ರಾಮದಾಸ್, ಸಿಂಹ ಕೋಲ್ಡ್ ವಾರ್ : ಮೈಸೂರು ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ
ವಿಧಾನಸೌಧದ ವಾಸ್ತು ಸರಿ ಇಲ್ಲವೇ ?
Team Udayavani, Jan 27, 2022, 4:55 PM IST
ಮೈಸೂರು : ಸಂಸದ ಪ್ರತಾಪ್‌ಸಿಂಹ ಮತ್ತು ಶಾಸಕ ಎಸ್.ಎ.ರಾಮದಾಸ್ ನಡುವೆ ಶೀತಲ ಸಮರ ಮುಂದುವರೆದಿದೆ. ಮನೆಮನೆಗೆ ಗ್ಯಾಸ್ ಸಂಪರ್ಕ ಯೋಜನೆಗೆ ಅನುಮತಿ ನೀಡದಂತೆ ಶಾಸಕ ರಾಮದಾಸ್ ಪತ್ರ ಬರೆದಿರುವುದಕ್ಕೆ ಪ್ರತಾಪ ಸಿಂಹ ಕೆಂಡಾಮಂಡಲರಾಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ, ರಾಮದಾಸ್ ಮೋದಿಗಿಂತ ಸೀನಿಯರ್.ಅವರಿಗಿಂತ ಬುದ್ದಿವಂತರು ಜ್ಞಾನಿಗಳು.ಕೇವಲ ಬ್ಯಾನರ್ ಅಲ್ಲಿ ಮೋದಿ ಪೋಟೋ ಹಾಕಿಕೊಂಡು ಉತ್ಸವ ಮಾಡಿದರೆ ಆಗುವುದಿಲ್ಲ.ಮೋದಿ ಯೋಜನೆಗಳನ್ನು ವಿರೋಧಿಸಿದರೆ ಜನ ಪಾಠ ಕಲಿಸುತ್ತಾರೆ ಎಂದರು.
ಯೋಜನೆಯನ್ನು ಕಾಂಗ್ರೆಸ್ ಜೆಡಿಎಸ್ ಶಾಸಕರು ವಿರೋಧಿಸಿಲ್ಲ. ನಮ್ಮದೇ ಪಕ್ಷದ ಶಾಸಕರು ವಿರೋಧಿಸಿದ್ದಾರೆ. ಅವರನ್ನು ತಾಯಿ ಚಾಮುಂಡೇಶ್ವರಿ, ಮೈಸೂರಿನ ಜನ ನೋಡಿಕೊಳ್ಳುತ್ತಾರೆ. ಈ ರೀತಿ ಚಿಲ್ಲರೆ ರಾಜಕಾರಣ ಮಾಡಬೇಡಿ. ಇದ್ಯಾವುದಕ್ಕೂ ನಾನು ಕೇರ್ ಮಾಡುವುದಿಲ್ಲ ಎಂದಿದ್ದಾರೆ.
ಕೆ.ಆರ್.ಕ್ಷೇತ್ರದ ಕಸವನ್ನ ಎತ್ತಿಸೋದು ನಾನೆ.ಈ ಯೋಜನೆಯನ್ನೂ ನಾನೆ ಪೂರ್ಣ ಮಾಡುತ್ತೇನೆ. ಯಾವುದಕ್ಕೂ ನಾನು ಕೇರ್ ಮಾಡುವುದಿಲ್ಲ. ಎಂದು ಶಾಸಕ ರಾಮದಾಸ್ ಅವರಿಗೆ ಪ್ರತಾಪ್‌ಸಿಂಹ ತಿರುಗೇಟು ನೀಡಿದ್ದಾರೆ.
ವಿಧಾನಸೌಧದ ವಾಸ್ತು ಸರಿ ಇಲ್ಲ!
ಸ್ಥಳೀಯರಿಗೆ ಸಚಿವ ಸ್ಥಾನ ನೀಡಲು ದನಿಗೂಡಿಸದ ಆರೋಪಕ್ಕೆ ಪ್ರತಿಕ್ರಿಯಿಸಿದ ಸಂಸದ ಸಿಂಹ, ನಾನು ಈಗಾಗಲೇ ಹೇಳಿರುವಂತೆ ವಿಧಾನಸೌಧದ ವಾಸ್ತು ಸರಿ ಇಲ್ಲ.ಗೆದ್ದ 224 ಮಂದಿ ಶಾಸಕರೆಲ್ಲಾ ನಾನು ಮಂತ್ರಿ ಆಗ್ಬೇಕು ಅಂತ ಬಯಸ್ತಾರೆ. ಆದರೆ ಕೇಂದ್ರ, ರಾಜ್ಯ ನಾಯಕರು ತೀರ್ಮಾನ ಮಾಡಿ ಮಂತ್ರಿ ಮಾಡುತ್ತಾರೆ. ಸ್ಥಳೀಯರಿಗೆ ಸಚಿವ ಸ್ಥಾನ ನೀಡಬೇಕಾ ಬೇಡವ ಅನ್ನೋದನ್ನ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.