Udupi: ಬ್ಲ್ಯಾಕ್‌ ಸ್ಪಾಟ್‌ ಸ್ಥಳಗಳನ್ನು ಅಪಘಾತ ಮುಕ್ತ ವಲಯವಾಗಿಸಲು ಜಿಲ್ಲಾಧಿಕಾರಿ ಸೂಚನೆ


Team Udayavani, Oct 30, 2024, 12:45 AM IST

Udupi: ಬ್ಲ್ಯಾಕ್‌ ಸ್ಪಾಟ್‌ ಸ್ಥಳಗಳನ್ನು ಅಪಘಾತ ಮುಕ್ತ ವಲಯವಾಗಿಸಲು ಜಿಲ್ಲಾಧಿಕಾರಿ ಸೂಚನೆ

ಮಣಿಪಾಲ: ಜಿಲ್ಲೆಯ ರಸ್ತೆಗಳಲ್ಲಿ ಹೆಚ್ಚು ಅಪಘಾತವಾಗುವ ವಲಯಗಳನ್ನು ಗುರುತಿಸಿದ್ದು, ಈ ಸ್ಥಳಗಳಲ್ಲಿ ಅಪಘಾತ ತಡೆಗಟ್ಟಲು ಆದ್ಯತೆ ಮೇರೆಗೆ ವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ನಡೆಸಿ ಅಪಘಾತ ಮುಕ್ತ ವಲಯಗಳನ್ನಾಗಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 2020ರಿಂದ 2022ರ ವರೆಗೆ ರಾ.ಹೆ.ಗಳಲ್ಲಿ ಹೆಚ್ಚು ಅಪಘಾತವಾದ ಸ್ಥಳಗಳನ್ನು 20 ಬ್ಲ್ಯಾಕ್‌ ಸ್ಪಾಟ್‌ಗಳನ್ನಾಗಿ ಗುರುತಿಸಲಾಗಿದೆ. ಈ ಸ್ಥಳಗಳಲ್ಲಿ ಸುರಕ್ಷತ ನಿರ್ವಹಣೆ ಕಾಮಗಾರಿಗಳಾದ ಕಪ್ಪುಚುಕ್ಕೆ ಸ್ಥಳಗಳಲ್ಲಿ ಪಾದಚಾರಿಗಳ ಕ್ರಾಸಿಂಗ್‌ ಹಾಗೂ ಜೀಬ್ರಾ ಕ್ರಾಸಿಂಗ್‌, ಸೂಚನ ಫ‌ಲಕಗಳು, ಹೈಮಾಸ್ಟ್‌ ದೀಪಗಳು, ಬ್ಲಿಂಕರ್ಗಳು, ರಸ್ತೆ ಬದಿಯಲ್ಲಿ ಮೆಟಲ್‌ ಕ್ರಾಸ್‌ ಬ್ಯಾರಿಯರ್, ಹೆದ್ದಾರಿ ಸಂಪರ್ಕಿಸುವ ರಸ್ತೆಗಳಿಗೆ ಹಂಪ್ಸ್‌, ಫ‌ೂಟ್‌ಓವರ್‌ ಬ್ರಿಡ್ಜ್, ಕೆಲವು ಸ್ಥಳಗಳಲ್ಲಿ ಮಳೆಯ ನೀರು ಸರಾಗವಾಗಿ ಹರಿದು ಹೋಗಲು ಒಳಚರಂಡಿ, ಎಂ.ಎಸ್‌. ರೈಲಿಂಗ್ಸ್‌ ಕಾಮಗಾರಿ ಕೈಗೊಳ್ಳಲು ಆವಶ್ಯಕತೆಗಳಿದ್ದು, ಇವುಗಳನ್ನು ಆದ್ಯತೆಯ ಮೇಲೆ ಶೀಘ್ರವಾಗಿ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ವಾಹನ ಸವಾರರು ಸಾರ್ವಜನಿಕ ರಸ್ತೆಯಲ್ಲಿ ಚಲಿಸುವಾಗ ತಪ್ಪದೇ ರಸ್ತೆ ಸುರಕ್ಷತ ನಿಯಮಗಳನ್ನು ಪಾಲಿಸಿದ್ದಲ್ಲಿ ಹಾಗೂ ವೇಗಮಿತಿಯೊಳಗೆ ಸುಗಮವಾಗಿ ಸಂಚರಿಸಿದ್ದಲ್ಲಿ ಮಾತ್ರ ಅಪಘಾತ ತಪ್ಪಿಸಲು ಸಾಧ್ಯ. ಇದಕ್ಕೆ ಸಾರ್ವಜನಿಕರು ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ರಸ್ತೆಗಳಿಗೆ ಹಂಪ್ಸ್‌ಗಳನ್ನು ಅಳವಡಿಸುವಾಗ ವೈಜ್ಞಾನಿಕ ಕ್ರಮಗಳನ್ನು ತೆಗೆದುಕೊಳ್ಳಬೇಕು. ರಾ.ಹೆ. ಕಾಮಗಾರಿಗಳನ್ನು ಕೈಗೊಳ್ಳುವ ಮುನ್ನ ಜನರ ಹಾಗೂ ವಾಹನಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ತಾತ್ಕಾಲಿಕವಾಗಿ ರಸ್ತೆ ನೀಡಬೇಕು ಎಂದರು.

ಕುಂದಾಪುರ ಘಟಕದಿಂದ ಹೊರಡುವ ಗ್ರಾಮೀಣ ಸಾರಿಗೆ ಕೆಎಸ್ಸಾರ್ಟಿಸಿ ಬಸ್‌ಗಳು ರಾ.ಹೆ.ಬದಿಯಲ್ಲಿ ಪ್ರಯಾಣಿಕರನ್ನು ಇಳಿಸಬಾರದು. ಬಸ್‌ ನಿಲ್ದಾಣದಲ್ಲಿಯೇ ಪ್ರಯಾಣಿಕರನ್ನು ಇಳಿಸುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ವಿವಿಧ ಪೋಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳಲ್ಲಿ ಅಗತ್ಯವಿರುವ ಸುರಕ್ಷಾ ಕ್ರಮ ಕೈಗೊಳ್ಳಲು ರಾಜ್ಯ ರಸ್ತೆ ಸುರಕ್ಷಾ ಪ್ರಾಧಿಕಾರ ಕ್ರಿಯಾ ಯೋಜನೆಯಡಿ ನೀಡಿರುವ ಅನುದಾನವನ್ನು ಸಮರ್ಪಕವಾಗಿ ಬಳಸುವುದರೊಂದಿಗೆ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ., ರಾ.ಹೆ. ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್‌ ಅಜ್ಮಿ, ಲೋಕೋಪಯೋಗಿ ಇಲಾಖೆಯ ತಾಂತ್ರಿಕ ಸಹಾಯಕಿ ಜೆ.ಜಿ. ಶಾಂತಲಾ, ಪೌರಾಯುಕ್ತ ರಾಯಪ್ಪ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್‌ ಬಿ. ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.