳ ಹೆಸರಿನಲ್ಲಿ ಜನರಿಗೆ ಮೋಸ ಮಾಡಿ ಮತ ಪಡೆದು ಅ ಧಿಕಾರಕ್ಕೆ ಬಂದಿದ್ದೇವೆ ಹಾಗೂ ಷರತ್ತು ರಹಿತವಾಗಿ ಯೋಜನೆಗಳನ್ನು ಜಾರಿಗೊಳಿಸಲು ಆಗುವುದಿಲ್ಲ ಎಂಬುದು ಸಿಎಂಗೆ ಗೊತ್ತಾಗಿದೆ. ಹಾಗಾಗಿ ನಿತ್ಯ ಹೊಸ ಸಬೂಬು ಹೇಳುತ್ತಿದ್ದಾರೆ. ಕೇಂದ್ರ ಸರಕಾರ ಈಗಾಗಲೇ 5 ಕೆ.ಜಿ. ಅಕ್ಕಿ ಪೂರೈಸುತ್ತಿದ್ದು, ಈಗ ಕಾಂಗ್ರೆಸ್ ಸರಕಾರ ನೀಡಿದ ಆಶ್ವಾಸನೆಯಂತೆ ಹೆಚ್ಚುವರಿ 10 ಕೆ.ಜಿ. ಅಕ್ಕಿಯನ್ನು ನೀಡಬೇಕು ಎಂದರು.
ದ್ವೇಷ ಭಾವನೆ ಮತ್ತು ರಾಜಕೀಯ ಉದ್ದೇಶದಿಂದ ಹಿಂದೆ ಬಿಜೆಪಿ ಸರಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆ, ಗೋ ಹತ್ಯೆ ತಡೆ ಕಾಯ್ದೆ ರದ್ದು ಹಾಗೂ ಪಠ್ಯಕ್ರಮ ಪರಿಷ್ಕರಣೆಗೆ ಕಾಂಗ್ರೆಸ್ ಸರಕಾರ ಮುಂದಾಗಿದೆ. ಮುಂದಿನ ದಿನಗಳಲ್ಲಿ ಸರಕಾರಕ್ಕೆ ಜನರೇ ಛೀಮಾರಿ ಹಾಕುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.