ಲಾೖಲ ಸ್ನೇಕ ಅಶೋಕ್‌ಗೆ ನಾಗರ ಹಾವು ಕಡಿತ: ಪ್ರಾಣಾಪಾಯದಿಂದ ಪಾರಾದ ಆಶೋಕ್
Team Udayavani, Mar 27, 2023, 5:04 AM IST
ಬೆಳ್ತಂಗಡಿ: ವಿಷಪೂರಿತ ಹಾವುಗಳನ್ನು ಹಿಡಿದು ಸಂರಕ್ಷಣೆ ಮಾಡುತ್ತಿರುವ ಲಾೖಲದ ಸ್ನೇಕ ಅಶೋಕ್ ಅವರಿಗೆ ನಾಗರ ಹಾವು ಹಿಡಿಯುವ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ತಿಳಿದುಬಂದಿದೆ. ಧರ್ಮಸ್ಥಳ ಗ್ರಾಮದಲ್ಲಿನ ಮನೆಯೊಂದರಲ್ಲಿ ನಾಗರ ಹಾವು ಇರುವುದಾಗಿ ಸ್ನೇಕ್ ಅಶೋಕ್ ಅವರಿಗೆ ಮಾಹಿತಿ ಬಂದಿತ್ತು. ಇದರ ರಕ್ಷಣೆಗೆ ತಕ್ಷಣ ಹೊರಟ ಅವರು ನಾಗರ ಹಾವನ್ನು ಹಿಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದೆ ಎನ್ನಲಾಗುತ್ತಿದೆ.
ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.