ಒಳಮೀಸಲಾತಿ ಪರಿಶೀಲನೆಗೆ ಸಮಿತಿ: ಸಿಎಂ ಬೊಮ್ಮಾಯಿ ಜಾಣ್ಮೆಯ ಹೆಜ್ಜೆ
Team Udayavani, Dec 14, 2022, 6:48 AM IST
ಬೆಂಗಳೂರು: ಒಳಮೀಸಲಾತಿಗೆ ಸಂಬಂಧಿಸಿದ ನ್ಯಾ| ಎ.ಜೆ. ಸದಾಶಿವ ವರದಿ ಜಾರಿಗೆ ದಲಿತ ಸಂಘಟನೆಗಳ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಒಳ ಮೀಸಲಾತಿ ಕುರಿತು ಪರಿಶೀಲಿಸಿ ಸೂಕ್ತ ಶಿಫಾರಸುಗಳನ್ನು ಮಾಡಲು ರಾಜ್ಯ ಸರಕಾರ ಸಚಿವ ಸಂಪುಟದ ಉಪಸಮಿತಿ ರಚಿಸಿದೆ.
ಕಾಂಗ್ರೆಸ್ ಪಕ್ಷವು ಒಳಮೀಸಲಾತಿ ವಿಚಾರ ಮುಂದಿಟ್ಟು ಕೊಂಡು ಬಿಜೆಪಿಯನ್ನು ಹಣಿಯಲು ಕಾರ್ಯತಂತ್ರ ರೂಪಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಉಪಸಮಿತಿ ರಚನೆ ಮೂಲಕ ಜಾಣ್ಮೆಯ ಹೆಜ್ಜೆ ಇರಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ಗೆ ರಾಜಕೀಯವಾಗಿ ತಿರುಗೇಟು ನೀಡಿದ್ದಾರೆ.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಾಲ್ವರು ಸಚಿವರನ್ನೊಳಗೊಂಡ ಉಪ ಸಮಿತಿ ರಚಿಸಲಾಗಿದೆ. ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ, ಮೀನುಗಾರಿಕೆ ಸಚಿವ ಎಸ್. ಅಂಗಾರ, ಪಶು ಸಂಗೋಪನ ಸಚಿವ ಪ್ರಭು ಚವ್ಹಾಣ್, ಆರೋಗ್ಯ ಸಚಿವ ಡಾ| ಸುಧಾಕರ್ ಉಪ ಸಮಿತಿಯಲ್ಲಿ ಇದ್ದಾರೆ.
ಪರಿಶಿಷ್ಟ ಜಾತಿಗಳ ವರ್ಗೀಕರಣ (ಒಳ ಮೀಸಲಾತಿ)ಕುರಿತು ಪರಿಶೀಲಿಸಿ ಸೂಕ್ತ ಶಿಫಾರಸುಗಳನ್ನು ಮಾಡಲು ಸಚಿವ ಸಂಪುಟದ ಉಪಸಮಿತಿ ರಚಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಈ ಸಚಿವ ಸಂಪುಟ ಉಪ ಸಮಿತಿಗೆ ಅಗತ್ಯ ನೆರವು ನೀಡಬೇಕು ಎಂದು ಸಚಿವ ಸಂಪುಟದ ಜಂಟಿ ಕಾರ್ಯದರ್ಶಿ ಆರ್. ಚಂದ್ರಶೇಖರ್ ಅಧಿಸೂಚನೆ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.